39 ಮಂದಿಗೆ ಶಂಕಿತ ಡೆಂಗ್ಯೂ
Team Udayavani, Jun 23, 2019, 5:46 AM IST
ಮಂಗಳೂರು: ನಗರದ ಗುಜ್ಜರಕೆರೆ ಸನಿಹದ ಗೋರಕ್ಷಕ ದಂಡು ಮತ್ತು ಅರೆಕೆರೆಬೈಲು ಪ್ರದೇಶ ದಲ್ಲಿ ಮೂರು ವಾರಗಳಲ್ಲಿ 39 ಮಂದಿ ಯಲ್ಲಿ ಶಂಕಿತ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಓರ್ವನಲ್ಲಿ ದೃಢಪಟ್ಟಿದೆ. ಸದ್ಯ ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಶಂಕಿತ ಡೆಂಗ್ಯೂ ಬಾಧಿತ ಪ್ರದೇಶ ಗಳಲ್ಲಿ ಫಾಗಿಂಗ್ ನಡೆಸಿರುವುದಲ್ಲದೆ ಕರಪತ್ರ ಹಂಚಿ ಜಾಗೃತಿ ಮೂಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್ ತಿಳಿಸಿದ್ದಾರೆ.
ಶಾಸಕ ಕಾಮತ್ ಭೇಟಿ ಗೋರಕ್ಷಕದಂಡು ಮತ್ತು ಅರೆಕೆರೆಬೈಲು ಪ್ರದೇಶಕ್ಕೆ ಶನಿವಾರ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಮನಪಾ ಆರೋಗ್ಯಾಧಿ ಕಾರಿಗಳು, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. ಕೆಲ ಮನೆಗಳಿಗೆ ಶಾಸಕರು ತೆರಳಿ ಪರಿಶೀಲಿಸಿದರು.
ನೀರು ಶೇಖರಿಸಿದ್ದೇ ಕಾರಣ?
ಬೇಸಗೆಯಲ್ಲಿ ನೀರಿನ ಅಭಾವ ಹಿನ್ನೆಲೆಯಲ್ಲಿ ಮಂಗಳೂರು ನಗರಕ್ಕೆ ರೇಷನಿಂಗ್ ವ್ಯವಸ್ಥೆಯಲ್ಲಿ ನಾಲ್ಕು ದಿನ ನೀರು ಪೂರೈಕೆ, ಮೂರು ದಿನ ಸ್ಥಗಿತ ಮಾಡಲಾಗಿತ್ತು. ಈ ವೇಳೆ ನೀರನ್ನು ಜನ ವಿವಿಧ ಪಾತ್ರೆ, ಡ್ರಮ್, ಬಕೆಟ್ ಮುಂತಾದವುಗಳಲ್ಲಿ ಸಂಗ್ರಹಿಸಿಟ್ಟಿದ್ದರು. ಮಳೆ ಆರಂಭವಾದರೂ ಸಂಗ್ರಹಿಸಿರುವ ನೀರನ್ನು ಚೆಲ್ಲಿ ಶುಚಿ ಮಾಡದೇ ಇದ್ದದ್ದರಿಂದಲೂ ಡೆಂಗ್ಯೂ ಹರಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶೇಖರಿಸಿಟ್ಟ ಎಲ್ಲ ನೀರನ್ನು ಚೆಲ್ಲಿ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವಂತೆ ಎಲ್ಲ ಮನೆಮಂದಿಗೆ ಶಾಸಕರು ಮತ್ತು ಅಧಿಕಾರಿಗಳು ಸಲಹೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.