ಹೇರೂರ ಗ್ರಾಮಕ್ಕೀಗ ಯೋಜನೆಗಳ ಸಿಂಗಾರ!

•ಶಾಲೆಗೆ ಬಾರದ ಶಿಕ್ಷಕರು ಈಗ ಶಿಸ್ತಿನ ಗುರುಗಳು!

Team Udayavani, Jun 21, 2019, 9:47 AM IST

21-June-1

ಕಲಬುರಗಿ: ಹೇರೂರ ಬಿ.ದಲ್ಲಿದ್ದ ಪಶು ಚಿಕಿತ್ಸಾಲಯಕ್ಕೆ ಬಣ್ಣ ಬಳೆದು, ನಾಮಫ‌ಲಕ ಅಳವಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಹಣಮಂತರಾವ ಭೈರಾಮಡಗಿ
ಕಲಬುರಗಿ:
ಗ್ರಾಮಗಳಲ್ಲಿ ಹಲವಾರು ಸರ್ಕಾರಿ ಸೌಲಭ್ಯಗಳಿವೆ. ಆದರೆ ಅವುಗಳು ಈಗ ಜನರನ್ನು ತಲುಪಲು ಮುಂದಾಗುತ್ತಿರುವುದು ತಾಲೂಕಿನ ಹೇರೂರ ಬಿ ಗ್ರಾಮದಲ್ಲಿ ಮುಖ್ಯಮಂತ್ರಿಗಳು ವಾಸ್ತವ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ!

ಗ್ರಾಮದಲ್ಲಿರುವ ಪಶು ಚಿಕಿತ್ಸಾಲಯ, ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ, ಆಗೊಮ್ಮೆ-ಈಗೊಮ್ಮೆ ಕಾರ್ಯನಿರ್ವಹಿಸುತ್ತಿದ್ದ ಪ್ರಾಥಮಿಕ ಉಪ ಆರೋಗ್ಯ ಕೇಂದ್ರ, ಹೆಸರಿಗೆ ಮಾತ್ರ ಇದ್ದ ಅಂಗನವಾಡಿ ಕೇಂದ್ರಗಳು ಸರಿಯಾಗಿ ನಡೆಯಲು ಮುಖ್ಯಮಂತ್ರಿಯೇ ಬರಬೇಕಾಯಿತು. ಜೂ.22ರಂದು ಸಿಎಂ ಕುಮಾರಸ್ವಾಮಿ ಹೇರೂರ ಬಿ. ಗ್ರಾಮದಲ್ಲಿ ವಾಸ್ತವ್ಯ ಹೂಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಯೋಜನೆಗಳು ಈಗ ಅನಾವರಣಗೊಳ್ಳುತ್ತಿವೆ. ಸರ್ಕಾರದ ಆಡಳಿತ ಯಂತ್ರ ಚುರುಕಾಗಿ ಎಲ್ಲ ಇಲಾಖೆಗಳು ಕಾರ್ಯೋನ್ಮುಖವಾಗುತ್ತಿವೆ.

ಹೇರೂರ ಬಿ. ಗ್ರಾಮದಲ್ಲಿ ಪಶು ಚಿಕಿತ್ಸಾಲಯಕ್ಕೆ ಸ್ವಂತ ಕಟ್ಟಡವಿದೆ. ಆಸ್ಪತ್ರೆಯಿಂದ ದನಕರುಗಳಿಗೆ ಚಿಕಿತ್ಸೆ ನೀಡದೇ ಅದೆಷ್ಟೋ ವರ್ಷಗಳಾಗಿವೆ. ಆದರೆ ಈಗ ಸ್ವಚ್ಛಗೊಳಿಸಿ ಬಣ್ಣ ಬಳೆದು ಒಂದೊಂದೇ ಅವಶ್ಯಕ ಪರಿಕರಗಳನ್ನು ತಂದಿಡಲಾಗುತ್ತಿದೆ. ಚಿಕಿತ್ಸಾಲಯ ಕಾರ್ಯಾರಂಭವಾಗದೇ ಇರುವ ಹಿನ್ನೆಲೆಯಲ್ಲಿ ಒಂದು ಕೋಣೆಯನ್ನು ಗ್ರಾಪಂ ಉಗ್ರಾಣವನ್ನಾಗಿ ಬಳಕೆ ಮಾಡಿಕೊಳ್ಳಲಾಗಿದೆ. ಪಶು ಆಸ್ಪತ್ರೆ ತೆರೆದಿದ್ದೇ ನೋಡಿಲ್ಲ, ಇನ್ನು ವೈದ್ಯರಂತು ಬರುವುದೇ ಇಲ್ಲ. ಇನ್ನುಳಿದಂತೆ ನದಿ ದಂಡೆಯಲ್ಲಿದ್ದರೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಈಗ ದುರಸ್ತಿಗೊಳಿಸಿ ಕಾರ್ಯಾರಂಭ ಮಾಡಲಾಗುತ್ತಿದೆ. ಗ್ರಾಮದ ಜನನಿಬಿಡ ಪ್ರದೇಶದಲ್ಲಿ ಅಂಗನವಾಡಿಗೆ ಸ್ವಂತ ಕಟ್ಟಡವಿದ್ದರೂ ಅದನ್ನು ಬೇರೆಯವರಿಗೆ ನೀಡಿ ಯಾರಧ್ದೋ ಮನೆಯಲ್ಲಿ ನಡೆಸಲಾಗುತ್ತಿದೆ. ಏಕೆಂದರೆ ಅಲ್ಲಿ ಅಂಗನವಾಡಿ ನಡೆಯುತ್ತಿದೆಯೋ ಇಲ್ಲವೋ ಎನ್ನುವುದು ಯಾರಿಗೂ ತಿಳಿಯಲ್ಲ. ಪ್ರಾಥಮಿಕ ಉಪ ಆರೋಗ್ಯ ಕೇಂದ್ರವಿದೆಯಾದರೂ ವಾರಕ್ಕೊಮ್ಮೆ ಕಾರ್ಯನಿರ್ವಹಿಸಿದರೆ ಅದೇ ದೊಡ್ಡದು. ಹೀಗೆ ಹತ್ತಾರು ಆಡಳಿತ ಲೋಪಗಳು ಸಾಲು-ಸಾಲಾಗಿ ಕಂಡು ಬರುತ್ತವೆ.

ಬಾಯಿ ಬಿಡದ ಜನತೆ: ಗ್ರಾಮದಲ್ಲಿ 8ರಿಂದ 10 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಸಮುದಾಯಕ್ಕೊಬ್ಬರು ಎನ್ನುವಂತೆ ಗ್ರಾಮದ ಯಾವುದೇ ಓಣಿಯಲ್ಲಿ ಮದ್ಯ ಮಾರಾಟವಿದೆ. ಯುವಕರು ಕುಡಿತದ ಚಟಕ್ಕೆ ಒಳಗಾಗಿ ಕುಟುಂಬಗಳು ಹಾಳಾಗುತ್ತಿದ್ದರೂ ಯಾರೂ ಧ್ವನಿ ಎತ್ತುತ್ತಿಲ್ಲ. ಇನ್ನುಳಿದಂತೆ ಗ್ರಾಮದ ದಡದಲ್ಲೇ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತದೆ. ಈಗಷ್ಟೇ ಸ್ವಲ್ಪಮಟ್ಟಿಗೆ ಕಂಡುಬರುತ್ತಿಲ್ಲ. ಆದರೆ ಈ ಎರಡು ಅಕ್ರಮಗಳ ವಿರುದ್ಧ ಗ್ರಾಮಸ್ಥರು ಎಲ್ಲೂ ಬಹಿರಂಗವಾಗಿ ಸಂಘಟನಾತ್ಮಕವಾಗಿ ಮಾತನಾಡುತ್ತಿಲ್ಲ. ದೊಡ್ಡವರ ಉಸಾಬರೀ ನಮಗ್ಯಾಕ್ರೀ ಎನ್ನುತ್ತಾ ಹಿಂದೆಯೇ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಆದರೆ ಈ ಎಲ್ಲ ಅಕ್ರಮಗಳಿಗೆ ಕಡಿವಾಣ ಹಾಕಲು ತಮ್ಮೂರಲ್ಲೊಂದು ಪೊಲೀಸ್‌ ಠಾಣೆ ಆಗಬೇಕುನ್ನುತ್ತಾರೆ ಹೇರೂರ ಬಿ. ಗ್ರಾಮಸ್ಥರು.

ಅಷ್ಟೇ ಏಕೆ ನಾಲ್ಕೈದು ವರ್ಷದ ಹಿಂದೆ ಗ್ರಾಮದಲ್ಲಿ 3.65 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಜಲ ನಿರ್ಮಲ ಯೋಜನೆ ಅಡಿ ಜಲ ಸಂಗ್ರಹಾಗಾರ ಹಾಗೂ ನೀರು ಶುದ್ಧೀಕರಣ ಟ್ಯಾಂಕ್‌ ತುಕ್ಕು ಹಿಡಿದು ಅವಸಾನದ ಅಂಚಿಗೆ ತಲುಪಿದೆ. ಶಾಲಾ ಕಟ್ಟಡಗಳು ಸೇರಿದಂತೆ ಇತರ ಯೋಜನೆಗಳು ಕಾಗದದಲ್ಲೇ ಮುಗಿಸಲಾಗಿದೆ. ಗ್ರಾಮದ ಶಾಲಾ ಶಿಕ್ಷಕನೇ ಶಾಲಾ ಕೋಣೆಗಳ ನಿರ್ಮಾಣ ಗುತ್ತಿಗೆ ಹಿಡಿದು ಕಳಪೆಯಾಗಿ ನಿರ್ಮಿಸಲಾಗಿದೆ. ಗ್ರಾಮದ ಕೆಲವರು ತಮ್ಮ ಮಕ್ಕಳನ್ನು ಅಕ್ಕಪಕ್ಕದ ಗ್ರಾಮದ ಖಾಸಗಿ ಶಾಲೆಗೆ ಕಳುಹಿಸುತ್ತಿರುವುದನ್ನು ನೋಡಿದರೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಸರಿಯಾಗಿ ನಡೆಯುತ್ತಿಲ್ಲ ಎನ್ನುವುದನ್ನು ನಿರೂಪಿಸುತ್ತದೆ.

ಟಾಪ್ ನ್ಯೂಸ್

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.