ದೇಶವ್ಯಾಪಿ ವೈದ್ಯರ ಮುಷ್ಕರ; ಕಿಮ್ಸ್, ನಿಮ್ಹಾನ್ಸ್ ಮುಂದೆ ರೋಗಿಗಳ ಪರದಾಟ
Team Udayavani, Jun 17, 2019, 10:16 AM IST
ಬೆಂಗಳೂರು: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಸ್ಥೆ(ಐಎಂಎ) ಕರೆ ನೀಡಿರುವ ದೇಶವ್ಯಾಪಿ ಮುಷ್ಕರದ ಕರೆಗೆ ಬೆಂಗಳೂರು, ಗದಗ, ಹುಬ್ಬಳ್ಳಿ, ಹಾಸನ ಸೇರಿದಂತೆ ರಾಜ್ಯದ ಹಲವೆಡೆ ವೈದ್ಯರು ಮುಷ್ಕರದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ರೋಗಿಗಳು ಪರದಾಡುವಂತಾಗಿದೆ.
ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಕಿಮ್ಸ್ ಆಸ್ಪತ್ರೆಯ ವೈದ್ಯರು ಸೇವೆಗೆ ಗೈರು ಹಾಜರಾಗಿದ್ದರಿಂದ ರೋಗಿಗಳು ಪರದಾಡುವಂತಾಗಿದೆ. ದೂರದ ಊರಿನಿಂದ ಬಂದ ರೋಗಿಗಳು ವೈದ್ಯರ ಪ್ರತಿಭಟನೆಯಿಂದಾಗಿ ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದ್ದಾರೆ.
ಪಶ್ಚಿಮಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಐಎಂಎ ಸೋಮವಾರ ದೇಶಾದ್ಯಂತ ತುರ್ತು ಸೇವೆಯನ್ನು ಹೊರತುಪಡಿಸಿ ಒಪಿಡಿ ಸೇರಿದಂತೆ ಎಲ್ಲಾ ಪ್ರಮುಖ ಸೇವೆಯನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುವಂತೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ವೈದ್ಯರು ಮುಷ್ಕರಕ್ಕೆ ಬೆಂಬಲ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.