ಬರ ನಿರ್ವಹಣೆ, ಚರಂಡಿ ಕಾಮಗಾರಿ ತ್ವರಿತಗೊಳಿಸಿ


Team Udayavani, Jun 19, 2019, 6:07 AM IST

bara-nirvahane

ಉಡುಪಿ: ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜು, ಮಳೆನೀರು ಹರಿಯುವ ಚರಂಡಿಗಳ ನಿರ್ವಹಣೆ ಮತ್ತು ಸ್ವತ್ಛತೆಯನ್ನು ಚುರುಕುಗೊಳಿಸಬೇಕು ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಸೂಚನೆ ನೀಡಿದ್ದಾರೆ.

ಮಂಗಳವಾರ ಉಡುಪಿ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜರಗಿದ ಪ್ರಗತಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿದರು.

ಮೇಲಧಿಕಾರಿಗಳು ನಗರ ಮತ್ತು ಪಟ್ಟಣ ಪ್ರದೇಶಗಳೆರಡಕ್ಕೂ ಭೇಟಿ ನೀಡಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಬೇಕು. ಸ್ಥಳೀಯ ಜನಪ್ರತಿನಿಧಿಗಳನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಆಡಳಿತ ಮತ್ತು ಕಾಮಗಾರಿಗೆ ವೇಗ ನೀಡಬೇಕು. ಮಳೆ ನೀರು ಚರಂಡಿಯ ಹೂಳೆತ್ತಿರುವ ಕುರಿತು 15 ದಿನಗಳೊಳಗೆ ಪರಿಶೀಲಿಸಿ ವರದಿ ನೀಡಬೇಕು ಎಂದರು. ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿ ಹಣಕಾಸಿನ ಲಭ್ಯತೆ ಕುರಿತು ಜಿಲ್ಲೆಯ ಎಲ್ಲ ತಾ.ಪಂ. ಇಒಗಳಿಂದ ಪ್ರತ್ಯೇಕವಾಗಿ ಮಾಹಿತಿ ಪಡೆದ ಸಚಿವರು, ಅಗತ್ಯ ಮೊತ್ತವನ್ನು ಒದಗಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ನಗರದಲ್ಲಿ ವೈಫ‌ಲ್ಯ
ಗ್ರಾಮೀಣ ಭಾಗಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ನಡೆದಿದೆ. ಆದರೆ ಉಡುಪಿ ನಗರಸಭೆಯ 35 ವಾರ್ಡ್‌ಗಳ ಪೈಕಿ 4 ವಾರ್ಡ್‌ಗಳಲ್ಲಿ ಮಾತ್ರ ನಗರಸಭೆ ಮತ್ತು ಜಿಲ್ಲಾಡಳಿತದ ವತಿಯಿಂದ ಟ್ಯಾಂಕರ್‌ ನೀರು ಪೂರೈಕೆಯಾಗಿದೆ. ಇತರ ಕಡೆಗಳಿಗೆ ನಾನು ಮತ್ತು ನಗರಸಭಾ ಸದಸ್ಯರು ಸ್ವಂತ ಖರ್ಚಿ ನಿಂದ ನೀರು ಪೂರೈಸಿದ್ದೇವೆ ಎಂದು ಶಾಸಕ ರಘುಪತಿ ಭಟ್‌ ಗಮನ ಸೆಳೆದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿ ಸಿದ ಸಚಿವರು, ಇದು ಅಧಿಕಾರಿಗಳ ಗಂಭೀರ ಲೋಪವಲ್ಲವೆ, ನೀರು ಕೊಡಬಾರದೆಂದು ಸರಕಾರದ ಆದೇಶವಿತ್ತೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನೀರಿನ ಕೊರತೆಯಿಂದ ಕೆಲವು ಶಾಲೆಗಳಿಗೆ ರಜೆ ನೀಡಿರುವ ಬಗ್ಗೆಯೂ ಪ್ರಶ್ನಿಸಿದರು.

ಜಿಲ್ಲೆಯ 148 ಗ್ರಾ.ಪಂ.ಗಳಲ್ಲಿ 169 ಟ್ಯಾಂಕರ್‌ಮೂಲಕ ನೀರು ಸರಬರಾಜು ಮಾಡಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ತಿಳಿಸಿದರು.

ಹಣ ಪಾವತಿಗೆ ಸೂಚನೆ
ಟ್ಯಾಂಕರ್‌ ನೀರು ಪೂರೈಸಿದವರಿಗೆ ಬಿಲ್‌ ಪಾವತಿಯಾಗಿಲ್ಲ. ಇದರಿಂದ ಕೆಲವೆಡೆ ನೀರು ಪೂರೈಕೆಯಾಗುತ್ತಿಲ್ಲ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ದೂರಿದರು. ಬಾಕಿ ಇರುವ ಮೊತ್ತವನ್ನು 7 ದಿನದೊಳಗೆ ಪಾವತಿಸಬೇಕು. ಪಾವತಿ ಪಾರದರ್ಶಕ, ಶೀಘ್ರವಾಗಿರಲಿ ಎಂದು ಸಚಿವರು ಹೇಳಿದರು.

ಸರಕಾರಿ ಜಾಗ ರಕ್ಷಿಸಿ
ಸರಕಾರಿ ಜಾಗದ ಅತಿಕ್ರಮಣ ತಡೆ ಯಲು ಕೂಡಲೇ ಸೂಚನಾ ಫ‌ಲಕ, ಬೇಲಿ ಅಳವಡಿಸಬೇಕು. ಅತಿಕ್ರಮಣ ತೆರವುಗೊಳಿಸಿ. ಮೊದಲು ಶ್ರೀಮಂತರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು.

ಆಧಾರ್‌ ತಿದ್ದುಪಡಿ ಗ್ರಾ.ಪಂ.ಗೆ ಕೊಡಿ
ಈ ಹಿಂದೆ ಗ್ರಾ.ಪಂ.ಗಳಲ್ಲಿಯೂ ಆಧಾರ್‌ ತಿದ್ದುಪಡಿಗೆ ಅವಕಾಶವಿತ್ತು. ಆದರೆ ಈಗ ಇಲ್ಲ ಎಂದು ಶ್ರೀನಿವಾಸ ಪೂಜಾರಿ ಗಮನ ಸೆಳೆದರು. ಈ ಬಗ್ಗೆ ಕೂಡಲೇ ಗಮನಿಸುವಂತೆ ಸಚಿವರು ಜಿಲ್ಲಾಧಿಕಾರಿಗೆ ಸೂಚಿಸಿದರು. ವಿವಿಧ
ಪಿಂಚಣಿ ಯೋಜನೆಗಳ ಹಣ 7 ತಿಂಗಳಿಂದ ಮಂಜೂರಾಗದೆ ಇರುವ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು.

ಹೆಣ್ಮಕ್ಕಳ ಬಗ್ಗೆ ಕಾಳಜಿ ಇರಲಿ
ಪ್ರಗತಿ ಪರಿಶೀಲನ ಸಭೆಗೆ ಸಚಿವೆ ಡಾ| ಜಯಮಾಲಾ ಗೈರು ಕುರಿತು ಪತ್ರಕರ್ತರು ಪ್ರಶ್ನಿಸಿದಾಗ, ಅವರಿಗೆ ಈ ಸಭೆಯ ಬಗ್ಗೆ ಗೊತ್ತಿರಲಿಲ್ಲ. ಅವರು ಇಂದು ರಾಜ್ಯಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದಾರೆ. ಆದರೂ ನಿನ್ನೆ ರಾತ್ರಿ ಕರೆ ಮಾಡಿ ಅಗತ್ಯವಿದ್ದರೆ ಸಭೆ ರದ್ದು ಮಾಡುತ್ತೇನೆ ಎಂದಿದ್ದರು. ನಾನೇ ಬೇಡ ಎಂದಿದ್ದೆ. ಹೆಣ್ಮಕ್ಕಳ ಬಗ್ಗೆ ಕಾಳಜಿ ಇರಲಿ ಎಂದರು.

ಹಣದ ಕೊರತೆ ಇಲ್ಲ
18 ವರ್ಷಗಳಲ್ಲಿ 2005, 2007, 2010 ಮತ್ತು 2017 ಇಸವಿಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ವರ್ಷ ಬರಗಾಲ ಉಂಟಾಗಿದೆ. ಬರಗಾಲ ವಿಚಾರದಲ್ಲಿ ರಾಜಿ ಇಲ್ಲ. ಹಣಕಾಸಿನ ಕೊರತೆ ಇಲ್ಲ. ಉಡುಪಿ ಡಿಸಿ ಬಳಿಯೂ 24 ಕೋ.ರೂ. ಇದೆ. 6 ತಿಂಗಳ ಹಿಂದೆಯೇ ಎಲ್ಲ ಜಿಲ್ಲೆಯ ಅಧಿಕಾರಿಗಳಿಗೂ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೆ. ಅಧಿಕಾರಿಗಳು ಚುರುಕಾಗಬೇಕಿದೆ ಎಂದು ದೇಶಪಾಂಡೆ ಹೇಳಿದರು.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.