ಮುಂಗಾರು ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ
ಮೊದಲ ದಿನ 1.5 ಟನ್ ಭಾರದ ಕಲ್ಲು ಎಳೆಯುವ ಸ್ಪರ್ಧೆ •ಕಾರ್ಯಕ್ರಮ ವೀಕ್ಷಣೆಗೆ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ರೈತರು
Team Udayavani, Jun 17, 2019, 4:04 PM IST
ರಾಯಚೂರು: ಎಪಿಎಂಸಿ ಆವರಣದಲ್ಲಿ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ನಿಮಿತ್ತ ಆಯೋಜಿಸಿದ್ದ ಭಾರದ ಕಲ್ಲು ಎಳೆಯುವ ಸ್ಪರ್ಧೆಗೆ ಸಂಸದ ರಾಜಾ ಅಮರೇಶ್ವರ ನಾಯಕ ಚಾಲನೆ ನೀಡಿದರು.
ರಾಯಚೂರು: ಈ ಭಾಗದಲ್ಲಿ ರೈತರ ಹಬ್ಬ ಎಂದೇ ಬಣ್ಣಿಸಿಕೊಳ್ಳುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬಕ್ಕೆ ನೂತನ ಸಂಸದ ರಾಜಾ ಅಮರೇಶ್ವರ ನಾಯಕ ಮೊದಲ ದಿನದ ಕಾರ್ಯಕ್ರಮ ಉದ್ಘಾಟಿಸುವ ಮೂಲಕ ರವಿವಾರ ವಿದ್ಯುಕ್ತ ಚಾಲನೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಂಸದ ನಾಯಕ, ಇದೊಂದು ರೈತರ ಹಬ್ಬ. ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುನ್ನೂರು ಕಾಪು ಸಮಾಜ ಇಂಥದ್ದೊಂದು ವಿನೂತನ ಕಾರ್ಯಕ್ರಮ ಆಚರಿಸಿಕೊಂಡು ಬರುತ್ತಿರುವುದು ನಿಜಕ್ಕೂ ಉತ್ತಮ ಕಾರ್ಯ. ಆಧುನಿಕ ಯುಗದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಸೂಕ್ತ ಪ್ರೋತ್ಸಾಹ ಸಿಗದೇ ನಶಿಸುತ್ತಿವೆ. ಮುನ್ನೂರು ಕಾಪು ಸಮಾಜ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುತ್ತಿರುವುದು ಶ್ಲಾಘನೀಯ ಎಂದರು.
ಮಳೆ ಇಲ್ಲದೇ ರೈತರು ನಾನಾ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರಿಗೆ ಒಳ್ಳೆಯದಾಗಲಿ ಎಂಬ ಉತ್ತಮ ಉದ್ದೇಶ ಇಟ್ಟುಕೊಂಡು ಹೋಮ ಹವನ, ಧಾರ್ಮಿಕ ಪೂಜಾ ಕಾರ್ಯ ಮಾಡುವುದರ ಜತೆಗೆ ಕ್ರೀಡಾಸಕ್ತಿ ಹೆಚ್ಚಿಸುತ್ತಿರುವ ಈ ಕಾರ್ಯಕ್ರಮದ ಉದ್ದೇಶ ಉತ್ತಮವಾಗಿದೆ. ಈ ಕಾರ್ಯಕ್ರಮದಿಂದ ಮಳೆ ಬೆಳೆ ಚನ್ನಾಗಿ ಆಗಲಿ. ರೈತರ ಬದುಕು ಸಂಕಷ್ಟ ಮುಕ್ತವಾಗಲಿ ಎಂದು ಆಶಯ ವ್ಯಕ್ತಪಡಿಸಿದರು.
ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಈ ಕಾರ್ಯಕ್ರಮವನ್ನು ಮುನ್ನೂರು ಕಾಪು ಸಮಾಜ ಆಚರಿಸಿದರೂ ಅದಕ್ಕೆ ರಾಜ್ಯಮಟ್ಟದ ಮೌಲ್ಯವಿದೆ. ಸರ್ಕಾರದ ಯಾವುದೇ ಅನುದಾನವಿಲ್ಲದೇ ಇಂಥ ದೊಡ್ಡ ಮಟ್ಟದ ಉತ್ಸವ ನಡೆಸುವುದು ನಿಜಕ್ಕೂ ಸವಾಲಿನ ಕೆಲಸ. ಇಂಥ ಕೆಲಸ ಮಾಡುತ್ತಿರುವ ಮುನ್ನೂರು ಕಾಪು ಸಮಾಜ ಅಭಿನಂದನಾರ್ಹ ಎಂದು ಬಣ್ಣಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಿ.ಬಿ.ವೇದಮೂರ್ತಿ ಮಾತನಾಡಿ, ರೈತರ ಆಚರಣೆಗಳು ಒಂದೊಂದು ಭಾಗದಲ್ಲಿ ಒಂದೊಂದು ರೀತಿ ಇರುತ್ತವೆ. ಇಲ್ಲಿನ ಆಚರಣೆ ವಿಭಿನ್ನವಾಗಿದೆ. ಇವು ಸಂಸ್ಕೃತಿಯನ್ನು ಬಿಂಬಿಸುವ ಆಚರಣೆಗಳಾಗಿವೆ. ಈ ಭಾಗದಲ್ಲಿ ಹಸಿರೀಕರಣದ ಕೊರತೆಯಿಂದ ಮಳೆ ಪ್ರಮಾಣ ಕಡಿಮೆಯಾಗಿದೆ. ಎಲ್ಲೆಡೆ ಗಿಡ ಮರಗಳನ್ನು ಬೆಳೆಸಿದಲ್ಲಿ ಉತ್ತಮ ಮಳೆಯಾಗಿ ರೈತರು ಸಂಕಷ್ಟದಿಂದ ಪಾರಾಗಬಲ್ಲರು ಎಂದರು.
ಸೋಮವಾರಪೇಟೆ ಹಿರೇಮಠದ ಅಭಿನವ ಶ್ರೀ ರಾಚೋಟಿ ವೀರ ಶಿವಾಚಾರ್ಯ ಸ್ವಾಮೀಜಿ, ಭೃಂಗಿಮಠದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ ಆಚರಣೆ ಸಮಿತಿ ಅಧ್ಯಕ್ಷ ಎ.ಪಾಪಾರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮುಖಂಡ ಎನ್.ಶಂಕ್ರಪ್ಪ ಮಾತನಾಡಿದರು. ಮುನ್ನೂರು ಕಾಪು ಸಮಾಜ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ, ಮುಖಂಡರಾದ ಆರ್.ತಿಮ್ಮಯ್ಯ, ದೊಡ್ಡ ಮಲ್ಲೇಶ, ಎನ್. ಶ್ರೀನಿವಾಸರೆಡ್ಡಿ, ರಾಳ್ಳ ತಿಮ್ಮಾರೆಡ್ಡಿ, ಪುಂಡ್ಲ ನರಸರೆಡ್ಡಿ, ಜಿ.ಶೇಖರರೆಡ್ಡಿ, ಭಂಗಿ ನರಸರೆಡ್ಡಿ, ಪಿ.ಚಂದ್ರಶೇಖರ ರೆಡ್ಡಿ, ಎಸ್.ವೆಂಕಟೇಶ ರೆಡ್ಡಿ, ಗೂಡ್ಸಿ ನರಸರೆಡ್ಡಿ, ಜಿ.ವೆಂಕಟರೆಡ್ಡಿ, ಟಿ.ಮಲ್ಲೇಶ, ಕೃಷ್ಣರೆಡ್ಡಿ ಸೇರಿದಂತೆ ಅನೇಕ ಗಣ್ಯರು ಇದ್ದರು. ವಿವಿಧ ಭಾಗಗಳಿಂದ ಆಗಮಿಸಿದ ರೈತರು ಸ್ಪರ್ಧೆ ನೋಡಿ ಖುಷಿ ಪಟ್ಟರು.
ಮುನ್ನೂರು ಕಾಪು ಸಮಾಜದಿಂದ ಕಳೆದ 19 ವರ್ಷಗಳಿಂದ ನಡೆಸಿಕೊಂಡು ಬಂದ ಈ ಆಚರಣೆಯನ್ನು ಈ ವರ್ಷ ನಗರದ ರಾಜೇಂದ್ರ ಗಂಜ್ ಆವರಣದಲ್ಲಿ ಆಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.