‘ಅಲ್ಪಸಂಖ್ಯಾಕರಿಗೆ ಸರಕಾರದ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಿ’
Team Udayavani, Jun 22, 2019, 5:23 AM IST
ಮಡಿಕೇರಿ: ಅಲ್ಪಸಂಖ್ಯಾಕರಿಗೆ ಮೀಸಲಿರುವ ಯೋಜನೆ ಕುರಿತ ಮಾಹಿತಿಯನ್ನು ಎಲ್ಲ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಮಾಹಿತಿ ನೀಡಿ ಅರ್ಹ ಅಲ್ಪಸಂಖ್ಯಾಕ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪಿಸಲು ಕ್ರಮ ಕೈಗೊ ಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಲ್ಪಸಂಖ್ಯಾಕರ ಅಭಿವೃದ್ಧಿಗೆ ಸಂಬಂಧಿಸಿದ ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮಗಳ ಕುರಿತ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರಕಾರದ ಪ್ರತಿಯೊಂದು ಯೋಜ ನೆಯಲ್ಲಿ ಶೇ.15 ರಷ್ಟು ಅಲ್ಪಸಂಖ್ಯಾಕರಿಗೆ ಮೀಸಲಿರುತ್ತದೆ. ಮೀಸಲಿರುವ ಪ್ರಮಾ ಣವನ್ನು ಸಂಪೂರ್ಣವಾಗಿ ಅಲ್ಪಸಂಖ್ಯಾಕರ ಏಳಿಗೆಗೆ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿಯೊಂದು ಯೋಜನೆಯಲ್ಲಿ ಮೀಸಲಿಟ್ಟ ಅನುದಾನ ಸೌಲಭ್ಯ ಪಡೆದುಕೊಂಡ ಫಲಾನುಭವಿಗಳ ವಿವರ ಗುರಿ ಮತ್ತು ಸಾಧನೆಯ ಪ್ರಗತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲ್ಪಸಂಖ್ಯಾಕ ಮಕ್ಕಳು ಹೆಚ್ಚಿನ ಸಂಖ್ಯೆ ಯಲ್ಲಿ ಇರುವ ಶಾಲೆಗಳಲ್ಲಿ ಎಸ್‌ಎಸ್‌ಎಲ್ಸಿ ಫಲಿತಾಂಶವನ್ನು ಸುಧಾರಣೆಗೊಳಿಸಬೇಕು. ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ದಾಖಲು ಮಾಡಿಸುವಂತಾಗಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಕ್ರಮಕೈಗೊಳ್ಳುವಂತೆ ಜಿಲ್ಲಾ ಧಿಕಾರಿ ಅವರು ಸೂಚನೆ ನೀಡಿದರು.
2016-17ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಅಲ್ಪಸಂಖ್ಯಾಕರಿಗೆ ನೀಡಿರುವ ಸವಲತ್ತುಗಳ ಕುರಿತು ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ಅಧಿ ಕಾರಿಗಳಿಂದ ಮಾಹಿತಿ ಪಡೆದು ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಅಧಿಕಾರಿ ಅವೀನ್ ಅವರು ಜಿಲ್ಲೆ ಯಲ್ಲಿ ಒಟ್ಟು 91 ನೋಂದಾಯಿತ ಮದರಸಾಗಳಿದ್ದು, 15 ಅಂಶಗಳ ಕಾರ್ಯ ಕ್ರಮಗಳ ಯೋಜನೆಯ ಪ್ರಕಾರ ಮದರಸ ಶಿಕ್ಷಣವನ್ನು ಆಧುನೀಕರಣಗೊಳಿಸಲು ಕಂಪ್ಯೂಟರ್ ಶಿಕ್ಷಣ ಹಾಗೂ ಆಧುನಿಕ ಸವಲತ್ತುಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ ಅವರು ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆಯಲ್ಲಿ 29,308 ಫಲಾನುಭವಿಗಳಿಗೆ 140.33 ಲಕ್ಷ ರೂ. ನಿಗದಿಪಡಿಸಲಾಗಿದೆ. ನಿರ್ಗತಿಕ ಮಕ್ಕಳ ಕುಟೀರಕ್ಕೆ ಅನುದಾನ, ಉದ್ಯೋಗಿನಿ ಯೋಜನೆಯ 22 ಫಲಾನುಭವಿಗಳಿಗೆ 2.13 ಲಕ್ಷ ರೂ. ಗಳ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಅವರು ಸಭೆಗೆ ಮಾಹಿತಿ ನೀಡಿದರು.
ಕುಂದುಕೊರತೆ ಸಭೆ
ಜಿಲ್ಲಾ ಪಂಚಾಯತ್ ಸದಸ್ಯರಾದ ಪಿ.ಎಂ.ಲತೀಫ್ ಅವರು ಜಿಲ್ಲೆಯ ವಿವಿಧ ಇಲಾಖೆಗಳಿಂದ ಅಲ್ಪಸಂಖ್ಯಾಕರ ಅಭಿವೃದ್ಧಿಗೆ ಹಲವಾರು ಯೋಜನೆಗಳ ಬಗ್ಗೆ ಗ್ರಾ.ಪಂ.ಗಳ ಮೂಲಕ ಆಯಾ ಪ್ರದೇಶದ ಜನರಿಗೆ ಮಾಹಿತಿ ತಿಳಿಸಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಲ್ಪಸಂಖ್ಯಾಕರ ಕುಂದುಕೊರತೆಗಳ ಸಭೆಗಳನ್ನು ನಡೆಸಬೇಕು.
ಅಲ್ಪಸಂಖ್ಯಾಕರ ಅಭಿವೃದ್ಧಿಗೆ ಸರಕಾರದ ಅನುದಾನವನ್ನು ನೇರವಾಗಿ ಫಲಾನುಭವಿಗಳಿಗೆ ದೊರಕುವಂತೆ ಮಾಡಬೇಕು ಎಂದು ಅವರು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
Bantwal: ಕೆಎಸ್‌ಆರ್‌ಟಿಸಿ ಬಸ್-ಬೈಕ್ ಢಿಕ್ಕಿ; ದಂಪತಿಗೆ ಗಾಯ
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.