![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 22, 2019, 11:17 AM IST
ಮಂಗಳೂರು: ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ತುಂಬೆ ಅಣೆಕಟ್ಟಿಗೆ ಸಾಕಷ್ಟು ನೀರು ಹರಿದು ಬರುತ್ತಿದೆ. ಮಂಗಳೂರು ನಗರಕ್ಕೆ ತಿಂಗಳಿಗೂ ಅಧಿಕ ಕಾಲದಿಂದ ಕಾಡುತ್ತಿದ್ದ ನೀರಿನ ಸಮಸ್ಯೆ ನೀಗಿದ್ದು, ನೀರಿನ ಸರಬರಾಜು ನಿರಂತರವಾಗಿ ನಡೆಯುತ್ತಿದೆ.
ಒಳಹರಿವು ಸಾಕಷ್ಟು ಇರುವುದರಿಂದ ತುಂಬೆ ಅಣೆಕಟ್ಟಿನಲ್ಲಿ ಈಗ 5 ಮೀ. ನೀರಿನ ಮಟ್ಟವನ್ನು ಕಾಯ್ದುಕೊಳ್ಳಲಾಗುತ್ತಿದೆ. ಒಂದು ಗೇಟನ್ನು ತೆರೆದು ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ.
ಬಜೆಯಲ್ಲಿ ಹೊರ ಹರಿವು ಪ್ರಾರಂಭ: ನಾಳೆಯಿಂದ ಸತತ ನೀರು
ಉಡುಪಿ: ನಗರಕ್ಕೆ ನೀರು ಪೂರೈಕೆ ಮಾಡುವ ಬಜೆ ಅಣೆಕಟ್ಟಿನಲ್ಲಿ ನೀರಿನ ಹೊರಹರಿವು ಪ್ರಾರಂಭವಾಗಿದೆ. ಶುಕ್ರವಾರ ಸಂಜೆ ನೀರಿನ ಮಟ್ಟ 6.6 ಮೀಟರ್‌ಗೆ ಏರಿಕೆಯಾಗಿದ್ದು, ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ.
ನಗರದಲ್ಲಿ ಜೂ. 10ರ ಬಳಿಕ ಮಳೆಯಾಗುತ್ತಿರುವ ಪರಿಣಾಮ ಸ್ವರ್ಣ ನದಿಯಲ್ಲಿ ನೀರು ಹರಿದು ಬರುತ್ತಿದೆ. ಕಾರ್ಕಳದ ಮುಂಡ್ಲಿ ಅಣೆಕಟ್ಟಿಗೆ ಹಾಕಲಾದ ಗೇಟು ತೆರೆಯಲಾಗಿದೆ. ಇದರ ಪರಿಣಾಮ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬಂದಿದೆ. ಮೇ 5ರಂದು ಬಜೆಗೆ ಬರುವ ನೀರು ಸ್ಥಗಿತಗೊಂಡ ಪರಿಣಾಮ ನಗರದಲ್ಲಿ ನೀರಿನ ಸಮಸ್ಯೆ ಎದುರಾಗಿತ್ತು. ಕಳೆದೊಂದು ತಿಂಗಳಿನಿಂದ ನಗರಸಭೆ 35 ವಾರ್ಡ್ ಗಳನ್ನು 6 ವಿಭಾಗಗಳಾಗಿ ವಿಂಗಡಿಸಿ ಆರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗಿತ್ತು.
ಜೂ. 23ರಿಂದ ನಿರಂತರ ನೀರು ಸರಬರಾಜು ಮಾಡಲಾಗುವುದು ಎಂದು ಪೌರಾಯುಕ್ತರು ತಿಳಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.