ಅಪಘಾತದಲ್ಲಿ ಗಾಯಗೊಂಡ ಇಂಜಿನಿಯರಿಂಗ್ ಪದವೀಧರನಿಗೆ 5 ಲಕ್ಷ ರೂ. ಪರಿಹಾರ
Team Udayavani, Jun 22, 2019, 3:13 PM IST
ಯಾದಗಿರಿ: ಕಳೆದ ಒಂದೂವರೆ ವರ್ಷದ ಹಿಂದೆ ಅಪಘಾತವೊಂದರಲ್ಲಿ ಕೈ ಮತ್ತು ಕಾಲುಗಳು ಶಕ್ತಿಹೀನವಾಗಿ ಹಾಸಿಗೆ ಹಿಡಿದಿರುವ ಯಾದಗಿರಿ ತಾಲೂಕಿನ ಮುನಗಲ್ ಗ್ರಾಮದ ಇಂಜಿನಿಯರಿಂಗ್ ಪದವೀಧರ ಭೀಮರೆಡ್ಡಿ ಶಂಕರಪ್ಪ ಅವರ ತಂದೆಗೆ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಗುರುಮಠಕಲ್ ತಾಲೂಕಿನ ಚಂಡರಕಿಯಲ್ಲಿ ಐದು ಲಕ್ಷ ರೂ.ಗಳ ಪರಿಹಾರದ ಚೆಕ್ ಹಸ್ತಾಂತರಿಸಿದರು.
ಶುಕ್ರವಾರ ನಡೆದ ಜನತಾದರ್ಶನದಲ್ಲಿ ಯುವಕನ ತಾಯಿ ಭಾಗವಹಿಸಿ, ಮಗನ ಚಿಕಿತ್ಸೆಗಾಗಿ ಮನೆ,ಹೊಲ,ಎತ್ತುಗಳನ್ನು ಕಳೆದುಕೊಂಡು ಮೂವತ್ತು ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದರೂ, ಗುಣಮುಖವಾಗಿಲ್ಲ ಎಂದು ದುಃಖ ತೋಡಿಕೊಂಡಿದ್ದರು. ಅಹವಾಲು ಸ್ವೀಕರಿಸಿದ್ದ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಿ ಶನಿವಾರ ಬೆಳಗ್ಗೆ ಬಂದು ಐದು ಲಕ್ಷ ರೂ.ಗಳ ಪರಿಹಾರದ ಚೆಕ್ ಸ್ವೀಕರಿಸಲು ಭೀಮರೆಡ್ಡಿ ಅವರ ಪಾಲಕರಿಗೆ ತಿಳಿಸಿದ್ದರು. ಕೊಟ್ಟ ಭರವಸೆಯಂತೆ ಇಂದು ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಸೇರಿದಂತೆ ಹಲವರು ಹಾಜರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.