ಯೋಗ ನಗರಿ ಮೈಸೂರಲ್ಲಿ ಯೋಗಾ ಯೋಗಾ


Team Udayavani, Jun 22, 2019, 3:00 AM IST

yoga-nagar

ಮೈಸೂರು ವಿಶಾಲವಾದ ಪ್ರದೇದಲ್ಲಿ ಅಹ್ಲಾದಕರ ಗಾಳಿ, ಮೆತ್ತನೆಯ ಹುಲ್ಲು ಹಾಸಿನ ಮೇಲೆ ಸಾಮೂಹಿಕವಾಗಿ ಯೋಗ ಪ್ರದರ್ಶಿಸುವ ಮೂಲಕ ಸಾವಿರಾರು ಮಂದಿ ಯೋಗಪಟುಗಳು 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಕ್ಷಿಯಾದರು. ಮೈಸೂರು ಜಿಲ್ಲಾಡಳಿತದ ವತಿಯಿಂದ ರೇಸ್‌ಕೋರ್ಸ್‌ ಆವರಣದಲ್ಲಿ ಆಯೋಜನೆ ಮಾಡಿದ್ದ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮಂದಿ ಯೋಗಪಟುಗಳು ಭಾಗವಹಿಸಿ, ಮತ್ತೂಮ್ಮೆ ಮೈಸೂರು ನಗರವನ್ನು, ಮೈಸೂರು ಯೋಗನಗರಿ ಎಂದು ಸಾಬೀತುಪಡಿಸಿದರು.

ಸೂರ್ಯ ಉದಯಿಸುವುದಕ್ಕೂ ಮುನ್ನವೇ ಮುಂಜಾನೆ 5ಕ್ಕೆ ರಸ್ತೆಯಲ್ಲಿ ಯೋಗಪಟುಗಳು ತಂಡೋಪ ತಂಡವಾಗಿ ರೇಸ್‌ಕೋರ್ಸ್‌ನತ್ತ ಹೆಜ್ಜೆ ಹಾಕಿದುದು ಜನಸಾಮಾನ್ಯರ ಉಬ್ಬೇರುವಂತೆ ಮಾಡಿತು. ರೇಸ್‌ಕೋರ್ಸ್‌ನತ್ತ ಹೆಜ್ಜೆ ಹಾಕಿದುದು ಜನಸಾಮಾನ್ಯರ ಉಬ್ಬೇರುವಂತೆ ಮಾಡಿತು. ಜನಸಾಮಾನ್ಯರ ಉಬ್ಬೇರುವಂತೆ ಮಾಡಿತು.

ಮೈಸೂರು: ವಿಶಾಲವಾದ ಪ್ರದೇಶಲ್ಲಿ ಅಹ್ಲಾದಕರ ಗಾಳಿ, ಮೆತ್ತನೆಯ ಹುಲ್ಲು ಹಾಸಿನ ಮೇಲೆ ಸಾಮೂಹಿಕವಾಗಿ ಯೋಗ ಪ್ರದರ್ಶಿಸುವ ಮೂಲಕ ಸಾವಿರಾರು ಮಂದಿ ಯೋಗಪಟುಗಳು 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಕ್ಷಿಯಾದರು.

ಜಿಲ್ಲಾಡಳಿತದ ವತಿಯಿಂದ ರೇಸ್‌ಕೋರ್ಸ್‌ ಆವರಣದಲ್ಲಿ ಆಯೋಜಿಸಿದ್ದ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮಂದಿ ಯೋಗಪಟುಗಳು ಭಾಗವಹಿಸಿ, ಮತ್ತೂಮ್ಮೆ ಮೈಸೂರು ನಗರವನ್ನು, ಮೈಸೂರು ಯೋಗನಗರಿ ಎಂದು ಸಾಬೀತುಪಡಿಸಿದರು.

ಸೂರ್ಯ ಉದಯಿಸುವುದಕ್ಕೂ ಮುನ್ನವೇ ಮುಂಜಾನೆ 5ಕ್ಕೆ ರಸ್ತೆಯಲ್ಲಿ ಯೋಗಪಟುಗಳು ತಂಡೋಪ ತಂಡವಾಗಿ ರೇಸ್‌ಕೋರ್ಸ್‌ನತ್ತ ಹೆಜ್ಜೆ ಹಾಕಿದುದು ಜನಸಾಮಾನ್ಯರ ಉಬ್ಬೇರುವಂತೆ ಮಾಡಿತು. ಬೆಳಗ್ಗೆ 6 ಗಂಟೆಯ ಹೊತ್ತಿಗೆ ಜಮಾಯಿಸಿದ ಸಾವಿರಾರು ಯೋಗಪಟುಗಳು ತಮಗೆ ಸೂಕ್ತವೆನಿಸಿದ ಸ್ಥಳದಲ್ಲಿ, ತಾವು ತಂದಿದ್ದ ಮ್ಯಾಟನ್ನು ಹಾಸಿ, ಯೋಗ ಪ್ರದರ್ಶನಕ್ಕೆ ಅಣಿಯಾದರು. ವಿಶೇಷ ಎಂದರೆ ಪುಟಾಣಿಗಳಿಂದ ಹಿಡಿದು 80 ಪ್ರಾಯದ ಹಿರಿ ಜೀವಗಳು ಅನೇಕ ಸಂಖ್ಯೆಯಲ್ಲಿ ಭಾಗವಹಸಿದ್ದರು.

ಗಣ್ಯರು ಭಾಗಿ: ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ನಿರ್ಮಲನಂದನಾಥ ಸ್ವಾಮೀಜಿ, ಅವದೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಮೈಸೂರು ಶಾಖೆಯ ಸೋಮೇಶ್ವರನಾಥ ಸ್ವಾಮೀಜಿ, ಸರ್‌ ಖಾಜಿ ಜನಾಬ್‌ ಮೊಹಮ್ಮದ್‌ ಉಸ್ಮಾನ್‌ ಷರೀಫ್ ಸಾಬ್‌ ಅವರ ಸಾನ್ನಿಧ್ಯದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ಅವರು ಡೋಲು ಬಾರಿಸುವ ಮೂಲಕ ಯೋಗ ಪ್ರದರ್ಶನಕ್ಕೆ ಚಾಲನೆ ನೀಡಿದರು.

ಯೋಗ ಗೀತೆ: ಓಂಕಾರ ಮತ್ತು ಯೋಗ ಗೀತೆಯ ಮೂಲಕ ಆರಂಭವಾದ ಯೋಗ ಪ್ರದರ್ಶನ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು. ಈ ಸಂದರ್ಭ ನಗರಪಾಲಿಕೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ, ಜಿಲ್ಲಾಡಳಿ ಸಿಬ್ಬಂದಿ, ಪೊಲಿಸ್‌ ಸಿಬ್ಬಂದಿಯೂ ಭಾಗಿಯಾಗಿ ಯೋಗ ಪ್ರದರ್ಶಿಸಿದರು.

ಶಂಕನಾದದೊಂದಿಗೆ ಆರಂಭವಾದ ಯೋಗ ಪ್ರದರ್ಶನ ತಾಡಾಸನ, ವೃಕ್ಷಾಸನ, ಅರ್ಧ ಚಕ್ರಾಸನ, ವೀರಭದ್ರಾಸನ, ತ್ರಿಕೋನಾಸನ ವಕ್ರಾಸನ ಸೇರಿದಂತೆ ಧ್ಯಾನದೊಂದಿಗೆ ಮುಕ್ತಾಯಗೊಂಡಿತು.

ಪ್ರತಿಜ್ಞಾವಿಧಿ ಬೋಧನೆ: ಯೋಗ ಪ್ರದರ್ಶನ ಮುಗಿದ ಮುಗಿದ ನಂತರ ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌ ಸ್ವತ್ಛ ಮೈಸೂರಿಗಾಗಿ ಮನೆಯಲ್ಲಿಯೇ ಕಸವನ್ನು, ಹೊಣ ಕಸ ಮತ್ತು ಹಸಿ ಕಸ ಎಂದು ಬೇರ್ಪಡಿಸಿ, ಪಾಲಿಕೆಗೆ ನೀಡಬೇಕು. ಇದು ನಮ್ಮೆಲ್ಲರ ಕರ್ತವ್ಯ ಎಂಬ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಅಚ್ಚುಕಟ್ಟಾದ ವ್ಯವಸ್ಥೆ: 30 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿತ್ತು. ರೇಸ್‌ಕೋರ್ಸ್‌ ಆವರಣದಲ್ಲಿ ಎರಡು ಮೊಬೈಲ್‌ ಶೌಚಾಲಯ ವಾಹನ, ತಾತ್ಕಾಲಿಕ ಶೌಚಾಗೃಹ, ಕುಡಿಯುವ ನೀರಿನ ಘಟಕ ತೆರೆಯಲಾಗಿತ್ತು.

ಜೊತೆಗೆ ಮಾರ್ಗದರ್ಶನ ನೀಡಲು ಸ್ವಯಂಸೇವಕರನ್ನೂ ನಿಯೋಜಿಸಲಾಗಿತ್ತು. ಸೂಕ್ತ ಬಂದೋಬಸ್ತ್ ಮತ್ತು ಸಂಚಾರ ದಟ್ಟಣೆ ನಿವಾರಿಸಲು ಪೊಲೀಸರು ಹಲವು ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದರು. ಕಾರ್ಯಕ್ರಮದಲ್ಲಿ ಶಾಸಕ ಎಸ್‌.ಎ. ರಾಮದಾಸ್‌, ಎಲ್‌. ನಾಗೇಂದ್ರ, ಯತೀಂದ್ರ, ಮೇಯರ್‌ ಪುಷ್ಪಲತಾ, ಜಿಪಂ ಅಧ್ಯಕ್ಷೆ ಪರಿಮಳ, ತಾಪಂ ಅಧ್ಯಕ್ಷೆ ಕಾಳಮ್ಮ ಇತರರಿದ್ದರು.

ಟಾಪ್ ನ್ಯೂಸ್

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.