ಪಿಡಿಒ ಕೇಂದ್ರ ಸ್ಥಾನದಲ್ಲೇ ಇರಲಿ
•ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ•ಕಚೇರಿಗಳಲ್ಲಿ ಶೌಚಾಲಯ ನಿರ್ಮಿಸಿ
Team Udayavani, Jun 16, 2019, 11:44 AM IST
ಯಲಬುರ್ಗಾ: ತಾಪಂ ಸಭಾಭವನದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಅಧ್ಯಕ್ಷ ಎಚ್. ವಿಶ್ವನಾಥರಡ್ಡಿ ಮಾತನಾಡಿದರು.
ಯಲಬುರ್ಗಾ: ಪಿಡಿಒಗಳು ಕಡ್ಡಾಯವಾಗಿ ಕಾರ್ಯ ನಿರ್ವಹಿಸುವ ಗ್ರಾಪಂ ಕೇಂದ್ರ ಸ್ಥಾನದಲ್ಲಿ ವಾಸಿಸಬೇಕು ಹಾಗೂ ಗ್ರಾಪಂ ರಿಜಿಸ್ಟರ್ ಪುಸ್ತಕದಲ್ಲಿ ತಮ್ಮ ನಿತ್ಯ ದಿನಚರಿ ಬರೆಯುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷ ಎಚ್. ವಿಶ್ವನಾಥರಡ್ಡಿ ಪಿಡಿಒಗಳಿಗೆ ಸೂಚಿಸಿದರು.ಎಚ್. ವಿಶ್ವನಾಥರಡ್ಡಿ ಎಚ್. ವಿಶ್ವನಾಥರಡ್ಡಿ
ಪಟ್ಟಣದ ತಾಪಂ ಸಭಾಭವನದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಿಡಿಒಗಳು ತಮ್ಮ ಹೊಣೆಗಾರಿಕೆಯನ್ನು ಅರಿತು ಕಾರ್ಯನಿರ್ವಹಿಸಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಮುಂದಾಗಿ ಎಂದರು.
ತಾಲೂಕಿನಲ್ಲಿ ಕುಡಿಯುವ ನೀರು ಪೂರೈಕೆ ಮಾಡಿದ ಟ್ಯಾಂಕರ್ ಮಾಲೀಕರಿಗೆ ಹಾಗೂ ಖಾಸಗಿ ಬೋರ್‌ವೆಲ್ ಮಾಲೀಕರಿಗೆ ವಿಳಂಬ ಮಾಡದೇ ಬಿಲ್ ಪಾವತಿ ಮಾಡುವಂತೆ ತಹಸೀಲ್ದಾರ್ ಅವರಿಗೆ ಸೂಚಿಸಿದರು.
ಪಿಡಿಒಗೆ ನೋಟಿಸ್ ನೀಡಿ: ತಾಳಕೇರಿ ಗ್ರಾಮದಲ್ಲಿ ವಿಪರೀತ ನೀರಿನ ಸಮಸ್ಯೆ ಉದ್ಭವಿಸಿದೆ. ಪರಿಹಾರಕ್ಕೆ ಗ್ರಾಪಂ ಆಡಳಿತ ಮುಂದಾಗಿಲ್ಲ ಸಭೆ ನಡೆಯುವುದು ಗೊತ್ತಿದ್ದರೂ ಸಭೆಗೆ ಆಗಮಿಸಿಲ್ಲ ಆದರಿಂದ ಅವರಿಗೆ ನೋಟಿಸ್ ನೀಡುವಂತೆ ತಾಪಂ ಇಒ ಡಿ. ಮೋಹನಗೆ ಸೂಚಿಸಿದರು.
ಜಿಪಂ ಸದಸ್ಯ ಹನುಮಂತಗೌಡ ಪಾಟೀಲ ಮಾತನಾಡಿ, ಯರೇಹಂಚಿನಾಳ ಹಾಗೂ ಲಕಮಾಪುರ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಸಾಕಷ್ಟಿದೆ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಪಂ ಸದಸ್ಯರು ಹೇಳುವ ಕುಡಿವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಕಡ್ಡಾಯವಾಗಿ ಜಿಪಂ ಸದಸ್ಯರೊಂದಿಗೆ ಭೇಟಿ ನೀಡಿ ತುರ್ತಾಗಿ ಕುಡಿವ ನೀರಿನ ಸಮಸ್ಯೆ ಹೋಗಲಾಡಿಸಲು ಮುಂದಾಗಬೇಕು ಎಂದು ಕುಡಿಯುವ ನೀರು ನೈರ್ಮಲ್ಯ ಎಇಇ ತಿರುಕನಗೌಡ ಅವರಿಗೆ ಸೂಚಿಸಿದರು.
ಶಾಲೆಗೆ ಭೇಟಿ ನೀಡಿ: ಕ್ಷೇತ್ರ ಶಿಕ್ಷಣಾಧಿಕಾರಿ ತಾಲೂಕಿನ ಪ್ರತಿಯೊಂದು ಶಾಲೆಗಳಿಗೆ ಭೇಟಿ ನೀಡಿ ಸಮಸ್ಯೆ ಪರಿಹಾರಕ್ಕೆ ಮುಂದಾಗುವ ಕಾರ್ಯ ಮಾಡಿ ಎಂದು ಬಿಇಒ ಶರಣಪ್ಪ ವಟಗಲ್ ಅವರಿಗೆ ಸೂಚಿಸಿದರು.
ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರುದ್ರಪ್ಪ ಮರಕಟ್ ಮಾತನಾಡಿ, ಬೋದೂರು ಗ್ರಾಮದಲ್ಲಿ ಶಾಲೆಯಲ್ಲಿ ಬಿಸಿಯೂಟ ತಯಾರಿಸಲು ಕುಡಿವ ನೀರಿನ ಸಮಸ್ಯೆ ಇದೆ. ಹೀಗಾಗಿ ಬಿಸಿಯೂಟ ತಯಾರಿಸಲು ತೊಂದರೆಯಾಗುತ್ತಿದೆ ಎಂದರು. ಬೋದೂರು ಶಾಲೆಯಲ್ಲಿ ಕುಡಿವ ನೀರಿನ ಸಮಸ್ಯೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಬಿಇಒ ಹೇಳುತ್ತಿದ್ದಂತೆ ಜಿಪಂ ಅಧ್ಯಕ್ಷರು ಬಿಇಒ ಅವರನ್ನು ತೀವ್ರವಾಗಿ ತರಾಟೆ ತೆಗೆದುಕೊಂಡರು. 14ನೇ ಹಣಕಾಸು ಯೋಜನೆ ಕ್ರಿಯಾಯೋಜನೆಗೆ ತಾಲೂಕಿನ 36 ಗ್ರಾಪಂಗಳ ಪೈಕಿ ಒಂದೇ ಗ್ರಾಪಂನವರು ಅನುಮೋದನೆ ಪಡೆದಿದ್ದಾರೆ. ಉಳಿದ ಗ್ರಾಪಂನವರು ಕ್ರಿಯಾಯೋಜನೆ ತಯಾರಿಸಿಕೊಂಡು ಅನುಮೋದನೆ ಪಡೆದು ಕುಡಿವ ನೀರು ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯ ಮಾಡಲು ಮುಂದಾಗಿ ಎಂದು ಜಿಪಂ ಸಿಇಒ ಆರ್.ಎಸ್. ಪೆದ್ದಪ್ಪಯ್ಯ ಅವರು ಪಿಡಿಒಗಳಿಗೆ ಸೂಚಿಸಿದರು. ತಾಪಂ ಅಧ್ಯಕ್ಷೆ ಲಕ್ಷ್ಮೀ ಗೌಡ್ರ, ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ಜಿಪಂ ಸದಸ್ಯರಾದ ಪ್ರೇಮಾ ಕುಡಗುಂಟಿ, ನೀಲಮ್ಮ ಭಾವಿಮನಿ ಹಾಗೂ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.