ಕಾಸರಗೋಡು: ಸುಗಮ ವಾಹನ ಸಂಚಾರಕ್ಕೆ ಮತ್ತೆ ಅಡಚಣೆ
Team Udayavani, Jun 17, 2019, 5:27 AM IST
ಕಾಸರಗೋಡು: ಹಲವು ಸಮಸ್ಯೆಗಳ ಆಗರವಾಗಿರುವ ಕಾಸರಗೋಡಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ದಟ್ಟಣೆ ಹೆಚ್ಚುತ್ತಿದೆ. ವಾಹನ ದಟ್ಟಣೆ ಹೆಚ್ಚುತ್ತಿರುವಂತೆ ವಾಹನ ಅಪಘಾತವೂ ಮಿತಿ ಮೀರುತ್ತಿದೆ. ವಾಹನ ದಟ್ಟಣೆಯನ್ನು ಮತ್ತು ಅಪಘಾತಗಳನ್ನು ನಿಯಂತ್ರಿಸಲು ಕಾಸರಗೋಡು ನಗರದ ಅಲ್ಲಲ್ಲಿ ಅಳವಡಿಸಿದ ಟ್ರಾಫಿಕ್ ಸಿಗ್ನಲ್ ಬಲ್ಬ್ಗಳು ಬೆಳಗದೆ ಕೆಲವು ದಿನಗಳೇ ಕಳೆಯಿತು. ಇದರಿಂದ ಮತ್ತೆ ಸಮಸ್ಯೆಗೆ ಕಾರಣವಾಗಿದೆ.
ಟ್ರಾಫಿಕ್ ಸಿಗ್ನಲ್ ಕೈಕೊಟ್ಟ ಹಿನ್ನೆಲೆಯಲ್ಲಿ ಇದೀಗ ಮತ್ತೆ ವಾಹನ ಅಪಘಾತ ಸಾಮಾನ್ಯವಾಗಿದೆ. ಈ ಜಂಕ್ಷನ್‌ನಲ್ಲಿ ವಾಹನ ನಿಯಂತ್ರಣಕ್ಕೆ ಪೊಲೀಸರನ್ನು ನೇಮಿಸಲಾಗಿದೆ. ಆದರೆ ಪೊಲೀಸರಿಗೆ ಅಗತ್ಯದ ಸೌಲಭ್ಯಗಳನ್ನು ಕಲ್ಪಿಸಿಲ್ಲ.
ಇಲ್ಲಿ ಸಮರ್ಪಕವಾಗಿ ವಾಹನ ನಿಯಂತ್ರಣ ಸಾಧ್ಯವಾಗದೆ ಅಪಘಾñಗಳು ನಿತ್ಯ ಸಂಭವಿಸುತ್ತಿವೆ. ಹಲವಾರು ಮಂದಿ ಈಗಾಗಲೇ ವಾಹನ ಅಪಘಾತಕ್ಕೆ ತುತ್ತಾಗಿ ಗಾಯ ಗೊಂಡಿದ್ದು, ಆಸ್ಪತ್ರೆಗಳಿಗೆ ದಾಖಲುಗೊಂಡ ಪ್ರಸಂಗಗಳೂ ಇವೆ. ಈ ರಸ್ತೆಗೆ ಕಾಂಕ್ರೀಟ್ಕಾಮಗಾರಿ ಮಾಡಿರುವುದರಿಂದ ವಾಹನಗಳು ವೇಗವಾಗಿ ಚಲಿಸುತ್ತಿದ್ದು, ಇದರಿಂದಾಗಿ ರಸ್ತೆ ದಾಟುವವರಿಗೂ ಸಮಸ್ಯೆಯಾಗುತ್ತಿದೆ.
ರಸ್ತೆಯಲ್ಲಿ ಉದ್ದಕ್ಕೆ ವಾಹನಗಳ ಸರದಿ ಇರುವುದರಿಂದ ಒಂದು ಬದಿಯಿಂದ ಇನ್ನೊಂದು ಬದಿಗೆ ನಡೆದು ಹೋಗುವವರು ಸಾಗಲು ಸಾಧ್ಯವಾಗದೆ ಗೊಂದಲಕ್ಕೀಡಾಗುತ್ತಿದ್ದಾರೆ.
ಇದರಿಂದಾಗಿ ಕಕ್ಕಾಬಿಕ್ಕಿಯಾಗಿ ಅತ್ತಿತ್ತ ಓಡಾಡುವುದರಿಂದ ವಾಹನ ಚಾಲಕರಿಗೆ ಇವರ ಚಲನವಲನಗಳು ಅರಿವಿಗೆ ಬಾರದೆ ವಾಹನ ಅಪಘಾತಕ್ಕೆ ಕಾರಣವಾಗುತ್ತಿದೆ. ಇನ್ನಾದರೂ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಂಬಂಧಪಟ್ಟವರು ಕ್ರಮ ತೆಗೆದುಕೊಳ್ಳಬೇಕಾದುದು ಅನಿವಾರ್ಯ.0ಈ ಜಂಕ್ಷನ್‌ನಲ್ಲಿ ಪೊಲೀಸರನ್ನು ನೇಮಿಸಲಾಗಿದ್ದು, ಬೆಳಗ್ಗೆ 8 ರಿಂದ ಸಂಜೆ 6 ಗಂಟೆಯ ವರೆಗೆ ಇಲ್ಲಿ ಕರ್ತವ್ಯ ನಿರ್ವಹಿಸಬೇಕು. ಇಲ್ಲಿ ಒಬ್ಬರೆ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡ ಅವರ ಮೇಲೆ ಬೀಳುತ್ತಿದೆ.
ಇದರಿಂದ ಮತ್ತಷ್ಟು ಸಮಸ್ಯೆ ಸೃಷ್ಟಿಗೆ ಕಾರಣವಾಗುತ್ತಿದೆ. ಮಳೆಗಾಲ ಆರಂಭವಾಗಿರುವುದರಿಂದ ಪೊಲೀಸರಿಗೆ ರೈಲು ಕೋಟ್ ಕೂಡಾ ನೀಡಿಲ್ಲ. ಇದರಿಂದಾಗಿ ಪೊಲೀಸರು ಅನುಭವಿಸುತ್ತಿರುವ ಸಮಸ್ಯೆ ಅಷ್ಟಿಷ್ಟಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.