ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ
Team Udayavani, Jun 19, 2019, 2:28 PM IST
ಇಳಕಲ್ಲ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಇಳಕಲ್ಲ: ರಾಜ್ಯದ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಳಕಲ್ಲ ಘಟಕ ಮಂಗಳವಾರ ತಾಲೂಕಾ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ವೇದವ್ಯಾಸ ಮುತಾಲಿಕ್ ಅವರಿಗೆ ಮನವಿ ಸಲ್ಲಿಸಿದರು.
ಪರಿಷತ್ ಜಿಲ್ಲಾ ಸಹ ಸಂಚಾಲಕ ವಿಜಯ ಗೌಡರ ಮಾತನಾಡಿ, ಶಿಕ್ಷಣ ಸರ್ವರಿಗೂ ಸಿಗಬೇಕಾದ ಅಮೂಲ್ಯ ವಸ್ತು. ಜಾತಿ, ಮತ, ಬಡವ, ಶ್ರೀಮಂತ ತಾರತಮ್ಯ ಎನಿಸದೆ ಶಿಕ್ಷಣ ಎಲ್ಲರಿಗೂ ದೊರಕುವಂತೆ ಮಾಡುವುದು ಸರಕಾರದ ಕರ್ತವ್ಯ. ಎಸ್‌ಸಿ, ಎಸ್‌ಟಿ ಸೇರಿದಂತೆ ಉಳಿದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಇಂದಿನವರೆಗೂ ಆ ಯೋಜನೆ ಜಾರಿಗೆ ಬಂದಿಲ್ಲ. ಇದರಿಂದ ವಿದ್ಯಾರ್ಥಿಗಳ ಮೇಲೆ ರಾಜ್ಯ ಸರಕಾರದ ನಿರ್ಲಕ್ಷ್ಯ ಧೋರಣೆ ಕಾರಣ. ರಾಜ್ಯದ ಜನತೆ ಬರಗಾಲದ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ರೈತಾಪಿ ವರ್ಗದ ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿದೆ. ಇಂತಹ ಸಂದರ್ಭದಲ್ಲಿ ಸರಕಾರ ವಿದ್ಯಾರ್ಥಿಗಳಿಗೆ ಬಸ್‌ಪಾಸ್ ಸೌಲಭ್ಯ ಒದಗಿಸದಿದ್ದರೇ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ ಎಂದು ಹೇಳಿದರು.
ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಿಂದ ಪ್ರತಿಭಟನಾ ಮೆರವಣಿಗೆ ನಡೆದು ಜಗಜೀವನರಾಮನ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ನಗರ ಘಟಕದ ಕಾರ್ಯದರ್ಶಿ ವಿನಯ ಮಲಾರಖಾನ, ಸೋಮು ಪಾಟೀಲ, ಸಿದ್ದು ಹಿರೇಮಠ, ವಿಜಯ ನಂದಿಹಾಳ, ಶಿಲ್ಪಾ ಭಾವಿಕಟ್ಟಿ, ಯಶೋಧಾ ಗೌಡರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.