ಸಿಎಂ ಗ್ರಾಮ ವಾಸ್ತವ್ಯ ಯಶಸ್ವಿಗೊಳಿಸಿ
ಜನತಾದರ್ಶನದಿಂದ ಸಮಸ್ಯೆಗೆ ಪರಿಹಾರ•ನೆರಳಿಗಾಗಿ ಅರ್ಜಿದಾರರಿಗೆ ಶಾಮಿಯಾನ
Team Udayavani, Jun 20, 2019, 11:00 AM IST
ಕಲಬುರಗಿ: ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಇಲಾಖಾವಾರು ಅಧಿಕಾರಿಗಳ ಸಭೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಲಬುರಗಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೂ. 22ರಂದು ತಾಲೂಕಿನ ಹೇರೂರ (ಬಿ) ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಲೋಪವಾಗದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಆಯೋಜಿಸಿದ್ದ ಇಲಾಖಾವಾರು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನತಾ ದರ್ಶನ ಕಾರ್ಯಕ್ರಮ ಮುಖ್ಯಮಂತ್ರಿಗಳಿಗೆ ಪ್ರೀಯವಾದದ್ದಾಗಿದೆ. ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ಮಹತ್ವದ ಕಾರ್ಯಕ್ರಮವಾಗಿದೆ. ಸುಮಾರು ಎಂಟØತ್ತು ಸಾವಿರ ಜನರು ಸೇರುವ ನಿರೀಕ್ಷೆ ಇದ್ದು, ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದರು.
ಮಳೆ ಬಂದರೂ, ಯಾವುದೇ ತೊಂದರೆಯಾಗದಂತೆ ಜನತಾ ದರ್ಶನ ನಡೆಯುವ ಕಾರ್ಯಕ್ರಮ ಸ್ಥಳವನ್ನು ವಾಟರ್ ಪ್ರೂಪ್ ವ್ಯವಸ್ಥೆಯಿಂದ ನಿರ್ಮಿಸಲಾಗಿದೆ. ಅರ್ಜಿದಾರರು ಬಿಸಿಲಿನಿಂದ ಪರಿತಪಿಸದಂತೆ ಪಕ್ಕದಲ್ಲೇ ಶಾಮಿಯಾನ ಹಾಕಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರ ವಾಹನಗಳು ಹಾಗೂ ಗಣ್ಯರ ವಾಹನಗಳ ನಿಲುಗಡೆಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿದೆ. ನಿಗದಿತ ಸ್ಥಳಗಳಲ್ಲ್ಲಿ ಸಾರ್ವಜನಿಕರು ತಮ್ಮ ವಾಹನಗಳ ನಿಲುಗಡೆ ಮಾಡಬೇಕು. ಯಾವುದೇ ಗೊಂದಲವಾಗದಂತೆ ಗಣ್ಯರು, ಅಧಿಕಾರಿಗಳು, ಮಾಧ್ಯಮದವರು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಭೋಜನಾ ವ್ಯವಸ್ಥೆ ಮಾಡಲಾಗಿದೆ ಎಂದರಲ್ಲದೇ, ಸಾರ್ವಜನಿಕರಿಗಾಗಿ 50 ಕಡೆ ಊಟದ ಸ್ಟಾಲ್ ವ್ಯವಸ್ಥೆ ಮಾಡುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇಂಜಿನಿಯರ್‌ಗೆ ಸೂಚಿಸಿದರು.
ಅಂಗವಿಕಲರಿಗೆ ಕುಳಿತುಕೊಳ್ಳಲು ಪ್ರತ್ಯೇಕ ಸ್ಥಳ ನಿಗದಿ ಮಾಡಲಾಗಿದ್ದು, ಮುಖ್ಯಮಂತ್ರಿಗಳ ಭೇಟಿಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. 20ಕ್ಕೂ ಹೆಚ್ಚು ವ್ಹೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಇಲಾಖಾವಾರು ಸುಮಾರು 40 ವಸ್ತು ಪ್ರದರ್ಶನ ಮಳಿಗೆ ತೆರೆಯಲಾಗುತ್ತಿದ್ದು, ಇವುಗಳ ಮೂಲಕ ಸಾರ್ವಜನಿಕರಿಗೆ ಆಯಾ ಇಲಾಖೆಗಳಲ್ಲಿ ಇರುವ ಸರ್ಕಾರಿ ಯೋಜನೆಗಳು, ಸೌಲಭ್ಯಗಳು ಹಾಗೂ ಅರ್ಜಿ ಸಲ್ಲಿಕೆ ವಿಧಾನ ಮುಂತಾದವುಗಳ ಬಗ್ಗೆ ಸ್ಥಳದಲ್ಲೇ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು.
ಜನತಾ ದರ್ಶನಕ್ಕೆ ಬರುವ ಸಾರ್ವಜನಿಕರಿಗಾಗಿ ಹೆಲ್ಪ್ ಡೆಸ್ಕ್, ಅರ್ಜಿ ಸ್ವೀಕೃತಿ ಕೌಂಟರ್ ಹಾಗೂ ರಿಜಿಸ್ಟ್ರೇಷನ್ ಕೌಂಟರ್ ತೆರೆಯಲಾಗಿದೆ. ರಿಜಿಸ್ಟ್ರೇಷನ್ ಕೌಂಟರ್‌ನಲ್ಲಿ ನೀಡುವ ಟೋಕನ್ ನಂಬರ್(ರೆಫೆರೆನ್ಸ್ ಸಂಖ್ಯೆ) ಇದ್ದಲ್ಲಿ ಮಾತ್ರ ಸಿಎಂ ಜನತಾ ದರ್ಶನಕ್ಕೆ ಅವಕಾಶವಿರುತ್ತದೆ. ರೆಫೆರೆನ್ಸ್ ಸಂಖ್ಯೆಯಿಂದ ಅರ್ಜಿದಾರರು ತಮ್ಮ ಅರ್ಜಿಯ ಸ್ಥಿತಿ-ಗತಿ ತಿಳಿಯಬಹುದಾಗಿದೆ ಎಂದರು.
ಆಯಾ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇಲಾಖೆಗೆ ಸಂಬಂಧಿಸಿದ ಮಾಹಿತಿ ಇಟ್ಟುಕೊಂಡಿರಬೇಕು. ಜನತಾ ದರ್ಶನ ಸಂದರ್ಭದಲ್ಲಿ ತಮ್ಮ ಇಲಾಖೆಗಳ ಬಗ್ಗೆ ಅರ್ಜಿದಾರರು ಸಮಸ್ಯೆಗಳ ಬಗ್ಗೆ ಅರ್ಜಿ ನೀಡುವಾಗ ಸಂಬಂಧಪಟ್ಟ ಅಧಿಕಾರಿಗಳು ವೇದಿಕೆ ಮೇಲೆ ಬಂದು ಸಮಸ್ಯೆಗಳ ಕುರಿತು ವಿವರಣೆ ನೀಡಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ. ರಾಜಾ, ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ಬಿ. ಶರಣಪ್ಪ, ಸಹಾಯಕ ಆಯುಕ್ತ ರಾಹುಲ್ ಪಾಂಡ್ವೆ ಹಾಗೂ ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಜನತಾ ದರ್ಶನಕ್ಕೂ ಮುನ್ನ ಸುಮಾರು ಅರ್ಧ ಗಂಟೆ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಚೆಕ್, ವಾಹನಗಳ ಕೀಲಿ ಕೈ ಮುಂತಾದವುಗಳ ಮುಂತಾದ ಹಲವು ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ಈ ಸಂಬಂಧ ಫಲಾನುಭವಿಗಳನ್ನು ಆಯಾ ಇಲಾಖೆಗಳು ಕರೆತರಬೇಕು. ಜಿಲ್ಲಾ ಪಂಚಾಯತಿಯಿಂದ 264 ಫಲಾನುಭವಿಗಳಿಗೆ ವಸತಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಹೊಲಿಗೆ ಯಂತ್ರ, ಅಂಗವಿಕಲರಿಗೆ ಝೆರಾಕ್ಸ್ ಮಷಿನ್ ವಿತರಣೆ, ಕೃಷಿ ಇಲಾಖೆಯಿಂದ 100 ಜನಕ್ಕೆ ಕೃಷಿ ಭಾಗ್ಯ, 25 ಜನಕ್ಕೆ ಡಿಜಿಟಲ್ ಇಂಜಿನ್, ಕೃಷಿ ಯಂತ್ರ ಟ್ರ್ಯಾಕ್ಟರ್, ಕೃಷಿ ಸಲಕರಣೆ ಮುಂತಾದವುಗಳನ್ನು ಮುಖ್ಯಮಂತ್ರಿಗಳು ವಿತರಿಸುವರು.
• ಆರ್. ವೆಂಕಟೇಶಕುಮಾರ,
ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.