ಕೆರೆಗಳ ಸುತ್ತ ಕ್ಯಾಮೆರಾ ಕಣ್ಗಾವಲಿಗೆ ಆದೇಶ
Team Udayavani, Jun 19, 2019, 3:02 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಸುತ್ತ ಸಿಸಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆ ಒತ್ತುವರಿಗಳನ್ನು ತೆರವುಗೊಳಿಸಲು ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಕೋರಿ ಸಿಟಿಜನ್ ಆ್ಯಕ್ಷನ್ ಗ್ರೂಪ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.
ಕೆರೆಗಳ ಸಂರಕ್ಷಣೆ ಹಾಗೂ ಪುನರುಜ್ಜೀವನದ ಬಗ್ಗೆ ನಾಗರಿಕ ಸಮಾಜದಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಕೆರೆಗಳ ನೀರನ್ನು ಮಲೀನ ಮಾಡುವವರ ವಿರುದ್ಧ 1974ರ ಜಲ ಕಾಯ್ದೆ ಅನ್ವಯ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಬೇಕು ಎಂದು ನ್ಯಾಯಪೀಠ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.
ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ದೇವರ ಮೂರ್ತಿ ಅಥವಾ ವಿಗ್ರಹಗಳನ್ನು ಕೆರೆಗಳಲ್ಲಿ ವಿಸರ್ಜನೆ ಮಾಡುವುದನ್ನು ತಡೆಯುವ ವಿಚಾರದಲ್ಲಿ ಬಿಬಿಎಂಪಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಮೂರ್ತಿಗಳ ವಿಸರ್ಜನೆಗೆ ಕೃತಕ ಕೆರೆಗಳನ್ನು ನಿರ್ಮಿಸಬೇಕು. ಆ ಸಂದರ್ಭದಲ್ಲೂ ಪರಿಸರದ ಅಂಶಗಳಿಗೆ ಆದ್ಯತೆ ನೀಡಬೇಕು.
ಕೃತಕ ಕೆರೆಗಳು ಚಿಕ್ಕದಾದರೆ, ಮೂರ್ತಿಗಳನ್ನು ಒಂದಡೆ ಸಂಗ್ರಹಿಸಿಟ್ಟು ಕ್ರಮೇಣ ಅದನ್ನು ವಿಸರ್ಜಿಸಬೇಕು ಎಂದು ನ್ಯಾಯಪೀಠ ಹೇಳಿದೆ. ಕೇಂದ್ರ ಸರ್ಕಾರದ “ಘನತ್ಯಾಜ್ಯ ವಿಲೇವಾರಿ ನಿಯಮಗಳು-2016’ಕ್ಕೆ ಪೂರಕವಾಗಿ ಉಪನಿಯಮಗಳನ್ನು ಈವರೆಗೆ ರೂಪಿಸದ ರಾಜ್ಯ ಸರ್ಕಾರದ ಕ್ರಮವನ್ನು ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ನಿಯಮಗಳ ಜಾರಿಯಾದ ಒಂದು ವರ್ಷದಲ್ಲಿ ಎಲ್ಲ ರಾಜ್ಯಗಳು ಉಪನಿಯಮಗಳನ್ನು (ಬೈ-ಲಾ) ರೂಪಿಸಿ ಕೇಂದ್ರಕ್ಕೆ ವರದಿ ಸಲ್ಲಿಸಬೇಕಿತ್ತು.
ಆದರೆ, ರಾಜ್ಯ ಸರ್ಕಾರ ಈವರೆಗೆ ಏಕೆ ಕ್ರಮ ಕೈಗೊಂಡಿಲ್ಲ ಅನ್ನುವುದರ ಬಗ್ಗೆ ಮುಂದಿನ ವಿಚಾರಣೆ ವೇಳೆ ಸ್ಪಷ್ಟನೆ ನೀಡುವಂತೆ ಹೇಳಿದ ನ್ಯಾಯಪೀಠ, ಒಂದು ತಿಂಗಳಲ್ಲಿ ಬೈ-ಲಾ ಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.