ಬದಲಾವಣೆಯ ಸಮಯ?
ಕೆಪಿಸಿಸಿ ಸಮಿತಿ ವಿಸರ್ಜಿಸಿದ ಕಾಂಗ್ರೆಸ್ ಹೈಕಮಾಂಡ್ ; ಸಿದ್ದು -ರಾಹುಲ್ ಭೇಟಿ ಬೆನ್ನಲ್ಲೇ ಖರ್ಗೆ ಜತೆ ಎಚ್‌ಡಿಕೆ ಚರ್ಚೆ
Team Udayavani, Jun 20, 2019, 6:00 AM IST
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಸೂಚನೆಗಳು ಕಂಡುಬರುತ್ತಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ವಿಸರ್ಜಿಸುವ ಮಹತ್ವದ ತೀರ್ಮಾನವನ್ನು ಹೈಕಮಾಂಡ್ ಕೈಗೊಂಡಿದೆ.
ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲು ಉದ್ದೇಶಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಮಾತ್ರ ಯಥಾಸ್ಥಿತಿಯಲ್ಲಿ ಮುಂದುವರಿಸಲಾಗಿದೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಪರ್ದಿಯಲ್ಲಿ ಹೊಸ ಪಡೆ ಕಟ್ಟಲು ಅವಕಾಶ ಕಲ್ಪಿಸಲಾಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ಡಾ| ಜಿ. ಪರಮೇಶ್ವರ್ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನೇಮಕಗೊಂಡಿದ್ದ 275ಕ್ಕೂ ಹೆಚ್ಚು ಪದಾಧಿಕಾರಿಗಳನ್ನು ಕೈಬಿಡಲಾಗಿದ್ದು, ಇವರಲ್ಲಿ ಹೆಚ್ಚಿನವರು ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್ ಅವರ ನಿಕಟವರ್ತಿಗಳು ಎನ್ನಲಾಗಿದೆ. ಇದರೊಂದಿಗೆ ಸಿದ್ದರಾಮಯ್ಯ ದಿಲ್ಲಿಯಲ್ಲಿ ರಾಜಕೀಯ ದಾಳವನ್ನು ಉರುಳಿಸಿ ಪಕ್ಷದಲ್ಲಿ ತಮಗಿರುವ ಬಿಗಿ ಪಟ್ಟನ್ನು ಮತ್ತೂಮ್ಮೆ ಸಾಬೀತುಪಡಿಸಿದ್ದಾರೆ ಎನ್ನಲಾಗಿದೆ.
ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಇತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ರಾಹುಲ್ಗಾಂಧಿ ಅವರನ್ನು ಭೇಟಿ ಮಾಡಿದ್ದ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಜೆಡಿಎಸ್ ಜತೆಗಿನ ಮೈತ್ರಿಯಿಂದ ಭವಿಷ್ಯದಲ್ಲಿ ಪಕ್ಷಕ್ಕೆ ತೊಂದರೆಯಾಗಲಿದೆ. ಹೀಗಾಗಿ ಮೈತ್ರಿ ಬಿಟ್ಟು ವಿಪಕ್ಷ ಸ್ಥಾನದಲ್ಲಿ ಕುಳಿತು ಪಕ್ಷ ಕಟ್ಟಿ ಚುನಾವಣೆಗೆ ಹೋಗುವುದು ಸೂಕ್ತ ಎಂಬ ಅಭಿಪ್ರಾಯ ನೀಡಿದ್ದಾರೆ ಎಂದು ಹೇಳಲಾಗಿದೆ.
ಇದರ ಸುಳಿವರಿತ ಕುಮಾರಸ್ವಾಮಿ ಅವರು ಖರ್ಗೆ ಅವರನ್ನು ಭೇಟಿ ಮಾಡಿ ಹೈಕಮಾಂಡ್ ಜತೆ ಚರ್ಚಿಸಿ ಮೈತ್ರಿ ಮುಂದು ವರಿಯುವಂತೆ ಮಾಡಿ ಎಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಬದಲಾವಣೆಯಾಗುತ್ತಾ?
ಸಮನ್ವಯ ಸಮಿತಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕವಾಗಲಿದ್ದಾರೆ. ಶಾಸಕಾಂಗ ಪಕ್ಷದ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕವಾಗಲಿದ್ದಾರೆ. ಸಿದ್ದರಾಮಯ್ಯ ಒಪ್ಪದಿದ್ದರೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಮೇಲ್ನೋಟಕ್ಕೆ ಮತ್ತೆ ಹೈಕಮಾಂಡ್ ಮಟ್ಟದಲ್ಲಿ ಸಿದ್ದರಾಮಯ್ಯ ಮೇಲುಗೈ ಸಾಧಿಸಿರುವುದರಿಂದ ಅಷ್ಟು ಸುಲಭವಾಗಿ ಸಮನ್ವಯ ಸಮಿತಿ ಹಾಗೂ ಶಾಸಕಾಂಗ ಪಕ್ಷದ ಅಧ್ಯಕ್ಷ ಸ್ಥಾನ ಬಿಟ್ಟುಕೊಡುತ್ತಾರಾ ಎಂಬ ಮಾತುಗಳು ಕೇಳಿಬರುತ್ತಿವೆ.
ಚುನಾವಣೆಯಲ್ಲಿ ಸೋತಿರುವ ನಾನು ಸರಕಾರಕ್ಕೆ ಯಾವ ಸಲಹೆ ನೀಡಲಿ? ವರಿಷ್ಠರ ಜತೆಗೆ ಸಿದ್ದರಾಮಯ್ಯ ಭೇಟಿಯಾಗಿರುವ ಬಗ್ಗೆ ಮಾಹಿತಿ ಇಲ್ಲ.
– ಮಲ್ಲಿಕಾರ್ಜುನ ಖರ್ಗೆ,ಕಾಂಗ್ರೆಸ್ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.