ವಿವಿಗಳಲ್ಲಿ ಯೋಗ ಕೋರ್ಸ್
Team Udayavani, Jun 22, 2019, 3:00 AM IST
ಮೈಸೂರು: ರಾಜ್ಯದ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಬರುವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗವನ್ನು ಕಡ್ಡಾಯವಾಗಿ ಕಲಿಸಲು ಗಂಭೀರ ಚಿಂತನೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು.
ಮೈಸೂರಿನ ರೇಸ್ಕೋರ್ಸ್ ಮೈದಾನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಡ್ರಮ್ ಬಾರಿಸುವ ಮೂಲಕ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ವಿಶ್ವವಿದ್ಯಾನಿಲಯದ ಕಾಲೇಜುಗಳಲ್ಲಿ ಯೋಗವನ್ನು ಕಡ್ಡಾಯವಾಗಿ ಕಲಿಸಲು ಗಂಭೀರ ಚಿಂತನೆ ಮಾಡಲಾಗಿದೆ.
ಈಗಾಗಲೇ ಕುಲಪತಿಗಳ ಜತೆ ಚರ್ಚೆ ಮಾಡಿದ್ದೇನೆ. ಕೆಲವು ಕಡೆ ಯೋಗ ಶಿಕ್ಷಣ ಆರಂಭವಾಗಿದೆ. ಎಲ್ಲ ಕಡೆ ಆರಂಭಿಸಲು ಕಡ್ಡಾಯ ಮಾಡುವ ಬಗ್ಗೆ ಚಿಂತನೆ ಮಾಡಿದ್ದೇವೆ. ಮುಂದಿನ ಬಾರಿ ನಗರದಲ್ಲಿ ನಡೆಯುವ ಯೋಗ ದಿನಾಚರಣೆಯನ್ನು ಗಿನ್ನಿಸ್ ರೆಕಾರ್ಡ್ಗೆ ಸೇರಿಸಲು ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು. 30 ಸಾವಿರಕ್ಕೂ ಹೆಚ್ಚು ಮಂದಿಯಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.
ವಿಯೇಟ್ನಾಂ ದೇಶದ ತಮ್ ಎಂಬ ಮಹಿಳೆ ಆಸಕ್ತಿಯಿಂದ ಯೋಗದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಯೋಗ ಪ್ರದರ್ಶನ ಮುಗಿದ ನಂತರ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಸ್ವಚ್ಛತೆಯ ಪ್ರತಿಜ್ಞಾವಿಧಿ ಬೋಧಿಸಿದರು. ನಗರದಲ್ಲಿ ನಡೆದ ಯೋಗ ಸಂಭ್ರಮವನ್ನು ಡ್ರೋಣ್ ಕ್ಯಾಮರಾದಲ್ಲಿ ಚಿತ್ರೀಕರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
Communalization ಜತೆ ಆರೆಸ್ಸೆಸ್ ಆರಂಭ: ಬಿಳಿಮಲೆ ಹೇಳಿದ್ದು ವಿವಾದ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.