ಕಡೂರು ಕನಸು ಅರ್ಧಂಬರ್ಧ


Team Udayavani, Jun 20, 2019, 3:55 PM IST

hv-tdy-5..

ಹಾವೇರಿ: ಕಡೂರ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿ ವಾಸ್ತವ್ಯ ಮಾಡಿದ್ದ ಮನೆ.

ಹಾವೇರಿ: ನಡೆದುಕೊಂಡು ಹೋಗಲು ಸಹ ಸಾಧ್ಯವಾಗದ ರೀತಿಯಲ್ಲಿ ಹದಗೆಟ್ಟಿದ್ದ ರಸ್ತೆಗಳು ಕಾಂಕ್ರೀಟ್ ರಸ್ತೆಗಳಾಗಿ ರೂಪುಗೊಂಡು ಗ್ರಾಮಸ್ಥರ ಬಹುವರ್ಷಗಳ ಬೇಡಿಕೆ ಈಡೇರಿತ್ತು. ರಸ್ತೆ ಅಭಿವೃದ್ಧಿಯಾಗಿದ್ದರಿಂದ ಗ್ರಾಮಸ್ಥರು ಖುಷಿಪಟ್ಟು ಸಂಭ್ರಮಿಸಿದ್ದರು.

-ಇದು ಎಚ್.ಡಿ. ಕುಮಾರಸ್ವಾಮಿ ಈ ಹಿಂದೆ 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಆಗಿನ ಹಿರೇಕೆರೂರು ತಾಲೂಕಿನ ಕಡೂರು ಗ್ರಾಮದಲ್ಲಿ ಮಾಡಿದ್ದ ಗ್ರಾಮ ವಾಸ್ತವ್ಯದ ಪ್ರಮುಖ ಎಫೆಕ್ಟ್. ಸಿಎಂ ಕುಮಾರಸ್ವಾಮಿ ಕಡೂರ ಗ್ರಾಮದಲ್ಲಿ 19-9-2006ರಂದು ಗ್ರಾಮ ವಾಸ್ತವ್ಯ ಮಾಡಿದ್ದರು. ಈ ಗ್ರಾಮ ವಾಸ್ತವ್ಯದಿಂದ ಗ್ರಾಮದ ರಸ್ತೆಗಳ ಚಿತ್ರಣವೇ ಬದಲಾಯಿತು. ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯದ ಪರಿಣಾಮ ಅವರು ಅಂದು ಘೋಷಿಸಿದಂತೆ ಸುವರ್ಣ ಗ್ರಾಮ ಯೋಜನೆಯು ಸಂಪೂರ್ಣವಾಗಿ ಜಾರಿಯಾಗಿ ಗ್ರಾಮದ ರಸ್ತೆಗಳೆಲ್ಲಾ ಇಂದು ಕಾಂಕ್ರಿಟ್ ರಸ್ತೆಗಳಾಗಿವೆ.

ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಮೊದಲು ಗ್ರಾಮ ಎಲ್ಲ ರಸ್ತೆಗಳು ಕೆಸರುಗದ್ದೆ, ಹೊಂಡಗಳ ದಾರಿ, ಕಲ್ಲು ಮಣ್ಣುಗಳಿಂದ ಕೂಡಿದ್ದವು. ಜನ, ವಾಹನ ಸಂಚಾರ ದುಸ್ತರವಾಗಿತ್ತು. ಸಿಎಂ ಗ್ರಾಮ ವಾಸ್ತವ್ಯದ ಬಳಿಕ ಅನೇಕ ರಸ್ತೆಗಳು ಕಾಂಕ್ರಿಟ್ ಕಂಡವು. ಇನ್ನಷ್ಟು ರಸ್ತೆಗಳು ಡಾಂಬರ್‌ ರಸ್ತೆಗಳಾದವು. ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಸಹ ತಕ್ಕಮಟ್ಟಿಗೆ ಬಗೆಹರಿಯಿತು. ತನ್ಮೂಲಕ ಗ್ರಾಮದ ಬಹುವರ್ಷಗಳ ಬೇಡಿಕೆ ಈಡೇರಿತ್ತು.

ಧನಸಹಾಯ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಡೂರ ಗ್ರಾಮದ ವಾಸ್ತವ್ಯದಿಂದ ರಸ್ತೆ, ನೀರಿಗೆ ಸಂಬಂಧಿಸಿ ಗುರುತರ ಬದಲಾವಣೆಯಾಗುವ ಜತೆಗೆ ಅನೇಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮುಖ್ಯಮಂತ್ರಿಯವರ ಬಳಿ ಧನಸಹಾಯ ಕೇಳಿದ್ದರು. ಸಾಕಷ್ಟು ಜನರಿಗೆ ಧನಸಹಾಯವೂ ಸಿಕ್ಕಿತ್ತು. ಎಸ್‌ಸಿ ಕಾಲೋನಿ ಸ್ಥಳಾಂತರ, ಪಪೂ ಕಾಲೇಜ್‌ ಮಂಜೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸುವ ಬೇಡಿಕೆ ಇನ್ನೂ ಈಡೇರಿಲ್ಲ.

ಬಿಸಿಎಂ ಹಾಸ್ಟೆಲ್, ರೈತರ ಜಮೀನುಗಳಿಗೆ ನೀರು ಹರಿಸುವ ಯೋಜನೆ, ಕುಮದ್ವತಿ ನದಿಗೆ ಬ್ಯಾರೇಜ್‌ ನಿರ್ಮಾಣ. ಎಸ್‌ಸಿ ಕಾಲೋನಿ ಸ್ಥಳಾಂತರ ಹಾಗೂ ಸರ್ಕಾರಿ ಜಮೀನಿನಲ್ಲಿ ನಿವೇಶನ ಮಾಡಿ ಮನೆಯಿಲ್ಲದ ಕಡುಬಡವರಿಗೆ ನಿವೇಶನಗಳನ್ನು ಹಂಚುವುದು ಸೇರಿದಂತೆ ಹಲವು ಬೇಡಿಕೆಗಳು ಗ್ರಾಮಸ್ಥರದ್ದಾಗಿದ್ದು ಇನ್ನೊಮ್ಮೆ ಮುಖ್ಯಮಂತ್ರಿ ತಮ್ಮ ಗ್ರಾಮದಲ್ಲಿ ವಾಸ್ತವ್ಯ ಮಾಡಿದರೆ ಈ ಬೇಡಿಕೆಗಳನ್ನು ಈಡೇರಿಸಿಕೊಳ್ಳಬಹುದು ಎಂಬ ಕನಸು ಗ್ರಾಮಸ್ಥರದ್ದಾಗಿದೆ.

 

•ಎಚ್.ಕೆ.ನಟರಾಜ್‌

ಟಾಪ್ ನ್ಯೂಸ್

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.