ಸಾಲಗಾರರ ಕಿರುಕುಳದಿಂದ ನೊಂದು ಕತ್ತು ಕೊಯ್ದುಕೊಂಡ ಮುಖ್ಯ ಶಿಕ್ಷಕಿ
Team Udayavani, Jun 23, 2019, 3:00 AM IST
ಸಾಗರ: ಮಹಿಳೆಯೊಬ್ಬರು ನ್ಯಾಯಕ್ಕಾಗಿ ನ್ಯಾಯಾಧೀಶರಿಗೆ ಪತ್ರ ಬರೆದು ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ಮುಂಜಾನೆ ನಡೆದಿದೆ. ನಗರದ ಎಂಜಿಎನ್ ಪೈ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ, ಗಾಂಧಿ ನಗರ ನಿವಾಸಿ ವಾರಿಜಾ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇವರು ಖಾಸಗಿ ವ್ಯಕ್ತಿಗಳ ಬಳಿ ಸಾಲ ಪಡೆದಿದ್ದು, ಮರುಪಾವತಿಗಾಗಿ ಸಾಲ ನೀಡಿದ ವ್ಯಕ್ತಿಗಳು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ವಾರಿಜಾ ಪೊಲೀಸರ ಮೊರೆ ಹೋಗಿದ್ದು, ಪೊಲೀಸರು ರಾಜಿ ಸಂಧಾನ ನಡೆಸಿ, ಸಮಸ್ಯೆ ಬಗೆಹರಿಸಿದ್ದರು. ಆದರೂ ಇತ್ತೀಚೆಗೆ ಕೆಲ ವ್ಯಕ್ತಿಗಳು ಬಡ್ಡಿ ಹಣ ನೀಡುವಂತೆ ವಾರಿಜಾ ಅವರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ.
ಇದರಿಂದ ನೊಂದ ವಾರಿಜಾ ಅವರು ಡೆತ್ನೋಟ್ ಬರೆದಿದ್ದು, ನ್ಯಾಯ ಕೊಡಿಸುವಂತೆ ನ್ಯಾಯಾಧಿಧೀಶರಾದ ಸಯ್ಯದ್ ಅರಫಾತ್ ಇಬ್ರಾಹಿಂ ಅವರಲ್ಲಿ ಮನವಿ ಮಾಡಿದ್ದಾರೆ. ಡೆತ್ನೋಟ್ನಲ್ಲಿ ಕಿರುಕುಳ ನೀಡುತ್ತಿದ್ದವರ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಾರಿಜಾ ಅವರನ್ನು ನಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.