ವಾರದೊಳಗೆ ಬೆಳೆ ಹಾನಿ ಪರಿಹಾರ ವಿತರಿಸಿ: ಆರ್.ವಿ. ದೇಶಪಾಂಡೆ
Team Udayavani, Jun 20, 2019, 3:00 AM IST
ಚಾಮರಾಜನಗರ: ಪ್ರಕೃತಿ ವಿಕೋಪದಿಂದ ಹಾನಿಗೀಡಾಗಿರುವ ಬೆಳೆ ಸಂಬಂಧ ಪರಿಹಾರವನ್ನು ಇನ್ನು 7 ದಿನಗಳೊಳಗೆ ವಿತರಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಪ್ರಕೃತಿ ವಿಕಕ್ರಮಗಳು ಹಾಗೂ ಕಂದಾಯ ಇಲಾಖೆ ವಿಷಯಗಳ ಕುರಿತ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಕೃತಿ ವೈಪರಿತ್ಯದಿಂದ ಜಿಲ್ಲೆಯಲ್ಲಿ ಹಾನಿಗೆ ಒಳಗಾಗಿರುವ ಬಾಳೆ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆದ ರೈತ ಬೆಳೆಗಾರರಿಗೆ ನಿಯಮಾನುಸಾರ ಬೆಳೆ ಪರಿಹಾರ ವಿತರಿಸುವ ಕೆಲಸವನ್ನು ವಿಳಂಬ ಮಾಡಬಾರದು. ಕೂಡಲೇ ಅಗತ್ಯ ಕ್ರಮ ವಹಿಸಿ ಇನ್ನು 7 ದಿನಗಳ ಒಳಗೆ ಸಂಬಂಧ ಪಟ್ಟ ಎಲ್ಲರಿಗೂ ಪರಿಹಾರ ನೀಡಬೇಕು ಎಂದು ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಶಾಸಕ ಆರ್.ನರೇಂದ್ರ ಮಾತನಾಡಿ, ಬೆಳೆ ಹಾನಿಗೆ ನೀಡಲಾಗುತ್ತಿರುವ ಪರಿಹಾರ ತೀರಾ ಕಡಿಮೆಯಿದೆ. ವೈಜ್ಞಾನಿಕವಾಗಿ ಬೆಳೆ ಪರಿಹಾರ ನೀಡಬೇಕಿದೆ. ಬೆಳೆಗಾರರು ಬೆಳೆ ಬೆಳೆಯಲು ಮಾಡಿದ ವೆಚ್ಚಕ್ಕೆ ಅನುಗುಣವಾಗಿ ಪರಿಹಾರ ಲಭ್ಯವಾದರೆ ಅನುಕೂಲವಾಗಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಬರ ಪರಿಹಾರ ಕಾಮಗಾರಿ ಪ್ರಗತಿ ಪರಿಶೀಲಿಸಿದ ಸಚಿವರು, ಬರ ಪರಿಹಾರ ಕಾಮಗಾರಿಗಳಿಗೆ ಹಣದ ಕೊರತೆಯಿಲ್ಲ, ತಾಲೂಕು ಟಾಸ್ಕ್ ಪೋರ್ಸ್ ನಲ್ಲಿಯೂ ಸಹ ಹಣ ಬಳಸಿ ಬರಪರಿಹಾರ ಸಂಬಂಧ ಕಾಮಗಾರಿಗಳನ್ನು ನಿರ್ವಹಿಸಬೇಕು, ಅಧಿಕಾರಿಗಳು ವ್ಯಾಪಕವಾಗಿ ಕ್ಷೇತ್ರ ಪ್ರವಾಸ ಮಾಡಿ ಜನರ ಸಮಸ್ಯೆಗಳಗೆ ಸ್ಪಂದಿಸಬೇಕು, ವಿಶೇಷವಾಗಿ ಹಿರಿಯ ಅಧಿಕಾರಿಗಳು ಪ್ರವಾಸ ಮಾಡಿದರೆ ಅಧೀನ ಅಧಿಕಾರಿಗಳು ಸಹ ಚುರುಕಾಗುತ್ತಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕೆಂದು ಸಚಿವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಆಮೆ ಕೆರೆ ಜಮೀನು ಸಂಬಂಧ ಇನ್ನೂ ಅರ್ಹರಿಗೆ ಪರಿಹಾರ ದೊರೆತಿಲ್ಲ, ಅರಣ್ಯ ಇಲಾಖೆಯವರು ಪರಿಹಾರ ನೀಡುವ ಸಂಬಂಧ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಕಂದಾಯ ಸಚಿವರ ಗಮನಸೆಳೆದರು.
ಶಾಸಕ ಎನ್.ಮಹೇಶ್ ಅವರೂ ಸಹ ಆಮೆ ಕೆರೆ ವಿಷಯ ಪ್ರಸ್ತಾಪಿಸಿ ಪರಿಹಾರಕ್ಕಾಗಿ 9 ರಿಂದ 10 ಕೋಟಿ ರೂ ಅಗತ್ಯವಿದೆ ಎಂಬ ಮಾಹಿತಿ ಇದೆ. ಈ ಸಂಬಂಧ ತುರ್ತಾಗಿ ಕ್ರಮ ವಹಿಸಬೇಕೆಂದು ಕೋರಿದರು.
ಜಿಪಂ ಅಧ್ಯಕ್ಷೆ ಶಿವಮ್ಮ, ಕೃಷಿ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ವಿ.ಯಶವಂತ, ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಪಂ ಸಿಇಒ ಕೆ.ಎಸ್.ಲತಾಕುಮಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಇತರರು ಸಭೆಯಲ್ಲಿ ಹಾಜರಿದ್ದರು.
ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು, ತಾಲೂಕಿನ ಬದನಗುಪ್ಪೆ ಗ್ರಾಮದಲ್ಲಿ ಹಾನಿಗೀಡಾಗಿರುವ ಬಾಳೆ ಬೆಳೆಯನ್ನು ವೀಕ್ಷಿಸಿದರು. ಇದೇ ವೇಳೆ ರೈತರು ಬೆಳೆ ಹಾನಿ, ಅಕಾಲಿಕ ಮಳೆ, ಇನ್ನಿತರ ಅಹವಾಲುಗಳನ್ನು ಸಚಿವರ ಮುಂದೆ ಹೇಳಿಕೊಂಡರು.
ತಾಲೂಕಿನ ಬೆಂಡರವಾಡಿ ಕೆರೆಗೂ ಭೇಟಿ ನೀಡಿದ ಸಚಿವರು ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಮಾಹಿತಿ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.