ಜಲಾಮೃತ ಯೋಜನೆಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ
Team Udayavani, Jun 19, 2019, 5:35 AM IST
ಉಡುಪಿ: ರಾಜ್ಯ ಸರಕಾರದ ಮಹತ್ವಾಂಕಾಂಕ್ಷಿ ಯೋಜನೆಯಾದ ಜಲಾಮೃತ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದ್ದು, ಎಲ್ಲ ಜಿಲ್ಲೆಗಳಲ್ಲೂ ಯಶಸ್ವಿಯಾಗಿ ನಡೆಯುತ್ತಿದೆ.
ರಾಜ್ಯದಲ್ಲಿ ನೀರನ್ನು ಉಳಿಸುವ ಉದ್ದೇಶದಿಂದ 2019ನೇ ವರ್ಷವನ್ನು ಸರಕಾರ ಜಲವರ್ಷ ಎಂದು ಘೋಷಿಸಿಕೊಂಡಿತ್ತು. ಹನಿ ನೀರನ್ನು ಉಳಿಸಿ ಮುಂದಿನ ಪೀಳಿಗೆಗೆ ನೀಡುತ್ತೇವೆ ಎಂಬುವುದು ಜಲಾಮೃತ ಕಾರ್ಯಕ್ರಮದ ಪ್ರತಿಜ್ಞಾ ವಿಧಿಯಾಗಿದೆ. ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಈ ಕಾರ್ಯಕ್ರಮ ಅನುಷ್ಠಾನವಾಗಲಿದೆ. ಈ ಯೋಜನೆಗಾಗಿ ರಾಜ್ಯ ಸರಕಾರದಿಂದ 500 ಕೋ.ರೂ.ಗಳನ್ನು ಮೀಸಲಿಟ್ಟಿದೆ.
ಜಾಗೃತಿ ಮೂಡಿಸುವ ಕೆಲಸ
ಪ್ರತೀ ಜಿಲ್ಲೆಯಲ್ಲಿ ಜಿ.ಪಂ.ನ 5 ತಂಡಗಳು ಇದಕ್ಕಾಗಿ ಕಾರ್ಯನಿರ್ವಹಿಸುತ್ತಿವೆ. 1 ತಂಡದಲ್ಲಿ 3 ಮಂದಿ ಸದಸ್ಯರಿರುತ್ತಾರೆ. ಜಿಲ್ಲಾಡಳಿತದ ಮೂಲಕ ಇವರಿಗೆ ವಾಹನ ಸೌಲಭ್ಯ ಒದಗಿಸಲಾಗುತ್ತದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ತಲಾ 1 ಗಂಟೆಯಂತೆ ಇವರು ಮಾಹಿತಿ ನೀಡಲಿದ್ದಾರೆ. ಉಳಿದಂತೆ ಬೆಳಗ್ಗೆ 9ರಿಂದ ಸಂಜೆ 6.30ರ ವರೆಗೂ ವಿವಿಧ ಪ್ರದೇಶಗಳಿಗೆ ತೆರಳಿ ಪವರ್ ಪಾಯಿಂಟ್, ಜಾಗೃತಿ ಕಾರ್ಯಕ್ರಮಗಳನ್ನೂ ಕೂಡ ಆಯೋಜಿಸುತ್ತಾರೆ.
ಏನಿದು ಜಲಾಮೃತ ಯೋಜನೆ?
ರಾಜ್ಯದಲ್ಲಿ ಬರಸ್ಥಿತಿಯನ್ನು ಎದುರಿಸಲು 2019-20ನೇ ಸಾಲಿನ ಬಜೆಟ್‌ನಲ್ಲಿ 2019ನೇ ವರ್ಷವನ್ನು ಜಲಾಮೃತ ವರ್ಷ ಎಂದು ಘೋಷಿಸಿಕೊಂಡಿತ್ತು. ಜಲಸಂರಕ್ಷಣೆ, ಜಲಸಾಕ್ಷರತೆ, ಜಲಮೂಲಗಳ ಪುನಶ್ಚೇತನ ಮತ್ತು ಹಸುರೀಕರಣವನ್ನು ಕೇಂದ್ರವಾಗಿಟ್ಟುಕೊಂಡು ಈ ಯೋಜನೆಯನ್ನು ಆರಂಭಿಸಲಾಗಿದೆ.
– ಪುನೀತ್ ಸಾಲ್ಯಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.