ತಿಪ್ಪೆಗುಂಡಿ ಊರಿಂದಾಚೆ ಸ್ಥಳಾಂತರಿಸಲು ಸೂಚನೆ


Team Udayavani, Jun 17, 2019, 2:33 PM IST

hubali-tdy-4..

ಹಾವೇರಿ: ಜಿಪಂ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ ಗ್ರಾಮಸ್ಥರಿಗೆ ಸ್ವಚ್ಛತೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.

ಹಾವೇರಿ: ಗ್ರಾಮದೊಳಗಿರುವ ಕಟ್ಟಿಗೆ ರಾಶಿ, ಮೇವಿನ ಬಣವಿ ಹಾಗೂ ತಿಪ್ಪೆಗುಂಡಿಗಳನ್ನು ಊರಿಂದಾಚೆ ಸ್ಥಳಾಂತರಿಸಲು ನೋಟೀಸ್‌ ಜಾರಿ ಮಾಡಬೇಕು ಎಂದು ಜಿಪಂ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.

‘ಸ್ವಚ್ಛ ಮೇವ ಜಯತೆ’ ಕಾರ್ಯಕ್ರಮದ ನಿಮಿತ್ತ ಹೆಡಿಗ್ಗೊಂಡ ಗ್ರಾಮದ ಬೀದಿಗಳಲ್ಲಿ ಹಮ್ಮಿಕೊಂಡ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಿಪ್ಪೆಗುಂಡಿಗಳನ್ನು ಕಾಲಮಿತಿಯೊಳಗೆ ಸ್ಥಳಾಂತರಿಸದಿದ್ದರೆ ಜನರ ಆರೋಗ್ಯ, ಗ್ರಾಮದರ ನೈರ್ಮಲ್ಯ ದೃಷ್ಟಿಯಿಂದ ಪೊಲೀಸ್‌ ನೆರವು ಪಡೆದು ಸ್ಥಳಾಂತರಿಸುವ ಕಠಿಣ ಕ್ರಮಕೈಗೊಳ್ಳಿ ಎಂದರು.

ಗ್ರಾಮದೊಳಗೆ ಎಲ್ಲೆಂದರಲ್ಲಿ ಕಟ್ಟಿಗೆಯ ಬಣವಿ, ಹುಲ್ಲಿನ ಬಣವಿ, ಸೆಗಣಿ ತಿಪ್ಪೆಗಳನ್ನು ಕಂಡು ಗ್ರಾಮದಿಂದ ಹೊರಗೆ ಸ್ಥಳಾಂತರಿಸುವಂತೆ ಗ್ರಾಮಸ್ಥರಿಗೆ ಮವನಿ ಮಾಡಿದರು.

ಸೆಗಣಿ, ಹುಲ್ಲು, ಕಟ್ಟಿಗೆಯ ರಾಶಿಯಿಂದ ಗ್ರಾಮದ ನೈರ್ಮಲ್ಯ ಹಾಗೂ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಗಟಾರಗಳ ಸ್ವಚ್ಛತೆ, ಶೌಚಾಲಯ ಬಳಕೆ, ಪ್ಲಾಸ್ಟಿಕ್‌, ಒಣ ಕಸವನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಗ್ರಾಮ ಪಂಚಾಯತಿ ವತಿಯಿಂದಲೇ ಒಣ ಕಸ ಪ್ಲಾಸ್ಟಿಕ್‌ ಬಾಟಲಿಗಳನ್ನು ಸಂಗ್ರಹಿಸಲಾಗುತ್ತಿದೆ. ಇದಕ್ಕಾಗಿ ಕಸ ಸಂಗ್ರಹ ಬ್ಯಾಗ್‌ಗಳನ್ನು ನೀಡಲಾಗುತ್ತದೆ ಇದನ್ನು ಬಳಸಿಕೊಳ್ಳಿ ಎಂದು ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡರು.

ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ಘನತ್ಯಾಜ್ಯ ಸಂಗ್ರಹ ಘಟಕವನ್ನು ಇದೇ ಸಂದರ್ಭದಲ್ಲಿ ಜಿಪಂ ಅಧ್ಯಕ್ಷರು ಉದ್ಘಾಟಿಸಿದರು. ಬಳಿಕ ಪೊರಕೆ ಹಿಡಿದು ಅಧಿಕಾರಿಗಳ ತಂಡದೊಂದಿಗೆ ಗ್ರಾಮದ ಬೀದಿಗಳನ್ನು ಸ್ವಚ್ಛಗೊಳಿಸಿ ಗ್ರಾಮಸ್ಥರಿಗೆ ಸ್ವಚ್ಛತೆಯ ಅರಿವು ಮೂಡಿಸಿದರು. ಗ್ರಾಮದ ವೃತ್ತದಲ್ಲಿ ಸ್ವಚ್ಛಮೇವ ಜಯತೆ ಪ್ರತಿಜ್ಞಾವಿಧಿ ಬೋಧಿಸಿದರು.

ಜಿಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ.ಲೀಲಾವತಿ, ಜಿಪಂ ಸದಸ್ಯ ಮುನಾಫಸಾಬ ಯಲಿಗಾರ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ವಿವಿಧ ಇಲಾಖಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.