ಕೃಷಿ ಸಚಿವರ ತವರಲ್ಲಿ ಬಿತ್ತನೆ ಬೀಜಕ್ಕೂ ಬರ


Team Udayavani, Jun 21, 2019, 12:53 PM IST

cb-tdy-1..

ಬಾಗೇಪಲ್ಲಿ ತಾಲೂಕಿನ ಗೂಳೂರು ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು ಬಿತ್ತನೆ ಬೀಜಕ್ಕಾಗಿ ರೈತ ಸಂಪರ್ಕ ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು.

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಒಂದೆಡೆ ಮಳೆಗಾಗಿ ಅನ್ನದಾತರು ಆಕಾಶದತ್ತ ಚಾತಕ ಪಕ್ಷಿಗಳಂತೆ ಎದುರು ನೋಡುತ್ತಿದ್ದರೆ, ಮತ್ತೂಂದೆಡೆ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ಬಿತ್ತನೆ ಬೀಜಗಳು ಸಮರ್ಪಕವಾಗಿ ಕೈಗೆಟುಕದೇ ಕೃಷಿ ಸಚಿವರ ತವರು ಜಿಲ್ಲೆಯಲ್ಲಿ ರೈತರು ಪರದಾಡುತ್ತಿರುವುದು ಜಿಲ್ಲೆಯಲ್ಲಿ ಎದ್ದು ಕಾಣುತ್ತಿದೆ.

ಜಿಲ್ಲೆಯಲ್ಲಿ ಇಷ್ಟೊತ್ತಿಗಾಗಲೇ ಬಿತ್ತನೆ ಕಾರ್ಯ ಶೇ.25 ಮುಗಿಯಬೇಕಾಗಿತ್ತು. ಆದರೆ ಮಳೆರಾಯನ ಮುನಿಸು ಮುಂದುವರಿದಿರುವುದರಿಂದ ಬಿತ್ತನೆ ಕಾರ್ಯ ಇನ್ನೂ ಆರಂಭವಾಗಿಲ್ಲ. ಮಳೆಯಾಗಬಹುದೆಂಬ ಆಶಾಭಾವನೆಯಿಂದ ರೈತರು ಬಿತ್ತನೆ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಆದರೆ ರೈತರಿಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಗಬೇಕಾದ ಬಿತ್ತನೆ ಬೀಜ ಸಿಗದೇ ರೈತರು ಚಿಂತೆಗೀಡಾಗಿದ್ದು, ಅನಿವಾರ್ಯವಾಗಿ ಮಾರುಕಟ್ಟೆಯಲ್ಲಿ ಖಾಸಗಿಯಾಗಿ ದುಪ್ಪಟ್ಟು ದರ ಕೊಟ್ಟು ಖರೀದಿಸುವ ದುಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲೆಗೆ 1,549 ಕ್ವಿಂಟಲ್ ಬಿತ್ತನೆ ಬೀಜ: ಜಿಲ್ಲೆಯಲ್ಲಿ 1.54 ಲಕ್ಷ ಹೆಕ್ಟೇರ್‌ ಪ್ರಮಾಣದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಅದಕ್ಕಾಗಿ 17,800 ಕ್ವಿಂಟಲ್ನಷ್ಟು ಬಿತ್ತನೆ ಬೀಜದ ಬೇಡಿಕೆ ಇದ್ದರೂ ಇದುವರೆಗೂ ಜಿಲ್ಲೆಗೆ ಮಾತ್ರ ಪೂರೈಕೆಯಾಗಿರುವುದು ಬರೀ 1,549 ಕ್ವಿಂಟಲ್ ಮಾತ್ರ. ಹೀಗಾಗಿ ಜಿಲ್ಲೆಯಲ್ಲಿ ಬಿತ್ತನೆ ಬೀಜಕ್ಕೂ ಬರ ಬಂದಿದೆ.

ಇಡೀ ಜಿಲ್ಲೆಗೆ 43,943 ಟನ್‌ ರಸಗೊಬ್ಬರ ಬೇಡಿಕೆ ಇದ್ದರೂ ಜಿಲ್ಲೆಗೆ ಇದುವರೆಗೂ ಬರೀ 5,933 ಟನ್‌ ವಿವಿಧ ರಸಗೊಬ್ಬರ ಪೂರೈಕೆಯಾಗಿದೆ. ಆದ್ದರಿಂದ ಜಿಲ್ಲೆಯ ರೈತರು ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕಾಗಿ ರೈತ ಸಂಪರ್ಕ ಕೇಂದ್ರಗಳ ಮುಂದೆ ಸಾಲುಗಟ್ಟಿ ನಿಂತರೂ ಬಿತ್ತನೆ ಬೀಜ ಸಿಗುವುದು ಅನುಮಾನವಾಗಿದೆ.

ಕೃಷಿ ಇಲಾಖೆ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ರೈತ ಸಂಪರ್ಕ ಕೇಂದ್ರಗಳಿಗೆ ರೈತರ ಬೇಡಿಕೆಗೆ ತಕ್ಕಂತೆ ಅಗತ್ಯ ಬಿತ್ತನೆ ಬೀಜ ಪೂರೈಕೆ ಮಾಡಲಾಗಿದೆ ಎಂದು ಹೇಳುತ್ತಿದ್ದರೂ ಸಾಮಾನ್ಯ ರೈತಾಪಿ ಜನಕ್ಕೆ ಮಾತ್ರ ರೈತ ಸಂಪರ್ಕ ಕೇಂದ್ರಗಳು ಇದ್ದು ಇಲ್ಲದಂತೆ ಆಗಿದೆ.

ಇದಕ್ಕೆ ತಾಜಾ ಉದಾಹರಣೆ ಜಿಲ್ಲೆಯ ಬಾಗೇಪಲ್ಲಿ, ಚಿಂತಾಮಣಿ ತಾಲೂಕುಗಳಲ್ಲಿ ರೈತ ಸಂಪರ್ಕ ಕೇಂದ್ರಗಳು ಅವ್ಯವಸ್ಥೆಯಿಂದ ಕೂಡಿ ಕೇಳಿದ ಬಿತ್ತನೆ ಬೀಜ ಕೊಡದೇ ರೈತರನ್ನು ಅಲೆದಾಡಿಸುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಸಿಬ್ಬಂದಿ ಬಂಧು ಬಳಗಕ್ಕೆ: ರೈತ ಸಂಪರ್ಕ ಕೇಂದ್ರಗಳು ರೈತರ ಪರವಾಗಿರಬೇಕಾದದ್ದು, ಬಿಟ್ಟು ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಬಂಧು ಬಳಗ ಮತ್ತು ಬೇಕಾದವರಿಗೆ ಮಾತ್ರ ಬಿತ್ತನೆ ಬೀಜ, ಶೇಂಗಾ ದೊರೆಯುತ್ತಿದೆ. ಪ್ರಶ್ನಿಸಿದವರಿಗೆ ಉಡಾಫೆಯ ಉತ್ತರಗಳು ನೀಡಿ ದಿನನಿತ್ಯ ರೈತರು ಬಿತ್ತನೆ ಬೀಜಕ್ಕಾಗಿ ಪರದಾಡುವಂತೆ ಮಾಡುತ್ತಿದ್ದಾರೆ ಎಂದು ಜಿಲ್ಲೆಯ ಬಾಗೇಪಲ್ಲಿ ಮತ್ತಿತರ ತಾಲೂಕುಗಳಿಂದ ಕೇಳಿ ಬರುತ್ತಿವೆ.

ಹಣ ಕೊಡಬೇಕು: ಇಲಾಖೆ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರಗಳಿಗೆ ಹೋಗಿ ಅಲ್ಲಿಯೇ ಬಿತ್ತನೆ ಬೀಜಗಳು ಸಿಗುತ್ತವೆ ಎಂದು ಹೇಳಿ ಕಳಿಸುತ್ತಾರೆ. ಆದರೆ ನಾವು ಅಲ್ಲಿ ಹೋದರೆ ಕಾಸು ಕೊಟ್ಟರೆ ಬಿತ್ತನೆ ಬೀಜ ಕೊಡುತ್ತಾರೆ. ಇಲ್ಲಾಂದ್ರೆ ಕೇಳಿದ ಬಿತ್ತನೆ ಬೀಜ ಇನ್ನೂ ಬಂದಿಲ್ಲ ಎನ್ನುತ್ತಾರೆ.

ಇದ್ದರೂ ಇಲ್ಲಸಲ್ಲದ ದಾಖಲೆಗಳನ್ನು ತಂದು ಕೊಡಿಯೆಂದು ಹೇಳುತ್ತಾರೆಂದು ರೈತರು ಹೇಳಿದ್ದಾರೆ. ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳು ಒಂದು ಕಡೆ ಇದ್ದರೆ ಬಿತ್ತನೆ ಬೀಜದ ದಾಸ್ತಾನು ಕೊಠಡಿಗಳು ಮತ್ತೂಂದು ಕಡೆ ಇವೆ. ಅಲ್ಲಿ ಎಲ್ಲಾ ಹಣದ ಲೆಕ್ಕಾಚಾರ.

ಬಹುತೇಕ ಕಟ್ಟಡಗಳಿಗೆ ನಾಮಫ‌ಲಕಗಳು ಇಲ್ಲ. ತೂಕ, ಗುಣಮಟ್ಟದ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸುವಂತಿಲ್ಲ. ಅವರು ಕೊಟ್ಟದ್ದನ್ನು ತೆಗೆದುಕೊಂಡು ಹೋಗಬೇಕು. ನೆಲೆಗಡಲೆಗೆ ಭಾರೀ ಬೇಡಿಕೆ ಇದ್ದರೂ ರೈತ ಸಂಪರ್ಕ ಕೇಂದ್ರಗಳಲ್ಲಿ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ ಸಿಗುತ್ತಿಲ್ಲ ಎಂಬ ಆರೋಪ ಜಿಲ್ಲೆಯ ರೈತರಿಂದ ಕೇಳಿ ಬರುತ್ತಿದೆ.

ಒಟ್ಟಾರೆ ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವ ಗಾದೆಯಂತೆ ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಿಗೆ ಬಿತ್ತನೆ ಬೀಜ ಪೂರೈಕೆಯಾದರೂ ಮಧ್ಯವರ್ತಿಗಳ ಹಾಗೂ ಬಲಾಡ್ಯರ ಪಾಲಾಗಿ ಬಡ ರೈತರು ಪರದಾಡುವುದು ಸಾಮಾನ್ಯವಾಗಿದೆ. ಈ ಬಗ್ಗೆ ಜಿಲ್ಲೆಯ ಉಸ್ತುವಾರಿ ಸಚಿವ, ಕೃಷಿ ಸಚಿವರು ಇತ್ತಕಡೆ ಗಮನ ಹರಿಸಿ ರೈತರಿಗೆ ಅಗತ್ಯ ಬಿತ್ತನೆ ಬೀಜ ಸಮರ್ಪಕವಾಗಿ ಕೈಗೆಟುಕುವಂತೆ ಕೃಷಿ ಇಲಾಖೆಯನ್ನು ಕ್ರಿಯಾಶೀಲಗೊಳಿಸುವ ಕಾರ್ಯ ಮಾಡಬೇಕಿದೆ.

 

● ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.