47.62 ಕೋಟಿ ರೂ. ಕ್ರಿಯಾಯೋಜನೆಗೆ ಅಸ್ತು
Team Udayavani, Jun 18, 2019, 3:08 PM IST
ದಾವಣಗೆರೆ: ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ನಡೆಯಿತು.
ದಾವಣಗೆರೆ: 2019-20 ನೇ ಸಾಲಿನ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು (ಎನ್‌ಆರ್‌ಡಿಡಬ್ಲ್ಯುಪಿ) ಕಾರ್ಯಕ್ರಮದ 4762.31 ಲಕ್ಷ ರೂ. ಕ್ರಿಯಾಯೋಜನೆಗೆ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಅನುಮೋದನೆ ನೀಡಿದೆ.
ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶೈಲಜಾ ಬಸವರಾಜ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಕ್ರಿಯಾಯೋಜನೆ ಕುರಿತಂತೆ ವಿಸ್ತೃತವಾಗಿ ಚರ್ಚಿಸಿದ ನಂತರ ಸರ್ವಾನುಮತದ ಅನುಮೋದನೆ ನೀಡಿತು.
ಸಭೆ ಪ್ರಾರಂಭದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗ ಕಾರ್ಯಪಾಲಕ ಅಭಿಯಂತರ ರಾಜು , 2019-20 ಸಾಲಿನ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಕಾರ್ಯಕ್ರಮದಡಿ ತಯಾರಿಸಲಾದ ಕ್ರಿಯಾಯೋಜನೆ ಮಂಡಿಸುತ್ತಾ, ಕ್ರಿಯಾ ಯೋಜನೆಯಲ್ಲಿ ಮುಂದುವರೆದ(ಸ್ಪಿಲ್ ಓವರ್) ಹಾಗೂ ಪ್ರಸಕ್ತ ಅವಶ್ಯಕವಾದ ಎಲ್ಲಾ ಕಾಮಗಾರಿಗಳನ್ನು ಸೇರಿಸಲಾಗಿದೆ. ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ನಡೆಸಿ ಅಗತ್ಯ ಕಂಡು ಬಂದ ಯೋಜನೆಗಳನ್ನು ಕ್ರಿಯಾ ಯೋಜನೆಯಲ್ಲಿ ಸೇರ್ಪಡೆಗೊಳಿಸಲಾಗಿದೆ. ಎಲ್ಲಾ ಕಾಮಗಾರಿಗಳನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸಲು ಗುರಿ ನೀಡಲಾಗಿದೆ ಎಂದರು.
ಬರಗಾಲದಲ್ಲಿ ಸತತವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದ ಜನವಸತಿಗಳಿಗೆ ಸಮರ್ಪಕ ನೀರಿನ ಮೂಲ ಹಾಗೂ ಆ ಮೂಲದಿಂದ ಈ ಕಾರ್ಯಕ್ರಮಡಿ ಸಂಪರ್ಕ ಕಲ್ಪಿಸಲಾಗುವುದು. ಭಾಗಶಃ ಸಮಸ್ಯಾತ್ಮಕ ಜನವಸತಿಗಳಿಗೆ ನೀರಿನ ಮೂಲ ಹಾಗೂ ಆ ಮೂಲದಿಂದ ಸಂಪರ್ಕ ಒಗಿಸುವುದು, ಬಹುಗ್ರಾಮ ಯೋಜನೆಗಳಿಗೆ ಅವಶ್ಯಕತೆ ಇದ್ದರೆ ಐಆರ್ ನ ನಿರ್ಮಾಣ ಅಥವಾ ಐಆರ್ ಇದ್ದರೆ ಅದರ ಸಾಮರ್ಥ್ಯ ಹೆಚ್ಚಿಸುವುದು. ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಬಹುಗ್ರಾಮ ಯೋಜನೆಗಳಲ್ಲಿ ಜನವಸತಿಗಳಲ್ಲಿ ಗೃಹ ಸಂಪರ್ಕ ಕಲ್ಪಿಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಜನವಸತಿಗೆ ಅವಶ್ಯಕವಿರುವ ನೀರು ಸರಬರಾಜಿನ ಪ್ರಮಾಣ, ಮೂಲಭೂತ ಸೌಕರ್ಯ, ಜಿಯಾಜಲಿಸ್ಟ್ ಮೂಲಕ ಜಲಮೂಲ ಗುರುತಿಸುವುದು, ವಿದ್ಯುತ್ ಸಂಪರ್ಕ, ಇತರೆ ಪೂರಕ ಸೌಕರ್ಯಗಳ ಬಗ್ಗೆ ಯೋಜನೆ ಪೂರ್ವ ಸಮೀಕ್ಷೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ಪೂರ್ಣಗೊಂಡ ಬಹುಗ್ರಾಮ ಯೋಜನೆಗಳನ್ನು ನಿರ್ವಹಿಸಲಾಗುವುದು, ಪ್ರಗತಿಯಲ್ಲಿರುವ ಬಹುಗ್ರಾಮ ಯೋಜನೆಗಳನ್ನು ಕ್ರಿಯಾಯೋಜನೆಯಲ್ಲಿ ಅಳವಡಿಸಲಾಗಿದೆ. ಹಿಂದಿನ ಸಾಲಿನವರೆಗೆ ಅನುಮೋದನೆಯಾದ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು. 30 ಲಕ್ಷಗಳವರೆಗಿನ ಕಾಮಗಾರಿಗಳಿಗೆ ಪೂರ್ಣ ಅನುದಾನ, 30 ಲಕ್ಷದಿಂದ 100 ಲ್ಷದವರೆಗಿನ ಕಾಮಗಾರಿಗಳಿಗೆ ಅಂದಾಜಿನ ಶೇ.75 ರಷ್ಟು ಹಾಗೂ 100 ಲಕ್ಷ ಮೀರಿದ ಕಾಮಗಾರಿಗಳಿಗೆ ಅಂದಾಜಿನ ಶೇ.60ರಷ್ಟು ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.
ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿ, ಜಗಳೂರು ತಾಲೂಕಿನಲ್ಲಿ ತೀವ್ರ ಬರಗಾಲವಿದೆ. ಮುಂದುವರೆದ ಕಾಮಗಾರಿಗೆ ಹೆಚ್ಚು ಅನುದಾನ ವ್ಯಯಿಸುವುದಕ್ಕಿಂತ ಹೊಸ ಕಾಮಗಾರಿಗೆ ಹೆಚ್ಚು ಅನುದಾನ ಮೀಸಲಿಡಬೇಕು. ಬೋರ್ ಕೊರೆಸಿದ ಬಾಕಿ ಇರುವ ಪಾವತಿ ಶೀಘ್ರವಾಗಬೇಕು. 2014-15 ರಲ್ಲಿ ಆದ ಅವಧಿಯಲ್ಲಿನ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಂಜಿನಿಯರ್‌ಗಳ ವಿರುದ್ಧ ತನಿಖೆ ಆಗಬೇಕು ಎಂದು ಆಗ್ರಹಿಸಿದರು.
ಕಾರ್ಯಪಾಲಕ ಅಭಿಯಂತರರು, ಬಾಕಿ ಪಾವತಿ ಬಗ್ಗೆ ಪಿಡಿಒಗಳಿಂದ ಮಾಹಿತಿ ಕೇಳಲಾಗಿದೆ ಎಂದರು. ಅಧ್ಯಕ್ಷರು ಹಾಗೂ ಸಿಇಓ ಬಾಕಿ ಇರುವ ಬಗ್ಗೆ ಮಾಹಿತಿ ನೀಡಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಸಕ ಎಸ್.ಎ.ರವೀಂದ್ರನಾಥ ಮಾತನಾಡಿ, ಮುಂದುವರೆದ ಕಾಮಗಾರಿಗಳಡಿ ಕಾಮಗಾರಿ ಯಶಸ್ವಿಯಾಗದಿದ್ದರೂ ಮಾಡಿದ್ದ ಕೆಲಸಕ್ಕೆ ಹಣ ಪಾವತಿಸಲೇಬೇಕು. ಈ ಬಗ್ಗೆ ಆಗ್ಗಿಂದಾಗ್ಗೆ ಕ್ರಮ ವಹಿಸಬೇಕು. ಗುಡಾಳ್ ಹಾಗೂ ಸುತ್ತ ಮುತ್ತ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜಾದ ಹಣವನ್ನು ಸಿಆರ್‌ಎಫ್ ಮೂಲಕ ಪಾವತಿಸುವಂತೆ ತಿಳಿಸಿದರು.
ಸಿಇಓ ಮಾತನಾಡಿ, ಹರಿಹರದ ಬಹುಗ್ರಾಮ ಯೋಜನೆಗಳು ಯಶಸ್ವಿಯಾಗಿದ್ದು, ಚನ್ನಗಿರಿಯಲ್ಲಿ ನೀರು ಸರಬರಾಜಿನ ಕುರಿತಾದ ಬಾಕಿ ಇರುವ ಹಣವನ್ನು ಶೀಘ್ರವಾಗಿ ಪಾವತಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.