ಉದ್ಯಾನ ನಗರಿಯ ಎಲ್ಲೆಡೆ ಯೋಗಾರಾಧನೆ

Team Udayavani, Jun 22, 2019, 3:07 AM IST

udyana

ಬೆಂಗಳೂರು: ರಾಜಧಾನಿ ಬೆಂಗಳೂರಿನೆಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಹಬ್ಬದಂತೆ ಸಂಭ್ರಮದಿಂದ ಆಚರಿಸಲಾಯಿತು.  ನಗರದ ಬಹುತೇಕ ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯಗಳು, ಆಟದ ಮೈದಾನಗಳು, ಪಾರ್ಕ್‌ಗಳು, ಆಸ್ಪತ್ರೆಗಳು, ಕಚೇರಿಗಳಲ್ಲಿ ಶುಕ್ರವಾರ ಬೆಳಂಬೆಳಗ್ಗೆಯೇ ಯೋಗ ಅಭ್ಯಾಸ ಜೋರಿತ್ತು.

ಬಿಬಿಎಂಪಿ ಕೇಂದ್ರ ಕಚೇರಿಯ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಯೋಗಾಸನ ಕಾರ್ಯಕ್ರಮದಲ್ಲಿ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌, ಪಾಲಿಕೆ ಆಯುಕ್ತ ಮಂಜುನಾಥ ಪ್ರಸಾದ್‌, ಮಾಜಿ ಸಚಿವ ಪಿ.ಜಿ.ಆರ್‌. ಸಿಂಧ್ಯಾ ಸೇರಿದಂತೆ ಸ್ಕೌಟ್‌ಗೈಡ್‌ ವಿದ್ಯಾರ್ಥಿಗಳು ಯೋಗ ಪ್ರದರ್ಶಿಸಿದರು. ಸೇನೆಯ ಕರ್ನಾಟಕ ಹಾಗೂ ಕೇರಳ ಸಬ್‌ ಏರಿಯಾ ಬೆಂಗಳೂರಿನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಸೇನಾಧಿಕಾರಿಗಳು, ಸಿಬ್ಬಂದಿ ಹಾಗೂ ಕುಟುಂಬ ವರ್ಗದವರು ಸೇರಿದಂತೆ ಒಟ್ಟು 6,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ರಕ್ಷಣಾ ಇಲಾಖೆಯಿಂದ ನಗರದ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ 16 ಎನ್‌ಸಿಸಿ ಘಟಕಗಳ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಯೋಗ ಪ್ರದರ್ಶನ ನೀಡಿದರು. ಮುಖ್ಯ ಅತಿಥಿಗಳಾಗಿ ಏರ್‌ ಕಮಾಂಡರ್‌ ಎಲ್‌.ಕೆ.ಜೈನ್‌ ಸೇರಿದಂತೆ 30ಕ್ಕೂ ಹೆಚ್ಚು ಎನ್‌ಸಿಸಿ ಅಧಿಕಾರಿಗಳು ಉಪಸ್ಥಿತರಿದ್ದರು. ಬಿಐಎಎಲ್‌ ವತಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಲಾಫಿಂಗ್‌ ಯೋಗ ಕಾರ್ಯಕ್ರಮ ಆಯೋಜಿಸಿತ್ತು. ವಿವಿಧೆಡೆ ತೆರಳಲು ನಿಲ್ದಾಣಕ್ಕೆ ಆಗಮಿಸಿದ್ದ 200ಕ್ಕೂ ಹೆಚ್ಚು ಪ್ರಯಾಣಿಕರು ಭಾಗವಹಿಸಿದರು.

ಬೆಂಗಳೂರು-ಮೈಸೂರು ರಸ್ತೆ ಕುಂಬಳಗೋಡುನಲ್ಲಿರುವ ಶ್ರೀ ಸ್ವಾಮಿ ನಾರಾಯಣ ಗುರುಕುಲ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ ಶುಕ್ರವಾರ ಬೆಳಗ್ಗೆ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗ ಸೇರಿದಂತೆ ನೂರಾರು ಮಂದಿ ಯೋಗ ಪ್ರದರ್ಶಿಸಿದರು. ಪುಟಾಣಿ ಮಕ್ಕಳು ಕೂಡ ಅತ್ಯಂತ ಕ್ಲಿಷ್ಟಕರವಾದ ಭಂಗಿಗಳನ್ನು ಲೀಲಾಜಾಲವಾಗಿ ಮಾಡಿ ಗಮನ ಸೆಳೆದರು. ರೆಡ್‌ಕ್ರಾಸ್‌ ಸಂಸ್ಥೆಯಿಂದ ವಿಶೇಷ ಯೋಗ ಉಪನ್ಯಾಸ ನಡೆಯಿತು. ಅಮೇರಿಕಾದ ಯೋಗ ವಿಜ್ಞಾನ ಹಾಗೂ ಪ್ರಕೃತಿ ಚಿಕಿತ್ಸಾ ತಜ್ಞರಾದ ಡಾ.ವಿ.ಸುಕೃತಾ ಯೋಗ ವಿಶ್ವಮಟ್ಟದಲ್ಲಿ ಯೋಗದ ಕುರಿತು ಮಾತನಾಡಿದರು. ನಗರದ ಪಿಇಎಸ್‌ ವಿಶ್ವವಿದ್ಯಾಲಯಲ್ಲಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಯೋಗಭ್ಯಾಸ ನಡೆದವು.

ಪಿಇಎಸ್‌ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎಂ.ಆರ್‌.ದೊರೆಸ್ವಾಮಿ ಅತಿಥಿಗಳಾಗಿ ಭಾಗವಹಿಸಿದ್ದರು. ರಾಮಮೂರ್ತಿನಗರ ವಾರ್ಡ್‌ನ ಎನ್‌ಆರ್‌ಐ ಬಡಾವಣೆಯಲ್ಲಿ ಪುಣ್ಯಭೂಮಿ ಸೇವಾ ಫೌಂಡೇಷನ್‌ ವತಿಯಿಂದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಯೋಗದಲ್ಲಿ ಕೆ.ಆರ್‌. ಪುರ ಕಸಾಪ ಅಧ್ಯಕ್ಷ ಕಲ್ಕೆರೆ ಕೃಷ್ಣಮೂರ್ತಿ, ಕೆ.ಆರ್‌. ಪುರ ಶಾಸಕ ನಂದೀಶ್‌ರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

ಬೆಂಗಳೂರಿನ ಕೆನರಾ ಬ್ಯಾಂಕ್‌ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಸಂಸ್ಥೆಯ ನಿರ್ದೇಶಕ ವೆಂಕಟೇಶ ಶೇಷಾದ್ರಿಯವರು ಯೋಗದ ಮಹತ್ವ ಮತ್ತು ಪ್ರಯೋಜನದ ಬಗ್ಗೆ ಮಾತನಾಡಿದರು. ನಗರದ ಹೊರವಲಯದ ಜಿಂದಾಲ್‌ ಪ್ರಕೃತಿ ಸಂಸ್ಥೆಯಲ್ಲಿ 1,200ಕ್ಕೂ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನೀಡಿದರು. ಜಿಂದಾಲ್‌ ಪಬ್ಲಿಕ್‌ ಸ್ಕೂಲ್‌ ಮತ್ತು ಜಿಂದಾಲ್‌ ಮಹಿಳೆಯರ ಪದವಿ ಕಾಲೇಜಿನ ವಿದ್ಯಾರ್ಥಿಗಳು ‘ಹೃದಯಕ್ಕಾಗಿ ಯೋಗ’ ಸಂದೇಶ ಸಾರಿದರು.

ಜಿಂದಾನ್‌ ನೇಚರ್‌ಕ್ಯೂರ್‌ ಇನ್‌ಸ್ಟಿಟ್ಯೂಟ್‌ನ ಸ್ಥಾಪಕ ಡಾ.ಸೀತಾರಾಮ್‌ ಜಿಂದಾಲ್‌ ಯೋಗದ ಮಹತ್ವದ ಕುರಿತು ಮಾತನಾಡಿದರು. ಬಿಇಎಲ್‌ನಲ್ಲೂ ಯೋಗದಿನ ಆಚರಿಸಿದ್ದು, ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರಯ ಸೇರಿ 2000 ಮಂದಿ ಭಾಗವಹಿಸಿದ್ದರು. ಬಾಣಸವಾಡಿ ಮುಖ್ಯ ರಸ್ತೆಯಲ್ಲಿರುವ ಮಾರುತಿಸೇವಾ ನಗರದ ಒರಾಯನ್‌ ಈಸ್ಟ್‌ ಮಾಲ್‌ನಲ್ಲಿ ಕೇಶವ ಸೇವಾ ಸಮಿತಿ ವತಿಯಿಂದ ಯೋಗ ಕಾರ್ಯಕ್ರಮ ನಡೆಯಿತು. ಸಮಿತಿಯ ವಿಶ್ವಸ್ಥರಾದ ನ.ತಿಪ್ಪೇಸ್ವಾಮಿರವರು ಯೋಗಾಸಕ್ತರನ್ನು ಉದ್ದೇಶಿಸಿ ಮಾತನಾಡಿದರು. ಚಿತ್ರನಟಿ ಭಾವನ ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿದ್ದರು.

ನಿಮಾನ್ಸ್‌ನಲ್ಲಿ ಯೋಗ ವಸ್ತು ಪ್ರದರ್ಶನ: ವಿಶ್ವೇಶ್ವರಯ್ಯ ಕೈಗಾರಿಕಾ ಹಾಗೂ ತಾಂತ್ರಿಕ ವಸ್ತು ಸಂಗ್ರಹಾಲಯದ ಸಂಯುಕ್ತಾಶ್ರಯದಲ್ಲಿ ನಿಮ್ಹಾನ್ಸ್‌ ಮತ್ತು ವಿಶ್ವೇಶ್ವರಯ್ಯ ವಸ್ತು ಸಂಗ್ರಹಾಲಯದಲ್ಲಿ ಯೋಗ ಕುರಿತ ವಸ್ತು ಪ್ರದರ್ಶನ ನಡೆಯುತ್ತಿದೆ. ಒಂದು ವಾರ ಕಾಲ ನಡೆಯುವ ಈ ಪ್ರದರ್ಶನಲ್ಲಿ ಯೋಗದ ಕುರಿತು ನಡೆಯುತ್ತಿರುವ ವೈಜ್ಞಾನಿಕ ಸಂಶೋಧನಾ ವರದಿಗಳನ್ನು ಪ್ರದರ್ಶಿಸಲಾಗಿದೆ.

ನಿಮಾನ್ಸ್‌ನಲ್ಲಿ ಯೋಗ ದಿನದ ಅಂಗವಾಗಿ ಯೋಗ ವಿಭಾಗ ಬೆಳಗ್ಗೆ ಆಸ್ಪತ್ರೆ ಆವರಣದಲ್ಲಿ ವೈದ್ಯರು, ಸಿಬ್ಬಂದಿ ವರ್ಗ ಸೇರಿದಂತೆ ಸಾವಿರಾರು ಮಂದಿ ಯೋಗಾಭ್ಯಾಸ ಮಾಡಿದರು. ಆಸ್ಪತ್ರೆ ರೋಗಿಗಳಿಗಾಗಿ ಮಧ್ಯಾಹ್ನ 12ರಿಂದ 1 ಗಂಟೆವರೆಗೆ ವಿಶೇಷ ಯೋಗ ಕಾರ್ಯಕ್ರಮ ನಡೆಯಿತು. ಬಳಿಕ ವಿಶೇಷ ಉಪನ್ಯಾಸ ಸೇರಿದಂತೆ ಸಾತ್ವಿಕ ಉಪಾಹಾರ ಕೂಟ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.