ಮುಳುಗಡೆ ನಾಡು ಯೋಗಮಯ
ಯೋಗ ಮಾಡಿ ಗಮನ ಸೆಳೆದ ಡಿಸಿ-ಸಿಇಒ•ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಯೋಗ ಪ್ರದರ್ಶನ
Team Udayavani, Jun 22, 2019, 1:04 PM IST
ಬಾಗಲಕೋಟೆ: ಜಿಲ್ಲಾಧಿಕಾರಿ ರಾಮಚಂದ್ರನ್, ಜಿಪಂ ಸಿಇಒ ಗಂಗೂಬಾಯಿ ಮಾನಕರ ಸೇರಿದಂತೆ ಹಿರಿಯ ಅಧಿಕಾರಿಗಳು ಯೋಗಾಭ್ಯಾಸ ಮಾಡಿ ಗಮನ ಸೆಳೆದರು.
ಬಾಗಲಕೋಟೆ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಬೃಹತ್ ಯೋಗ ಪ್ರದರ್ಶನ ನಡೆಯಿತು.
ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಜಿಲ್ಲಾ ಆಯುಷ್ ಹಾಗೂ ಭಾರತ ಸೇವಾದಳದ, ವಿವಿಧ ಸಂಘ-ಸಂಸ್ಥೆಗಳು, ಆಯುರ್ವೇದ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಜಿಪಂನ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಮಾತನಾಡಿ, ಆರೋಗ್ಯವೇ ಭಾಗ್ಯ. ನಂತರ ಅರಿವು, ಶಿಕ್ಷಣ, ಯೋಗಾಸನಗಳನ್ನು ದಿನನಿತ್ಯ ಅಭ್ಯಾಸ ಮಾಡಿ ಸದೃಢ ದೇಹ, ಸದೃಢ ಮನಸ್ಸು ಹಾಗೂ ಸದೃಢ ದೇಶ ಕಟ್ಟೋಣ. ಯೋಗ ದೈಹಿಕ ಮಾನಸಿಕ ಆರೋಗ್ಯ ವೀರಿದಂತಹದಾಗಿದ್ದು, ಜೀವನದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದ, ಸಂತೋಷ, ಯಶಸ್ಸು ಎಲ್ಲವೂ ಕೈಗೂಡಬೇಕೆಂದರೆ ಯೋಗ ಅಗತ್ಯವಾಗಿದೆ ಎಂದು ತಿಳಿಸಿದರು.
ಜಿಪಂ ಸಿಇಒ ಗಂಗೂಬಾಯಿ ಮಾನಕರ್ ಮಾತನಾಡಿದರು. ಜಿಲ್ಲಾಧಿಕಾರಿ ಆರ್.ರಾಂಚಂದ್ರನ್ ಮನೆಮದ್ದು ದ್ರವ್ಯಗಳು ಹಾಗೂ ಸಿರಿಧಾನ್ಯಗಳ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸುವುದರೊಂದಿಗೆ ಕೆಲವೊಂದು ಮನೆಮದ್ದು ವಸ್ತುಗಳ ಬಗ್ಗೆ ವಿವರಣೆ ನೀಡಿದರು.
ಆಯುಷ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ| ಚಂದ್ರಕಾಂತ ರಕ್ಕಸಗಿ ವಂದಿಸಿದರು. ನಂತರ ತುಳಸಿಗೇರಿ ಸರ್ಕಾರಿ ಪ್ರೌಢಶಾಲೆ, ತುಳಸಿಗೇರಿ ಹಾಗೂ ಸರ್ಕಾರಿ ಕುವೆಂಪು ಮಾದರಿ ಪ್ರಾಥಮಿಕ ಶಾಲೆಯ 100 ಮಕ್ಕಳು ಯೋಗ ನೃತ್ಯ ಪ್ರದರ್ಶನ ಮಾಡಿ ಪ್ರೇಕ್ಷಕರನ್ನು ಮಂತ್ರ ಮುಗ್ಧರನ್ನಾಗಿಸಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಿಂದ ಐದು ನಿಮಿಷಗಳ ಕಾಲ ಜ್ಞಾನ ಮಾಡಿಸಲಾಯಿತು. ಇದೇ ಸಂದರ್ಭದಲ್ಲಿ ಯೋಗ ಸಾಧಕರಾದ ನಿವೃತ್ತ ಶಿಕ್ಷಕ ಬೊಮ್ಮಯ್ಯ ಹಿರೇಮಠ, ಭಾರತ ಸೇವಾದಳದ ಜಿಲ್ಲಾ ಸಮನ್ವಯಾಧಿಕಾರಿ ಮಹೇಶ ಪತ್ತಾರ, ಡಾ| ಸಂಗೀತಾ ಬಳಗಾನೂರ, ಲಕ್ಷ್ತ್ರೀ ಗೌಡರ, ತುಳಸಿಗೇರಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯ ಸಿ.ಕೆ. ಚನಾಳ, ಸರ್ಕಾರಿ ಕುವೆಂಪು ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯ ಸಿ.ಎ. ಸಣ್ಣಪ್ಪನವರ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ನಾಗರತ್ನಾ ಅಕ್ಕನವರ ಅವರನ್ನು ಸನ್ಮಾನಿಸಲಾಯಿತು.
ನಂತರ ಯೋಗ ಪ್ರಾತ್ಯಕ್ಷಿಕೆಯಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 400 ಮಕ್ಕಳು ಸೇರಿದಂತೆ ವಿವಿಧ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸೇರಿ ಅಂದಾಜು 1500ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು.
ಭಾರತ ಸೇವಾ ದಳದ ಜಿಲ್ಲಾ ಸಮನ್ವಯಾಧಿಕಾರಿ ಮಹೇಶ ಪತ್ತಾರ ಹಾಗೂ ಸಂಗಡಿಗರು ಮತ್ತು ಡಾ| ಸಂಗೀತಾ ಬಳಗಾನೂರ ಅವರು ಸಾಮೂಹಿಕ ಯೋಗಭ್ಯಾಸ ಮಾಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.