ಮಾನಸಿಕ, ಶಾರೀರಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅಗತ್ಯ

ಯೋಗ ದಿನಾಚರಣೆಯಲ್ಲಿ ಶಾಸಕ ನಾರಾಯಣಸ್ವಾಮಿ ಭಾಗಿ, ವಿವಿಧ ಆಸನ ಮಾಡಿದ ಶಾಸಕರು

Team Udayavani, Jun 22, 2019, 3:53 PM IST

22–June-35

ಬಂಗಾರಪೇಟೆ ಪಟ್ಟಣದ ಪುರಸಭೆ ಉದ್ಯಾನದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ, ಮುಖ್ಯಾಧಿಕಾರಿ ಶ್ರೀಧರ್‌ ಭಾಗವಹಿಸಿದ್ದರು.

ಬಂಗಾರಪೇಟೆ: ತಾಂತ್ರಿಕ ಯುಗದಲ್ಲಿ ಮನುಷ್ಯ ಸೇವಿಸುವ ಆಹಾರ ಪದಾರ್ಥದಲ್ಲಿ ಸತ್ವ ಕಡಿಮೆಯಾಗುತ್ತಿರುವುದರಿಂದ ಮಾನಸಿಕ ಹಾಗೂ ಶಾರೀರಿಕ ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಯೋಗಾಭ್ಯಾಸ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಸಲಹೆ ನೀಡಿದರು.

ಪಟ್ಟಣದ ಪಟ್ಟಾಭಿಷೇಕ ಉದ್ಯಾನದಲ್ಲಿ ಪುರಸಭೆಯಿಂದ ಹಮ್ಮಿಕೊಂಡಿದ್ದ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಧುನಿಕತೆ ಜೀವನದಲ್ಲಿ ಮಾನವನಿಗೆ ಮಾನಸಿಕ ಒತ್ತಡವು ಹೆಚ್ಚಾಗುತ್ತಿದೆ. ಅದನ್ನು ನಿವಾರಣೆ ಮಾಡಿಕೊಳ್ಳಲು ಇಲ್ಲ ಸಲ್ಲದ ದಾರಿಗಳನ್ನು ಹುಡುಕಿಕೊಳ್ಳುವುದರ ಬದಲು ಪ್ರತಿ ನಿತ್ಯ ಯೋಗ ಮಾರ್ಗಗಳನ್ನು ಅನುಸರಿಸಬೇಕು. ಇದರಿಂದ ಮಾನಸಿಕವಾಗಿ ಜೊತೆಯಲ್ಲಿ ಶಾರೀರಿಕವಾಗಿ ಸಧೃಡವಾಗುವುದರಲ್ಲಿ ಯಾವುದೇ ಅನುಮಾನಗಳಿಲ್ಲ ಎಂದು ಹೇಳಿದರು.

ಗಾಳಿ ಸೇವನೆ: ಪ್ರಾಚೀನ ಕಾಲದಲ್ಲಿ ಋಮುನಿಗಳು ಯೋಗಮುದ್ರೆಯಲ್ಲಿ ಕೇವಲ ಗಾಳಿಯನ್ನು ಸೇವನೆ ಮಾಡುತ್ತ, ಆರೋಗ್ಯವಾಗಿ ಇರುತ್ತಿದ್ದರು. ಅಂತೆಯೇ ನಾವು ಸಹ ಯೋಗದ ಹಾದಿಯನ್ನು ಹಿಡಿದರೆ ಅದು ನಮಗೆ ಆರೋಗ್ಯದ ವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ವಿವರಿಸಿದರು.

ವಿಶ್ವ ಯೋಗ ದಿನ: ಸ್ವಾಮಿ ವಿವೇಕಾನಂದರು ಯೋಗ ಅಭ್ಯಾಸದಿಂದ ಜ್ಞಾನ, ಪ್ರೀತಿ, ಸಂತೋಷ, ಬೆಳಕಿನ ಭಾವವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ. ಯೋಗ ಭಾರತ ಜಗತ್ತಿಗೆ ನೀಡಿರುವ ಕೊಡುಗೆ. ಇದನ್ನು ವಿಶ್ವಸಂಸ್ಥೆಯೂ ಗುರುತಿಸಿ ಅದನ್ನು ಪ್ರಚಾರ ಪಡಿಸಲೆಂದೇ ವಿಶ್ವ ಯೋಗ ದಿನವನ್ನು ಅಚರಿಸುವ ವ್ಯವಸ್ಥೆ ಮಾಡಿದೆ ಎಂದು ತಿಳಿಸಿದರು.

ಪ್ರತಿದಿನ ಯೋಗಾಭ್ಯಾಸ ಮಾಡಿ: ದೇಹ ಹಾಗೂ ಮನಸ್ಸನ್ನು ಸದಾ ಕ್ರಿಯಾಶೀಲವಾಗಿಡುವ ಮಾರ್ಗಕ್ಕೆ ಯೋಗ ಎನ್ನುವರು. ಯೋಗ ಎಂಬುವುದು ದೀಪ. ಒಮ್ಮೆ ನೀವು ಅದನ್ನು ಹೊತ್ತಿಸಿದರೆ ಅದರ ಬೆಳಕು ಎಂದಿಗೂ ನಂದಿ ಹೋಗದು. ಪ್ರತಿದಿನ ಯೋಗಾಭ್ಯಾಸ ಮಾಡಿದಂತೆಲ್ಲ ದೀಪ ಪ್ರಜ್ವಲಿಸತ್ತಲ್ಲೇ ಇರುತ್ತದೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ದಿನ ನಿತ್ಯವೂ ಯೋಗ ಮಾಡುವುದನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ವಿವಿಧ ಯೋಗಾಸನಗಳು: ಯೋಗ ಶಿಕ್ಷಕಿ ವೆಂಕಟರತ್ನಮ್ಮ ಸಾಮೂಹಿಕವಾಗಿ, ಸೂರ್ಯ ನಮಸ್ಕಾರ, ಅರ್ಧಚಕ್ರಾಸನ, ಪಾದ ಹಸ್ತಾಸನ, ತ್ರಿಕೋನಾಸನ, ಪರಿವರ್ತಾಸನಾ ತ್ರಿಕೋನಾಸನ, ವಜ್ರಾಸನ, ಶಶಕಾಂಗಾಸನ, ಪಶ್ಚಿಮೊತ್ತಾಸನ, ಭುಜಾಂಗಾಸನ, ಧರ್ನೂಸನ, ಸರ್ವಾಂಗಾಸನ, ಹಾಲಾಸನ, ಚಕ್ರಾಸನ, ಕಪಾಲಾಭಾತಿ, ಪ್ರಾಣಾಯಾಮ, ನಾಡಿಶೋಧ, ಈ ರೀತಿಯ ಯೋಗಾಸನಗಳನ್ನು ಮಾಡಿಸಿದರು.

ಪುರಸಭೆ ಸದಸ್ಯೆ ರತ್ನಮ್ಮ ತಿಮ್ಮಯ್ಯ, ಪುರಸಭೆ ಮುಖ್ಯಾಧಿಕಾರಿ ವಿ.ಶ್ರೀಧರ್‌, ಸಿಬ್ಬಂದಿಯಾದ ಗೋವಿಂದರಾಜ್‌, ವೆಂಕಟೇಶ್‌, ಸೋಮು, ಮುಖಂಡರಾದ ರಂಗರಾಮಯ್ಯ, ಕೆ.ಸಿ.ಪ್ರಸಾದ್‌ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.