ಮನ್ಸೂರ್‌ ಖಾನ್‌ ವಿರುದ್ಧ ಸಮನ್ಸ್‌

24ರಂದು ಜಾರಿ ನಿರ್ದೇಶನಾಲಯದ ಕಚೇರಿಗೆ ಖುದ್ದಾಗಿ ಹಾಜರಾಗಲು ಆರೋಪಿಗೆ ಸೂಚನೆ

Team Udayavani, Jun 21, 2019, 7:46 AM IST

bng-tdy-1..

ಐಎಂಎ ಜ್ಯುವೆಲರ್ಸ್‌ ಮಳಿಗೆಯಲ್ಲಿ ಗುರುವಾರ ಎಸ್‌ಐಟಿ ವಶಕ್ಕೆ ಪಡೆದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ದಾಖಲೆಗಳನ್ನು ಪೊಲೀಸರು ವಾಹನದಲ್ಲಿ ಇರಿಸಿದರು.

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣ ಕುರಿತು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವ ಜಾರಿ ನಿರ್ದೇಶನಾಲಯ (ಇ.ಡಿ) ತಲೆಮರೆಸಿಕೊಂಡಿರುವ ಮೊಹಮ್ಮದ್‌ ಮನ್ಸೂರ್‌ ಖಾನ್‌ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ.

ಜೂ.10ರಂದು ಪ್ರಕರಣ ಬಯಲಾಗುತ್ತಿದ್ದಂತೆ ತೆರೆಮರೆಯಲ್ಲಿ ಐಎಂಎ ಸಮೂಹ ಸಂಸ್ಥೆಗಳು ಹಾಗೂ ಮನ್ಸೂರ್‌ ಖಾನ್‌ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದ ಇಡಿ ಅಧಿಕಾರಿಗಳು, ಇದೀಗ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಆತನ ವಿರುದ್ಧ ಲೇವಾದೇವಿ ನಿಯಂತ್ರಣ ಕಾಯ್ದೆ (ಪಿಎಂಎಲ್ಎ) ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೇಮಾ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾದ ಮನ್ಸೂರ್‌ ಖಾನ್‌ ಅವ್ಯವಹಾರದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿರುವ ಜಾರಿ ನಿರ್ದೇಶನಾಲಯ, ಜೂ.24ರಂದು ಬೆಳಗ್ಗೆ 11 ಗಂಟೆಗೆ ಇ.ಡಿ ಕಚೇರಿಗೆ ಖುದ್ದು ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದ್ದು, ಶಿವಾಜಿನಗರದಲ್ಲಿರುವ ಐಎಂಎ ಜ್ಯುವೆಲರ್ಸ್‌ ಸಂಸ್ಥೆ ಕಟ್ಟಡದ ಪ್ರವೇಶ ದ್ವಾರದಲ್ಲಿ ಸಮನ್ಸ್‌ ಅಂಟಿಸಿದ್ದರು. ಕೆಲ ಹೊತ್ತಿನ ಬಳಿಕ ತೆಗೆದಿದ್ದಾರೆ.

ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕ ಆರ್‌.ಎಂ.ಬಸವರಾಜು ಸಮನ್ಸ್‌ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವ ಸಂದರ್ಭದಲ್ಲಿ ಒಂದು ಪಾಸ್‌ಪೋರ್ಟ್‌ ಫೋಟೋ, ಆಧಾರ್‌ಕಾರ್ಡ್‌, ಪಾಸ್‌ಪೋರ್ಟ್‌, ಪಾನ್‌ಕಾರ್ಡ್‌, ಭಾರತೀಯ ಮತ್ತು ವಿದೇಶಿ ಗುರುತಿನ ಚೀಟಿ, ವಿವಿಧ ಬ್ಯಾಂಕ್‌ಗಳಲ್ಲಿರುವ ಖಾತೆಗಳ ವಿವರ, ಪಾಸ್‌ಬುಕ್‌, ಭಾರತ ಮತ್ತು ವಿದೇಶದಲ್ಲಿರುವ ಸ್ಥಿರಾಸ್ತಿ, ಚರಾಸ್ತಿಗೆ ಸೇರಿದ ದಾಖಲೆಗಳು, ಸಂಸ್ಥೆ ಹಾಗೂ ವೈಯಕ್ತಿಕ ಆದಾಯ ತೆರಿಗೆ ಪಾವತಿಗೆ ಸಂಬಂಧಿಸಿದ ದಾಖಲೆಗಳು, ಸಂಸ್ಥೆಗೆ ಸೇರಿದ ಭಾರತ ಮತ್ತು ವಿದೇಶದ ದಾಖಲೆಗಳನ್ನು ಕಡ್ಡಾಯವಾಗಿ ತರಲೇಬೇಕು ಎಂದು ಸಮನ್ಸ್‌ನಲ್ಲಿ ಸೂಚಿಸಿದ್ದಾರೆ.

ಎಸ್‌ಐಟಿಗೆ ಇ.ಡಿ ಸಾಥ್‌: ಪ್ರಕರಣದಲ್ಲಿ ಮಧ್ಯಪ್ರವೇಶಿಸಿರುವ ಜಾರಿ ನಿರ್ದೇಶನಾಲಯ, ತನಿಖೆಯಲ್ಲಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಾಥ್‌ ನೀಡಿದ್ದು, ಜಂಟಿ ಕಾರ್ಯಾಚರಣೆ ನಡೆಸುತ್ತಿವೆ. ಗುರುವಾರ ಬೆಳಗ್ಗೆ ಬೀಗ ಮುದ್ರೆ ಹಾಕಿದ್ದ ಶಿವಾಜಿನಗರದ ಐಎಂಎ ಜ್ಯುವೆಲರ್ಸ್‌ ಪ್ರವೇಶ ದ್ವಾರವನ್ನು ತೆರೆದ ಡಿಸಿಪಿ ಗಿರೀಶ್‌, ಎಸಿಪಿ ಬಾಲರಾಜ್‌, ರವಿಶಂಕರ್‌ ನೇತೃತ್ವದ ಎಸ್‌ಐಟಿ ತಂಡ ಹಾಗೂ ಇಡಿಯ ಸಹಾಯಕ ನಿರ್ದೇಶಕ ಬಸವರಾಜು ಅವರ ನೇತೃತ್ವದ ತಂಡ ತಡರಾತ್ರಿವರೆಗೂ ಜ್ಯುವೆಲರ್ಸ್‌ನಲ್ಲಿರುವ ಕೆಜಿಗಟ್ಟಲೇ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಲಾಕರ್‌ನಲ್ಲಿರುವ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಆರೇಳು ಟ್ರಂಕ್‌ಗಳಲ್ಲಿ ಅವುಗಳನ್ನು ತೆಗೆದುಕೊಂಡು ಹೋಗಿದೆ.

ಕೆಲ ತಿಂಗಳ ಹಿಂದೆಯೇ ದೇಶ ಬಿಟ್ಟು ತೆರಳಲು ಸಿದ್ದತೆ ನಡೆಸಿದ್ದ ಮನ್ಸೂರ್‌ ಖಾನ್‌, ಜೂನ್‌ ಮೊದಲ ವಾರದಲ್ಲೇ ಚಿನ್ನಾಭರಣ ಮಳಿಗೆಯಲ್ಲಿರುವ ಚಿನ್ನಾಭರಣಗಳನ್ನು ಬೇರೆಡೆ ಸಾಗಾಟ ಮಾಡಿದ್ದಾನೆ ಎಂದು ಹೇಳಲಾಗಿದೆ. ಈ ಅವಧಿಯಲ್ಲಿ ಅಂಗಡಿಯಿಂದ ಅನುಮಾನಸ್ಪದವಾಗಿ ಕೆಲ ಬಾಕ್ಸ್‌ಗಳನ್ನು ಹೊರಗಡೆ ಕೊಂಡೊಯ್ಯಲಾಗಿದೆ. ಈ ದೃಶ್ಯ ಅಲ್ಲಿರುವ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿಗೆ ಪತ್ರ:

ಐಎಂಎ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂ. ಕಳೆದುಕೊಂಡಿ ರುವ ಸಂತ್ರಸ್ತರಿಗೆ ನ್ಯಾಯ ಕೊಡಿಸಿ, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಹಜರತ್‌ ಟಿಪ್ಪುಸುಲ್ತಾನ್‌ ಅಮನ್‌ ಫೆಡರೇಷನ್‌ನ ಬೆಂಗಳೂರು ಅಧ್ಯಕ್ಷ ಮುರ್ತುಜಾ ಖಾನ್‌ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್‌, ಜಂಟಿ ನಿರ್ದೇಶಕ ಅಮಿತ್‌ ನಾರಾ ಅವರಿಗೆ ಪತ್ರ ಬರೆದಿರುವ ಮುರ್ತುಜಾ ಖಾನ್‌, ಅಧಿಕ ಬಡ್ಡಿ ಹಾಗೂ ಲಾಂಭಾಂಶ ಕೊಡುವುದಾಗಿ 13 ವರ್ಷಗಳಿಂದ ಮೊಹಮ್ಮದ್‌ ಮನ್ಸೂರ್‌ ಖಾನ್‌ ಶಿವಾಜಿನಗರದಲ್ಲಿರುವ ಐಎಂಎಂ ಸಂಸ್ಥೆ ಮೂಲಕ ಸಾವಿರಾರು ಮಂದಿಯಿಂದ 1,600 ಕೋಟಿ ರೂ.ಗೂ ಅಧಿಕ ಹಣ ಸಂಗ್ರಹಿಸಿದ್ದಾನೆ. ಆದರೆ, ಇದೀಗ ಹಣ ಹಿಂದಿರುಗಿಸದೆ ಆರೋಪಿ ಜೂನ್‌ 10ರಿಂದ ತಲೆಮರೆಸಿಕೊಂಡಿದ್ದು, ಹೂಡಿಕೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಸಂಬಂಧ ಆರೋಪಿಯ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದುವರೆಗೂ 40 ಸಾವಿರಕ್ಕೂ ಅಧಿಕ ದೂರುಗಳು ದಾಖಲಾಗಿವೆ. ಹೀಗಾಗಿ ಸಂಘಟನೆಯ ಮನವಿಯನ್ನು ಪರಿಗಣಿಸಿ ಹೂಡಿಕೆ ಮಾಡಿರುವ 2.25 ಲಕ್ಷ ಮಂದಿಗೆ ನ್ಯಾಯ ಕೊಡಿಸಬೇಕು ಎಂದು ಮುರ್ತುಜಾ ಖಾನ್‌ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.