ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ
Team Udayavani, Jun 19, 2019, 3:00 AM IST
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ 2018ನೇ ಸಾಲಿನ “ಪುಸ್ತಕ ಬಹುಮಾನ’ ಕ್ಕಾಗಿ ಆಸಕ್ತರಿಂದ ಕೃತಿಗಳನ್ನು ಆಹ್ವಾನಿಸಲಾಗಿದೆ. 2018ರ ಜನವರಿ 1ರಿಂದ ಡಿಸೆಂಬರ್ 31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳು ಮಾತ್ರ ಪುಸ್ತಕ ಬಹುಮಾನಕ್ಕೆ ಅರ್ಹವಾಗಿವೆ.
ಕಾವ್ಯ, ಕಾದಂಬರಿ, ಸಣ್ಣಕಥೆ, ನಾಟಕ, ಮಕ್ಕಳ ಸಾಹಿತ್ಯ, ಪ್ರವಾಸ ಸಾಹಿತ್ಯ, ಗ್ರಂಥ ಸಂಪಾದನೆ, ಭಾಷಾ ಶಾಸ್ತ್ರ, ವಿಜ್ಞಾನ ಸಾಹಿತ್ಯ, ಸಂಶೋಧನೆ, ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದ ಕುರಿತ ಸಾಹಿತ್ಯ ಕೃತಿಗಳನ್ನು ಕಳುಹಿಸಿಕೊಡಬಹುದಾಗಿದೆ. ಮರು ಮುದ್ರಣವಾದ ಪುಸ್ತಕಗಳು, ಪಿ.ಎಚ್.ಡಿ ಪದವಿಗಾಗಿ ಸಿದ್ಧಪಡಿಸಿರುವ ಸಂಶೋಧನಾ ಗ್ರಂಥಗಳು ಹಾಗೂ ಈಗಾಗಲೇ ಅಕಾಡೆಮಿ ಗೌರವ ಪ್ರಶಸ್ತಿಗೆ ಪಾತ್ರವಾಗಿರುವ ಕೃತಿಗಳನ್ನು ಪರಿಗಣಿಸಲಾಗದು.
ಆಸಕ್ತರು ಜುಲೈ 10ರ ಒಳಗಾಗಿ ಪುಸ್ತಕದ ತಲಾ ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕನ್ನಡ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು -02 ಇಲ್ಲಿಗೆ ಕಳುಹಿಸಿ ಕೊಡುವಂತೆ ಅಕಾಡೆಮಿ ರಿಜಿಸ್ಟ್ರಾರ್ ಪ್ರಕಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 080-22211730 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.