ಹಾಸಿಗೆ ಹಿಡಿದ ಎಂಜಿನಿಯರ್‌ಗೆ ಐದು ಲಕ್ಷ ರೂಪಾಯಿ ಪರಿಹಾರ
Team Udayavani, Jun 23, 2019, 3:04 AM IST
ಯಾದಗಿರಿ: ಅಪಘಾತವೊಂದರಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಕೈ ಮತ್ತು ಕಾಲುಗಳು ಶಕ್ತಿಹೀನವಾಗಿ ಹಾಸಿಗೆ ಹಿಡಿದಿರುವ ಯಾದಗಿರಿ ತಾಲೂಕಿನ ಮುನಗಲ್ ಗ್ರಾಮದ ಎಂಜಿನಿಯರಿಂಗ್ ಪದವೀಧರ ಭೀಮರೆಡ್ಡಿ ಶಂಕರಪ್ಪ ಅವರ ತಂದೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುರುಮಿಠಕಲ್ ತಾಲೂಕಿನ ಚಂಡರಕಿಯಲ್ಲಿ 5 ಲಕ್ಷ ರೂ.ಗಳ ಪರಿಹಾರ ಚೆಕ್ ಹಸ್ತಾಂತರಿಸಿದರು.
ಮಗನ ಚಿಕಿತ್ಸೆಗಾಗಿ ಮನೆ, ಹೊಲ, ಎತ್ತುಗಳನ್ನು ಕಳೆದುಕೊಂಡು 30 ಲಕ್ಷಕ್ಕೂ ಅ ಧಿಕ ಹಣ ಖರ್ಚು ಮಾಡಿದರೂ ಗುಣಮುಖವಾಗಿಲ್ಲ ಎಂದು ಭೀಮರೆಡ್ಡಿಯವರ ತಾಯಿ ಶುಕ್ರವಾರ ನಡೆದ ಜನತಾದರ್ಶನದಲ್ಲಿ ಭಾಗವಹಿಸಿ ದುಃಖ ತೋಡಿಕೊಂಡಿದ್ದರು.
ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಯವರು ಕೂಡಲೇ ಸ್ಪಂದಿಸಿ, ಶನಿವಾರ ಬೆಳಗ್ಗೆ ಬಂದು 5 ಲಕ್ಷ ರೂ.ಗಳ ಪರಿಹಾರದ ಚೆಕ್ ಸ್ವೀಕರಿಸಲು ಭೀಮರೆಡ್ಡಿ ಅವರ ಪಾಲಕರಿಗೆ ತಿಳಿಸಿದ್ದರು. ಕೊಟ್ಟ ಭರವಸೆಯಂತೆ ಶನಿವಾರ ಬೆಳಗ್ಗೆ ಗ್ರಾಮ ವಾಸ್ತವ್ಯ ಮಾಡಿದ್ದ ಚಂಡರಕಿ ಪ್ರಾಥಮಿಕ ಶಾಲೆ ಆವರಣದಲ್ಲಿ ಚೆಕ್ ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.