ಮಧ್ಯಾಂತರ ಬಾಂಬ್
ಸರಕಾರ ಎಷ್ಟು ದಿನ ಇರುತ್ತೋ ಎಂದ ಎಚ್‌ಡಿಡಿ; ರಾಜಕೀಯ ವಲಯದಲ್ಲಿ ಸಂಚಲನ
Team Udayavani, Jun 22, 2019, 5:00 AM IST
ಬೆಂಗಳೂರು: ರಾಜ್ಯದಲ್ಲಿ ಮಧ್ಯಾಂತರ ಚುನಾವಣೆ ಮಾತೇ ಇಲ್ಲ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು, ಮತ್ತೆ ಸಮ್ಮಿಶ್ರ ಸರಕಾರದ ಜೀವಿತಾವಧಿಯ ಬಗ್ಗೆ ಅನುಮಾನ ವ್ಯಕ್ತಪಡಿಸುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಯೋಗ ದಿನಾಚರಣೆ ಅಂಗವಾಗಿ ಯೋಗ ಪ್ರದರ್ಶನ ಮಾಡಿದ ಗೌಡರು, ಈ ಸರಕಾರ ಎಷ್ಟು ದಿನ ಇರುತ್ತೋ ಗೊತ್ತಿಲ್ಲ. ಸರಕಾರ ಉಳಿಸಿಕೊಳ್ಳುವುದು ಕಾಂಗ್ರೆಸ್ ಕೈಯಲ್ಲೇ ಇದೆ. ನಾನಂತೂ ಸರಕಾರ ರಚಿಸಿ ಎಂದು ಹೇಳಿರಲಿಲ್ಲ. ಕಾಂಗ್ರೆಸ್‌ನವರೇ ಬಂದಿದ್ದರು. ಈಗ ಮೈತ್ರಿ ಧರ್ಮ ಪಾಲಿಸುತ್ತಿಲ್ಲ. ನಾನು ಎಲ್ಲವನ್ನೂ ಸಹಿಸಿಕೊಂಡಿದ್ದೇನೆ ಎಂದು ಹೇಳಿ ರಾಜಕೀಯ ವಲಯದಲ್ಲಿ ನಾನಾ ವಿಶ್ಲೇಷಣೆಗೆ ಕಾರಣವಾದರು.
ದೇವೇಗೌಡರ ಈ ಹೇಳಿಕೆಯಿಂದ ಆತಂಕಿತರಾದ ಕಾಂಗ್ರೆಸ್ ನಾಯಕರು, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ಅಷ್ಟೇ ಅಲ್ಲ, ಮೈತ್ರಿ ಸರಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಸ್ವತಃ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಡಿಸಿಎಂ ಡಾ| ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದರು. ಐದು ವರ್ಷ ಜೆಡಿಎಸ್‌ನವರೇ ಮುಖ್ಯಮಂತ್ರಿ ಎಂದು ಬರೆದುಕೊಟ್ಟಿರುವುದರಿಂದ ಕಾಂಗ್ರೆಸ್‌ನಿಂದ ಸರಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದೂ ಭರವಸೆ ನೀಡಿದರು.
ಅಪರಾಹ್ನ ರಾಗ ಬದಲು
ಅಪರಾಹ್ನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೋತವರಿಗೆ ಅಭಿನಂದನೆ ಸಲ್ಲಿಸುವ ಸಮಾರಂಭದಲ್ಲಿ ಮಾತನಾಡಿದ ದೇವೇಗೌಡರು, ಮೈತ್ರಿ ಸರಕಾರ ಮುಂದುವರಿದುಕೊಂಡು ಹೋಗುತ್ತದೆ. ನಾಲ್ಕು ವರ್ಷ ಸರಕಾರ ಆನಂದವಾಗಿ ನಡೆಯಲಿ. ಈ ಸರಕಾರಕ್ಕೆ ನಮ್ಮ ಕಡೆಯಿಂದ ಚ್ಯುತಿ ಬರಲ್ಲ. ಸರಕಾರ ಉಳಿಸಿಕೊಳ್ಳುವ ಜವಾಬ್ದಾರಿ ಕಾಂಗ್ರೆಸ್ ಮೇಲೂ ಇದೆ ಎಂದು ಹೇಳಿದ್ದೆ ಅಷ್ಟೇ ಎಂದು ಹೇಳುವ ಮೂಲಕ ಮಗದೊಂದು ಅಚ್ಚರಿ ಮೂಡಿಸಿದರು.
ಯಾರಿಗಾಗಿ ಎಲೆಕ್ಷನ್: ಬಿಎಸ್‌ವೈ
ನಿಮ್ಮ ತೀಟೆ ತೀರಿಸುವುದಕ್ಕಾಗಿ 11 ತಿಂಗಳಿನಲ್ಲಿ ಮತ್ತೂಂದು ಚುನಾವಣೆ ನಡೆಸಬೇಕೆ? ಜನಾಭಿಪ್ರಾಯಕ್ಕೆ ಬೆಲೆ ಇಲ್ಲವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮಿಶ್ರ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್‌ನ ಹೇಳಿಕೆಗಳು ಗೊಂದಲಮಯವಾಗಿವೆ. ಮನಸ್ಸಿಗೆ ಬಂದಂತೆ ಮಾತನಾಡಿ ಗೊಂದಲ ಸೃಷ್ಟಿಸುತ್ತಿದ್ದೀರಿ. ನೀವು ಗೆದ್ದಿರುವುದು 37 ಸೀಟು. ನಿಮ್ಮ ರಾಜಕೀಯ ಚಟಕ್ಕಾಗಿ ಸರಕಾರ ಮಾಡಬೇಕಿತ್ತಾ ಎಂದಿದ್ದಾರೆ.
ಬಿಜೆಪಿಯತ್ತ ಹೋಗದಂತೆ ನೋಡಿ
ಬೆಂಗಳೂರು: ‘ಸ್ವಂತ ವರ್ಚಸ್ಸಿನಿಂದ ಗೆಲ್ಲುವ ಸಾಮರ್ಥ್ಯ ಇರುವ ಶಾಸಕರು ಎಂತಹ ಪರಿಸ್ಥಿತಿಯಲ್ಲೂ ಬಿಜೆಪಿಯತ್ತ ಹೋಗದಂತೆ ನೋಡಿಕೊಳ್ಳಿ’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಪಾಲಿನ ನಿಗಮ-ಮಂಡಳಿ ಅಧ್ಯಕ್ಷರ ನೇಮಕಾತಿ ಸಂಬಂಧ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೂ ಮಾತನಾಡಿದ್ದು, ಇದರ ಫಲವೇ ಡಾ| ಕೆ.ಸುಧಾಕರ್ ಹಾಗೂ ವೆಂಕಟರಮಣಯ್ಯ ಅವರಿಗೆ ಅಧಿಕಾರ ‘ಭಾಗ್ಯ’ ದೊರೆತಿದೆ. ಸದ್ಯದಲ್ಲೇ ಕಾಂಗ್ರೆಸ್ ಪಾಲಿನ 30ಕ್ಕೂ ಹೆಚ್ಚು ನಿಗಮ ಮಂಡಳಿಗಳ ನೇಮಕಾತಿಯೂ ನಡೆಯಲಿದೆ.
ರಾಜ್ಯದ ಜನ ಸಮ್ಮಿಶ್ರ ಸರಕಾರದ ದುರಾಡಳಿತದಿಂದ ಬೇಸತ್ತಿದ್ದಾರೆ. ಸರಕಾರ ಎಲ್ಲ ಹಂತದಲ್ಲೂ ವಿಫಲವಾಗಿದೆ. 13 ತಿಂಗಳಿಂದ ಜನರಿಗೆ ಸಾಲ ಮನ್ನಾ ಸಹಿತ ಹಲವು ಭರವಸೆ ನೀಡುತ್ತಲೇ ಬಂದಿದ್ದರೂ ಯಾವುದೂ ಈಡೇರಿಲ್ಲ.
– ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.