ಗ್ರಾಮೀಣ ಸಂಸ್ಕೃತಿ ಉಳಿಸಿ-ಬೆಳೆಸಿ
ಆಚರಣೆಗಳಿಗಿದೆ ಧಾರ್ಮಿಕ-ವೈಜ್ಞಾನಿಕ-ಸಾಂಸ್ಕೃತಿಕ ಹಿನ್ನೆಲೆ • ವಿಜೇತರಿಗೆ ಬಹುಮಾನ ವಿತರಣೆ
Team Udayavani, Jun 21, 2019, 10:17 AM IST
ಮಾನ್ವಿ: ನಮ್ಮ ಸಂಸ್ಕೃತಿ, ಸಂಪ್ರದಾಯದಲ್ಲಿನ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಪಟ್ಟಣದ ಪುರಸಭೆ ಆವರಣದಲ್ಲಿ ರಾಜಾ ಅಂಬಣ್ಣ ನಾಯಕ ದೊರೆ ಫೌಂಡೇಷನ್ ವತಿಯಿಂದ ಕಾರಹುಣ್ಣಿಮೆ ಅಂಗವಾಗಿ ಹಮ್ಮಿಕೊಂಡಿದ್ದ ರೈತರಿಗೆ ಸನ್ಮಾನ ಹಾಗೂ ಎತ್ತುಗಳ ಓಟದ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಂದು ಆಚರಣೆಗಳಿಗೆ ವೈಜ್ಞಾನಿಕ, ಧಾರ್ಮಿಕ, ಸಂಸ್ಕೃತಿ, ಸಂಪ್ರದಾಯದ ಹಿನ್ನೆಲೆ ಇರುತ್ತದೆ. ಎತ್ತಿನ ಓಟದ ಸ್ಪರ್ಧೆಗಳು ಗ್ರಾಮೀಣ ಸೊಗಡನ್ನು ಹೆಚ್ಚಿಸುತ್ತವೆ. ಇಂಥ ಆಚರಣೆಗಳು ಇಂದು ವಿನಾಶ ಅಂಚಿನಲ್ಲಿದ್ದು, ನಾವೆಲ್ಲ ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗಬೇಕಾಗಿದೆ ಎಂದರು.
ಕಳೆದ ನಾಲ್ಕೈದು ವರ್ಷಗಳಿಂದ ತಾಲೂಕಿನಲ್ಲಿ ಸರಿಯಾಗಿ ಮಳೆಯಾಗುತ್ತಿಲ್ಲ. ಈ ವರ್ಷ ಉತ್ತಮ ಮಳೆಯಾಗಿ ರೈತರ ಮುಖದಲ್ಲಿ ನಗು ಬರಲಿ. ಉತ್ತಮ ಬೆಳೆ ಬರಲಿ ಎಂದು ಆಶಿಸಿದರು.
ನೀರಾವರಿ ಸಮಸ್ಯೆ ಬಗೆ ಹರಿಸಲು ನವಲಿ ಗ್ರಾಮದ ಹತ್ತಿರ ಸಮಾನಾಂತರ ಜಲಾಶಯ ನಿರ್ಮಿಸುವ ಕುರಿತು ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ವೆಂಕಟರಾವ್ ನಾಡಗೌಡರೊಂದಿಗೆ ಚರ್ಚಿಸುವ ಮೂಲಕ ಪ್ರಯತ್ನ ನಡೆದಿದೆ ಎಂದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಬಲ್ಲಟಗಿ, ಪುರಸಭೆ ಮಾಜಿ ಅಧ್ಯಕ್ಷ ಎಂ.ಡಿ.ಇಸ್ಮಾಯಿಲ್, ಹಿರಿಯ ವಕೀಲರಾದ ಎ.ಬಿ.ಉಪ್ಪಳಮಠ, ಪುರಸಭೆ ಸದಸ್ಯರಾದ ತನ್ವೀರ್ ವಕೀಲ, ಶಿಕ್ಷಕರಾದ ಮಹಾದೇವಪ್ಪ, ಶ್ರೀಶೈಲಗೌಡ, ರಾಜಾಸಾಬ್ ಮಾತನಾಡಿದರು.
15ಕ್ಕೂ ಹೆಚ್ಚು ರೈತರನ್ನು ಸನ್ಮಾನಿಸಲಾಯಿತು. ಪುರಸಭೆ ಸದಸ್ಯ ರಾಜಾಮಹೇಂದ್ರ ನಾಯಕ ಎತ್ತಿನ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 10 ತೊಲಿ ಬೆಳ್ಳಿ ಕಡಗ, ದ್ವಿತೀಯ ಸ್ಥಾನ ಪಡೆದವರಿಗೆ 5 ತೊಲಿ ಬೆಳ್ಳಿ ಕಡಗ ವಿತರಿಸಿ ರೈತರನ್ನು ಸನ್ಮಾನಿಸಿದರು.
ಪುರಸಭೆ ಸದಸ್ಯರಾದ ಶರಣಪ್ಪ ಮೇದಾ, ಶಿವರಾಜ ನಾಯಕ, ಬಾಷಾಸಾಬ್, ಖಲೀಲ್ ಖುರೇಷಿ, ಶ್ರೀಕಾಂತ ಪಾಟೀಲ ಗೂಳಿ, ಪಿ.ರವಿಕುಮಾರ ವಕೀಲ, ಎಚ್.ದೇವರಾಜ, ಮೌನೇಶ ನಾಯಕ, ವೀರೇಶ ಅರೋಲಿ, ಪವನಕುಮಾರ ಶ್ರೇಷ್ಠಿ, ಸುರೇಶ ಕುರ್ಡಿ, ಶಂಕರ ಕುರ್ಡಿ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.