ಅಂಚೆ ಇಲಾಖೆ ಗ್ರಾಹಕ ಸ್ನೇಹಿಯಾಗಲಿ

ಗ್ರಾಮೀಣ ಪ್ರದೇಶದ ಅಂಚೆ ಕಚೇರಿಗಳಿಗೆ ತಾಂತ್ರಿಕತೆ ಅಳವಡಿಕೆ: ಶಿವರಾಜ್‌ ಖೀಂಡಿಮಠ್

Team Udayavani, Jun 17, 2019, 12:49 PM IST

17-June-17

ಚಿತ್ರದುರ್ಗ: ದ್ವೈವಾರ್ಷಿಕ ಸಮ್ಮೇಳನವನ್ನು ಚಿತ್ರದುರ್ಗ ವಿಭಾಗದ ಅಂಚೆ ಅಧೀಕ್ಷಕ ಶಿವರಾಜ್‌ ಖೀಂಡಿಮಠ್ ಉದ್ಘಾಟಿಸಿದರು.

ಚಿತ್ರದುರ್ಗ: ಗ್ರಾಹಕರಿಗೆ ಗರಿಷ್ಠ ಸೇವೆ ಒದಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಅಂಚೆ ನೌಕರರು ಗ್ರಾಹಕರಿಗೆ ಅತ್ಯುತ್ತಮ ಸೇವೆ ಒದಗಿಸುವ ಮೂಲಕ ಗ್ರಾಹಕ ಸ್ನೇಹಿಯಾಗಬೇಕು ಎಂದು ಚಿತ್ರದುರ್ಗ ವಿಭಾಗದ ಅಂಚೆ ಅಧೀಕ್ಷಕ ಶಿವರಾಜ್‌ ಖೀಂಡಿಮs್ ಹೇಳಿದರು.

ನಗರದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಭಾನುವಾರ ಅಖೀಲ ಭಾರತ ಅಂಚೆ ನೌಕರರ ಸಂಘಗಳ ಮೂರನೇ ಹಾಗೂ ನಾಲ್ಕನೇ ವರ್ಗ, ಗ್ರಾಮೀಣ ಅಂಚೆ ನೌಕರರ ಸಂಘಗಳ 39ನೇ ಜಂಟಿ ದ್ವೈವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಚೆ ನೌಕರರು ಸರ್ಕಾರ ಹಾಗೂ ಗ್ರಾಹಕರ ಹಿತಕ್ಕೆ ಧಕ್ಕೆ ಉಂಟಾಗದಂತೆ ಕೆಲಸ ಮಾಡಬೇಕು. ಗ್ರಾಮೀಣ ಪ್ರದೇಶಗಳ ಅಂಚೆ ಕಚೇರಿಯಲ್ಲಿ ತಾಂತ್ರಿಕತೆ ಅಳವಡಿಸಲಾಗುತ್ತಿದ್ದು, ಅಂಚೆ ಇಲಾಖೆಗೆ ಆಧುನಿಕ ಯಂತ್ರೋಪಕರಣ ನೀಡಲಾಗಿದೆ ಎಂದರು.

ನೌಕರರ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಂಘಟನೆ ಪ್ರಮುಖವಾಗಿದೆ. ಸಂಘಟನೆ ಹೋರಾಟದ ಮೂಲಕ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ. ಹೀಗಾಗಿ ಯಾವುದೇ ಬೇಡಿಕೆ ಈಡೇರಿಸಿಕೊಳ್ಳಲು ಶಾಂತಿಯುತವಾಗಿ ನಡೆದುಕೊಳ್ಳಬೇಕಿದೆ. ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಮಾಡಿದ ಬಳಿಕ ನೌಕರರಿಗೆ ವೇತನ ಹೆಚ್ಚಳವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಂಚೆ ನೌಕರರ ಸಂಘದ ಕರ್ನಾಟಕ ವಲಯ ನಾಲ್ಕನೇ ವರ್ಗದ ವಲಯ ಕಾರ್ಯದರ್ಶಿ ಪಿ. ಮಲ್ಲಿಕಾರ್ಜುನ ಮಾತನಾಡಿ, ನಮ್ಮ ಸಂಘಟನೆಗೆ ದೊಡ್ಡ ಶಕ್ತಿ ಇದೆ. ಅಂಚೆ ನೌಕರರ ಸಮಸ್ಯೆಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ಸರ್ಕಾರ ಬದಲಾವಣೆಯಾದರೂ ಸಹ ನೌಕರರ ಬೇಡಿಕೆ ಈಡೇರಿಕೆಗೆ ಒಗ್ಗೂಡಿ ಕೆಲಸ ಮಾಡಬೇಕಿದೆ. ಸಂಘಟನೆ ಯಾವುದೇ ಪಕ್ಷದೊಂದಿಗೆ ವಿಲೀನವಾಗದೆ ರಾಜಕೀಯೇತರ ಸಂಘಟನೆಯಾಗಿದೆ ಎಂದರು.

ಗ್ರಾಮೀಣ ಭಾಗದ ಅಂಚೆ ನೌಕರರು ಸೇರಿದಂತೆ ಅಂಚೆ ಇಲಾಖೆಯ ಎಲ್ಲ ನೌಕರರ ಹಿತಕ್ಕಾಗಿ ಹೋರಾಟ ಅನಿವಾರ್ಯವಾಗಿದೆ. ಸಂಘಟಿತ ಹೋರಾಟ ಮಾಡಿದರೆ ನಮ್ಮೆಲ್ಲರ ಬೇಡಿಕೆ ಈಡೇರಲಿವೆ. ಯುವ ನೌಕರರು ಸಕ್ರಿಯವಾಗಿ ಹೋರಾಟಗಳಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅಂಚೆ ನೌಕರರ ಸಂಘದ ರಾಷ್ಟ್ರೀಯ ಕಾರ್ಯಧ್ಯಕ್ಷ ಜಿ. ಜಾನಕಿರಾಮ್‌, ಗ್ರಾಮೀಣ ಅಂಚೆ ನೌಕರರ ವಲಯ ಕಾರ್ಯದರ್ಶಿ ಬಿ.ಆರ್‌. ರಮೇಶ, ಅಖೀಲ ಭಾರತ ಅಂಚೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ. ವಿಜಯಕುಮಾರ್‌, ಕಾರ್ಯದರ್ಶಿ ಜಯಣ್ಣ, ಸಹ ಕಾರ್ಯದರ್ಶಿ ಮಹಮ್ಮದ್‌ ಷರೀಫ್‌, ಖಚಾಂಚಿ ಸತ್ಯಲಕ್ಷ್ಮೀ, ತಿಮ್ಮರಾಯಪ್ಪ, ಅವಿನಾಶ್‌, ಸುರೇಶ್‌, ಮಧುಸೂದನ್‌, ರಮೇಶ್‌, ರಂಗಸ್ವಾಮಿ, ತಿಮ್ಮಣ್ಣ, ಬಸವರಾಜಪ್ಪ ಇದ್ದರು.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.