ಮಾರಕ ರೋಗಗಳಿಗೆ ಯೋಗವೇ ಮದ್ದು

Team Udayavani, Jun 22, 2019, 3:00 AM IST

mataaka

ದೇವನಹಳ್ಳಿ: ಆರೋಗ್ಯಕ್ಕೆ ಯೋಗ ಸಹಕಾರಿ. ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ರೋಗಗಳ ನಿಯಂತ್ರಣಕ್ಕೆ ಯೋಗ ಮದ್ದು ಎಂದು ಜಿಪಂ ಅಧ್ಯಕ್ಷೆ ಜಯಮ್ಮ ತಿಳಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಆಯುಷ್‌ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ವತಿಯಿಂದ ನಡೆದ ವಿಶ್ವ ಯೋಗ ದಿನಾಚರಣೆ ನಿಮಿತ್ತ ಗಿಡಕ್ಕೆ ನೀರುಣಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯಕ್ಕೆ ಯೋಗಾಭ್ಯಾಸ: ಮನುಷ್ಯ ಆರೋಗ್ಯವಾಗಿರಬೇಕಾದರೆ ಯೋಗದಿಂದ ಮಾತ್ರ ಸಾಧ್ಯ. ಪುರಾತನ ಕಾಲದಿಂದಲೂ ಯೋಗಕ್ಕೆ ತನ್ನದೇ ಕೊಡುಗೆ ಇದೆ. ಮನುಷ್ಯ ಹಿಂದಿನ ಕಾಲದಲ್ಲಿ ಯೋಗ ಮಾಡುವುದರಿಂದ 110-120 ವರ್ಷಗಳವರೆಗೆ ಬದುಕುತ್ತಿದ್ದ. ಈಗಿನ ಆಹಾರ ಪದ್ಧತಿಗಳಿಂದ ಮನುಷ್ಯ 40-60 ವರ್ಷದಲ್ಲಿ ತನ್ನ ಜೀವನದ ಬದುಕು ಮುಗಿಸುತ್ತಿದ್ದಾನೆ. ಅನೇಕ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾನೆ. ಸಮಾಜದಲ್ಲಿ ನಾವು ನೋಡದಂತಹ ಎಲ್ಲಾ ಕಾಯಿಲೆಗಳನ್ನು ನೋಡುತ್ತಿದ್ದೇವೆ. ಮೊದಲು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಮುಖ್ಯ ಎಂದು ಸಲಹೆ ನೀಡಿದರು.

ಆರೋಗ್ಯವಿಲ್ಲದಿದ್ದರೆ ಎಲ್ಲವೂ ವ್ಯರ್ಥ: ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ಅಧ್ಯಕ್ಷರಾಗಿ ಮಾತನಾಡಿ, ಆರೋಗ್ಯವಂತ ಸಮಾಜ ನಿರ್ಮಾಣ ಯೋಗದಿಂದ ಮಾತ್ರ ಸಾದ್ಯ, ಸಾವಿರಾರು ಮಂದಿ ಔಷಧ ಮಾತ್ರೆಗಳಿಲ್ಲದೆ ಉತ್ತಮ ಆರೋಗ್ಯ ರೂಢಿಸಿಕೊಂಡಿರುತ್ತಾರೆ. ನಿತ್ಯವು ಯೋಗಾಭ್ಯಾಸ ಮಾಡುವುದರಿಂದ ಮಾನಸಿಕ ಖನ್ನತೆ ದೂರವಾಗಿ ಏಕಾಗ್ರತೆ ಹೆಚ್ಚುತ್ತದೆ. ಮನುಷ್ಯ ಕೋಟಿ ಹಣ ಸಂಪಾದನೆ ಮಾಡಿದರೂ ಆರೋಗ್ಯ ಇಲ್ಲದಿದ್ದರೆ ಎಲ್ಲವೂ ವ್ಯರ್ಥ ಎಂದು ಹೇಳಿದರು.

ಬೆಳಗ್ಗೆ 5.30ರಿಂದ 8 ರವರೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಮತ್ತು ಇತರೆ ಸಮಿತಿಯ ಸದಸ್ಯರುಗಳು ವಿವಿಧ ಯೋಗಾಸನ ಪ್ರದರ್ಶಿಸಿದರು.

ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ, ತಹಶೀಲ್ದಾರ್‌ ಕೇಶವಮೂರ್ತಿ, ತಾಪಂ ಇಒ ಮುರುಡಯ್ಯ, ಪುರಸಭೆ ಮುಖ್ಯಾಧಿಕಾರಿ ಹನುಮಂತೇಗೌಡ, ಜಿಪಂ ಮಾಜಿ ಅಧ್ಯಕ್ಷ ಬಿ.ರಾಜಣ್ಣ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ, ಜಿಲ್ಲಾ ಎಸ್‌ಟಿ ಇಲಾಖೆ ಅಧಿಕಾರಿ ದೀಪಶ್ರೀ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ದೇವಿಕರಾಣಿ, ದೇವನಹಳ್ಳಿ ಎಸ್‌ಐ ಶಿವಕುಮಾರ್‌,

ಕುಂದಾಣ ವಿಎಸ್‌ಎಸ್‌ಎನ್‌ ಅಧ್ಯಕ್ಷ ಶ್ರೀನಿವಾಸ್‌, ಪುರಸಭೆ ಸದಸ್ಯ ಜಿ.ಎ.ರವೀಂದ್ರ, ಚೆ„ತ್ರಾ, ಭಾರತ ಸ್ಕೌಟ್ಸ್‌ ಮತ್ತು ಗೆ„ಡ್ಸ್‌ ಮುಖ್ಯ ಆಯುಕ್ತ ಬಿ.ಕೆ.ಶಿವಪ್ಪ, ಜೆಸಿಐ ಅಧ್ಯಕ್ಷ ಹರ್ಷ, ಪತಾಂಜಲಿ ಯೋಗ ಶಿಕ್ಷಣ ಸಮಿತಿ ಮಂಜುನಾಥ್‌ ಪ್ರಸಾದ್‌, ಗ್ರಾಪಂ ಸದಸ್ಯ ರಾಮಾಂಜಿನೇಯ ದಾಸ್‌, ಶಿಕ್ಷಕರ ಸಂಘದ ಉಪಾಧ್ಯಕ್ಷ ಪುಟ್ಟಸ್ವಾಮಿ, ನಿವೃತ್ತ ಶಿಕ್ಷಕ ಶ್ರೀರಾಮಯ್ಯ, ಪ್ರಜಾಪಿತ ಬ್ರಹ್ಮಕುಮಾರಿ ಸಮಾಜದ ಸುಕನ್ಯ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

1-ruu

RCB ಅಭಿಮಾನಿಗಳನ್ನು ಕಿಚಾಯಿಸಿದ ಗಾಯಕ್ವಾಡ್‌!

BCCI

BCCI; ಜ.12ಕ್ಕೆ ನೂತನ ಕಾರ್ಯದರ್ಶಿ, ಖಜಾಂಚಿ ಆಯ್ಕೆ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.