10 ಸಾವಿರ ವಿದ್ಯಾರ್ಥಿಗಳಿಂದ ಯೋಗ

•ಬಿವಿವಿ ಆವರಣ-ವೈದ್ಯಕೀಯ-ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಯೋಗ ದಿನ

Team Udayavani, Jun 20, 2019, 9:52 AM IST

bk-tdy-3..

ಬಾಗಲಕೋಟೆ: ಸುದ್ದಿಗೋಷ್ಠಿಯಲ್ಲಿ ಡಾ| ಮಹಾಂತೇಶ ಸಾಲಿಮಠ ಮಾತನಾಡಿದರು.

ಬಾಗಲಕೋಟೆ: ನಗರದ ಬಿವಿವಿ ಸಂಘದಿಂದ ಜೂ. 21ರಂದು ವಿಶ್ವ ಯೋಗ ದಿನಾಚರಣೆ ಅಂಗವಾಗಿ ಸಂಸ್ಥೆಯ 3 ಸಾವಿರ ಸಿಬ್ಬಂದಿ ಹಾಗೂ 10 ಸಾವಿರ ವಿದ್ಯಾರ್ಥಿಗಳಿಂದ ಏಕ ಕಾಲಕ್ಕೆ ಯೋಗಾಭ್ಯಾಸ ನಡೆಯಲಿದೆ ಎಂದು ಬಿವಿವಿ ಸಂಘದ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ| ಮಹಾಂತೇಶ ಸಾಲಿಮಠ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ. 21ರಂದು ಬೆಳಗ್ಗೆ ಬಿವಿವಿ ಸಂಘದ ಮುಖ್ಯ ಆಡಳಿತ ಕಚೇರಿ ಆವರಣ, ಬಸವೇಶ್ವರ ಇಂಜಿನಿಯರಿಂಗ್‌ ಕಾಲೇಜು ಹಾಗೂ ಎಸ್‌. ನಿಜಲಿಂಗಪ್ಪ ವೈದ್ಯಕೀಯ ಕಾಲೇಜು ಆವರಣ ಸೇರಿ ಒಟ್ಟು ಮೂರು ಕಡೆ ಯೋಗ ದಿನಾಚರಣೆ ನಡೆಯಲಿದೆ ಎಂದರು.

ವೈದ್ಯಕೀಯ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬಿವಿವಿ ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಸಿದ್ದಣ್ಣ ಶೆಟ್ಟರ ನೇತೃತ್ವ ವಹಿಸಲಿದ್ದು, ಬಸವೇಶ್ವರ ಇಂಜಿನಿಯರಿಂಗ್‌ ಕಾಲೇಜಿನ ಆವರಣ ದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಎಸ್‌.ಎಸ್‌. ಕುಪ್ಪಸ್ತ ನೇತೃತ್ವ ವಹಿಸುವರು. ಮುಖ್ಯ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಾ|ಆರ್‌.ಬಿ. ಹೊಸಮನಿ ಯೋಗ ತರಬೇತಿ ನೀಡುವರು. ಈ ಮೂರು ಕಡೆ ನಡೆಯುವ ಕಾರ್ಯಕ್ರಮದಲ್ಲಿ ಸಂಘದ ವಿವಿಧ ಶಾಲಾ- ಕಾಲೇಜುಗಳ 3 ಸಾವಿರ ಸಿಬ್ಬಂದಿ ಹಾಗೂ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವರು ಎಂದು ವಿವರಿಸಿದರು.

ವಿಶ್ವ ಸಂಗೀತ ದಿನಾಚರಣೆ: ಅದೇ ದಿನ ಬೆಳಗ್ಗೆ 10-30ಕ್ಕೆ ಬಿವಿವಿ ಸಂಘದ ಡಾ|ಪುಟ್ಟರಾಜ ಗವಾಯಿ ಸ್ಕೂಲ್ ಆಫ್‌ ಮ್ಯೂಜಿಕ್‌, ಬಸವೇಶ್ವರ ಕಲಾ ಕಾಲೇಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ವಿಶ್ವ ಯೋಗ ಮತ್ತು ವಿಶ್ವ ಸಂಗೀತ ದಿನಾಚರಣೆ ಹಮ್ಮಿಕೊಂಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ಸಿಮೀಕೇರಿಯ ಹಿರಿಯ ಹಿಂದೂಸ್ತಾನ ಗಾಯಕ ಪಂಡಿತ ಎಚ್.ಆರ್‌. ಬಡಿಗೇರ, ಬಸವೇಶ್ವರ ವಾಣಿಜ್ಯ ಕಾಲೇಜಿನ ಪ್ರಾಧ್ಯಾಪಕ ಡಾ|ಜೆ.ವಿ. ಚವ್ಹಾಣ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಬಸವೇಶ್ವರ ಕಲಾ ಕಾಲೇಜಿನ ಪ್ರಾಚಾರ್ಯ ಡಾ|ವಿಜಯಕುಮಾರ ಕಟಗಿಹಳ್ಳಿಮಠ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು. ವಿಶ್ವ ಸಂಗೀತ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗದ ಹಿರಿಯ ಸಂಗೀತ ಕಲಾವಿದರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಾಚಾರ್ಯ ಡಾ|ವಿಜಯಕುಮಾರ ಕಟಗಿಹಳ್ಳಿಮಠ, ವಿವಿಧ ಕಾಲೇಜುಗಳ ಡಾ|ಎಸ್‌.ಎಚ್. ಶೆಟ್ಟರ, ಪಾರ್ವತಿ ಆಲೂರ, ಎಸ್‌.ಜೆ. ಒಡೆಯರ, ಐ.ಎಚ್. ಮುಚಂಡಿ, ಬೆನಕನಾಳ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.