ಇನ್ನೂ ಆಗದ ಕೊಳಲಗಿರಿ ಪರಾರಿ – ಶೀಂಬ್ರ ಸೇತುವೆ ಸಂಪರ್ಕ ರಸ್ತೆ: ಸಂಚಾರಕ್ಕೆ ಸಂಕಷ್ಟ
Team Udayavani, Jun 22, 2019, 5:19 AM IST
ಮಣಿಪಾಲ: ಕೊಳಲಗಿರಿ ಪರಾರಿ – ಶೀಂಬ್ರ ಸೇತುವೆ ನಿರ್ಮಾಣವಾಗಿ ಹಲವು ಸಮಯ ಕಳೆದರೂ ಸೇತುವೆಯ ಸಂಪರ್ಕ ರಸ್ತೆ ನಿರ್ಮಾಣವಾಗದೇ ಇರುವುದರಿಂದ ಇದರಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಸಂಚಾರಕ್ಕೆ ಸಂಕಷ್ಟವನ್ನು ಎದುರಿಸುವ ಪರಿಸ್ಥಿತಿ ಎದುರಾಗಿದೆ.ಸಂಚಾರ ಕಷ್ಟ ಸ್ವರ್ಣ ನದಿಗೆ ಅಡ್ಡವಾಗಿ ಈ ಸೇತುವೆ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆ ಸಾರ್ವಜನಿಕ ವಲಯದಿಂದ ಹಲವು ವರ್ಷಗಳಿಂದ ಕೇಳಿ ಬಂದ ಹಿನ್ನಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ಈ ಸೇತುವೆ ಕಾಮಗಾರಿ ನಡೆಸಲಾಗಿತ್ತು. 2018ರಲ್ಲಿಯೇ ಕಾಮಗಾರಿ ಮುಗಿದಿತ್ತು. ಆದರೆ ಸೇತುವೆಗೆ ಹೊಂದಿಕೊಂಡ ಸಂಪರ್ಕ ರಸ್ತೆ ಮಾತ್ರ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಜನರಿಗೆ ಸಂಚರಿಸುವುದು ಕಷ್ಟ ಸಾಧ್ಯವಾಗಿದೆ.
ರಸ್ತೆ ಕೆಸರುಮಯ
ಕೊಳಲಗಿರಿ, ಉಪ್ಪೂರು, ಬ್ರಹ್ಮಾವರ ಮೊದಲಾದ ಭಾಗದ ಜನರು ಮಣಿಪಾಲ ಹಾಗೂ ಈ ಮಾರ್ಗದಲ್ಲಿ ಮುಂದೆ ತೆರಳಲು ಈ ಸೇತುವೆ ಬಹಳಷ್ಟು ಅನುಕೂಲಕರವಾಗಿದ್ದು ಸಂಪರ್ಕ ರಸ್ತೆ ಸಮಸ್ಯೆ ಮಾತ್ರ ಜನರನ್ನು ಕಾಡುತ್ತಿದೆ. ರಸ್ತೆಗೆ ಡಾಮರೀಕರಣವಾಗದೇ ಇರುವುದರಿಂದ ಸುರಿದ ಮಳೆಗೆ ಮಣ್ಣು ಕುಸಿದು ರಸ್ತೆ ಕೆಸರುಮಯವಾಗಿದೆ. ಈ ರಸ್ತೆಯಲ್ಲಿ ಪ್ರಯಾಣಿಸುವ ದ್ವಿಚಕ್ರ ವಾಹನ ಸವಾರರು ಸ್ಕಿಡ್ ಆಗಿ ಬೀಳುವ ಸ್ಥಿತಿ ಎದುರಾಗಿದೆ.
ಸಾರ್ವಜನಿಕರ ಒತ್ತಾಯ
ಸೇತುವೆ ನಿರ್ಮಾಣವಾಗಿ ವರ್ಷ ಕಳೆದರೂ ಸಂಪರ್ಕ ರಸ್ತೆ ಮಾತ್ರ ನಿರ್ಮಾಣವಾಗದೇ ಇರುವುದು ಈ ಭಾಗದಲ್ಲಿ ಸಂಚರಿಸಲು ಕಷ್ಟಕರವಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಶೀಘ್ರವಾಗಿ ಸಂಪರ್ಕ ರಸ್ತೆ ನಿರ್ಮಾಣ ಮಾಡಬೇಕು ಎಂದು ಮನವಿ ಮೂಲಕ ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.