ಸಚಿವ ಡಿಕೆಶಿಗೆ ಆಕ್ರೋಶದ ಬಿಸಿ
•ರೈತರ ಸಿಟ್ಟು ಶಮನಕ್ಕೆ ಸಚಿವ ಯತ್ನ•ಸರ್ಕಾರ ವಿರುದ್ಧ ಧಿಕ್ಕಾರ•ಉಭಯ ರೈತರ ಹಿತ ರಕ್ಷಿಸಿ: ಮಹಾ ಶಾಸಕ ಉಲ್ಲಾಸ
Team Udayavani, Jun 23, 2019, 9:41 AM IST
ಬೆಳಗಾವಿ: ಮಾಂಜರಿಯ ಬ್ರಿಡ್ಜ್ ಕಂ ಬ್ಯಾರೇಜ್ ಸ್ಥಳಕ್ಕೆ ಆಗಮಿಸಿದ ಸಚಿವ ಡಿ.ಕೆ. ಶಿವಕುಮಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರನ್ನು ಪೊಲೀಸರು ತಡೆದರು.
ಬೆಳಗಾವಿ: ನದಿ ಬತ್ತಿ ಹೋಗಿ ನೀರು ಇಲ್ಲದೇ ಒದ್ದಾಡುತ್ತಿದ್ದ ಜನರ ಸಮಸ್ಯೆ ಆಲಿಸಲು ಸಚಿವರು ಬರಲಿಲ್ಲ. ಮಹಾರಾಷ್ಟ್ರದಿಂದ ನೀರು ಬಿಟ್ಟಾಗ ಈಗ ಬಂದು ಪೋಸ್ ಕೊಡುತ್ತಿರುವುದು ಏಕೆ. ಶಾಶ್ವತವಾಗಿ ನೀರು ಬಿಡುವಂತೆ ಮಹಾರಾಷ್ಟ್ರದ ಮೇಲೆ ಒತ್ತಡ ಹಾಕುವ ಕೆಲಸ ಸರ್ಕಾರ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ ವಿವಿಧ ಗ್ರಾಮಗಳ ರೈತರು ಸಚಿವ ಡಿ.ಕೆ. ಶಿವಕುಮಾರಗೆ ಬಿಸಿ ಮುಟ್ಟಿಸಿದರು.
ಸಚಿವರು ಬಂದ ಕಡೆಗಳೆಲ್ಲ ಆಕ್ರೋಶ, ಪ್ರತಿಭಟನೆ, ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ರೈತರು ಹಾಗೂ ಸಾರ್ವಜನಿಕರು, ಮೂರ್‍ನಾಲ್ಕು ತಿಂಗಳಿನಿಂದ ನೀರಿಲ್ಲದೇ ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೃಷ್ಣಾ ನದಿ ಹಾಗೂ ಎಲ್ಲ ಬ್ಯಾರೇಜ್‌ಗಳು ಬತ್ತಿ ಹೋಗಿದ್ದವು. ಎಲ್ಲಿಯೂ ನೀರಿಲ್ಲದಂಥ ಸ್ಥಿತಿ ನಿರ್ಮಾಣವಾಗಿತ್ತು. ಆಗ ಯಾರೊಬ್ಬರೂ ಇತ್ತ ಸುಳಿಯಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಂಜರಿ ಬ್ರಿಜ್ ಕಂ ಬ್ಯಾರೇಜ್ ಸ್ಥಳಕ್ಕೆ ಆಗಮಿಸಿದ ಸಚಿವರನ್ನು ಮುತ್ತಿಗೆ ಹಾಕಲು ಯತ್ನಿಸಿದ ರೈತರನ್ನು ಪೊಲೀಸರು ತಡೆದರು. ಸಚಿವರತ್ತ ತೆರಳುತ್ತಿದ್ದಾಗ ಅಲ್ಲಿಯೇ ತಡೆದು ಸುಮ್ಮನಾಗಿಸಲು ಯತ್ನಿಸಿದರು. ಆಗ ಪೊಲೀಸರು ಹಾಗೂ ರೈತರೊಂದಿಗೆ ವಾಗ್ವಾದ ನಡೆಯಿತು. ಬಳಿಕ ಪ್ರಭಾಕರ ಕೋರೆ ಅಲ್ಲಿಗೆ ಆಗಮಿಸಿದಾಗ ರೈತರೆಲ್ಲರೂ ಅವರ ಹಿಂದಿನಿಂದ ಓಡಿ ಬಂದು ಸಚಿವರತ್ತ ನುಗ್ಗಲು ಯತ್ನಿಸಿದಾಗ ತಡೆಯಲಾಯಿತು. ಬಾವನ ಸೌಂದತ್ತಿ, ಇಂಗಳಿ, ದಿಗ್ಗೇವಾಡಿ, ಕಲ್ಲೋಳ, ಮಾಂಜರಿ, ಯಡೂರ ಸೇರಿದಂತೆ ವಿವಿಧ ಗ್ರಾಮಗಳ ರೈತರು ಇದ್ದರು.
ಮೂರ್‍ನಾಲ್ಕು ತಿಂಗಳಿಂದ ನೀರಲ್ಲದೇ ಒದ್ದಾಡುತ್ತಿದ್ದೇವೆ. ಎಲ್ಲ ಬೆಳೆಗಳು ಬತ್ತಿ ಹೋಗಿವೆ. ಲಕ್ಷಾಂತರ ರೂ. ಹಾನಿ ಆಗಿದೆ. ನೀರು-ಬೆಳೆ ಇಲ್ಲದೇ ಸಮಸ್ಯೆ ಉಲ್ಬಣಗೊಂಡಿದೆ. ಆದರೆ ಆಗ ಮಹಾರಾಷ್ಟ್ರದೊಂದಿಗೆ ಮಾತುಕತೆ ನಡೆಸುವ ಬದಲು ಈಗ ಮಾತಾಡಿದರೆ ಏನು ಪ್ರಯೋಜನ. ಸಚಿವರೊಂದಿಗೆ ನಮ್ಮನ್ನು ಭೇಟಿಯಾಗಲು ಬಿಡದಿದ್ದರೆ ಮುಂದೆ ಅನಾಹುತ ಸಂಭವಿಸಿದರೆ ನಾವು ಹೊಣೆಯಲ್ಲ ಎಂದು ಇಂಗಳಿಯ ಅಣ್ಣಾಸಾಹೇಬ ಚೌಗಲೆ ಹಾಗೂ ಶಂಕರ ಮಮದಾಪುರ ಹೇಳುತ್ತಿದ್ದರೂ ಪೊಲೀಸರು ಇದಕ್ಕೆ ಕಿವಿಗೊಡಲಿಲ್ಲ. ಎಲ್ಲರನ್ನೂ ಬದಿಗೆ ಸರಿಸಿ ಸಚಿವರ ವಾಹನ ತೆರಳಲು ದಾರಿ ಮಾಡಿ ಕೊಟ್ಟರು.
ನಂತರ ಶಿರಗುಪ್ಪಿ ಮಾರ್ಗವಾಗಿ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ಗೆ ತೆರಳುತ್ತಿದ್ದ ಸಚಿವ ಡಿ.ಕೆ. ಶಿವಕುಮಾರ ಅವರ ಕಾರು ತಡೆದ ಗ್ರಾಮಸ್ಥರು ಜನ-ಜಾನುವಾರುಗಳಿಗೆ ನೀರು ಇಲ್ಲದೇ ಸಮಸ್ಯೆ ಅನುಭವಿಸುವಂತಾಗಿದೆ. ನಮ್ಮ ಸಮಸ್ಯೆ ಕೇಳಲು ಯಾರೂ ಬರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಗ್ರಾಮಸ್ಥರನ್ನು ಸಮಾಧಾನ ಪಡಿಸಿದ ಸಚಿವರು, ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ನಮ್ಮ ಬ್ಯಾರೇಜ್‌ಗಳ ವಾಸ್ತವ ಸ್ಥಿತಿ ಏನು ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ನಂತರ ಅಲ್ಲಿಯ ಸರ್ಕಾರದೊಂದಿಗೆ ಚರ್ಚಿಸಿ ರೈತರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿ ವಾಹನ ಹತ್ತಿ ಹೋಗುವಾಗಲೂ ಜನರು, ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.