ಸರ್ಕಾರಿ ಯೋಜನೆಗಳು ರೈತರಿಗೆ ತಲುಪಲಿ: ದಿನಕರ
Team Udayavani, Jun 23, 2019, 12:47 PM IST
ಕುಮಟಾ: ಕೃಷಿ ಅಭಿಯಾನಕ್ಕೆ ಶಾಸಕ ದಿನಕರ ಶೆಟ್ಟಿ ಹಸಿರು ನಿಶಾನೆ ತೋರಿದರು.
ಕುಮಟಾ: ಕೃಷಿಗೆ ಸಂಬಂಧಿಸಿದ ಕಾರ್ಯಕ್ರಮಗಳು ಕೇವಲ ಕಾಟಾಚಾರಕ್ಕಾಗದೆ ರೈತರ ಮನೆಗಳಿಗೆ ತಲುಪಬೇಕು. ಆಗ ಮಾತ್ರ ಸರ್ಕಾರ ಕೈಗೊಂಡ ಯೋಜನೆಗೆ ಪ್ರತಿಫಲ ದೊರಕುತ್ತದೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು.
ಕೃಷಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ವಿವಿಧ ಇಲಾಖೆಗಳ ಮುಖ್ಯಸ್ಥರು ರೈತಪರ ನಿಂತು ಕೆಲಸ ಮಾಡಬೇಕು. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಪ್ರಥಮ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಲಾಯಿತು. ಈಗಿರುವ ಮೋದಿ ಸರಕಾರದಲ್ಲಿಯೂ ಫಸಲ್ ಭೀಮಾ, ಕೃಷಿ ಸಮ್ಮಾನ್ ಸೇರಿದಂತೆ ಅನೇಕ ರೈತಪರ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ರೈತರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಜಿಲ್ಲಾ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ನಾಯ್ಕ ಮಾತನಾಡಿ, ಈ ಬಾರಿ ಮಳೆಯ ಕೊರತೆಯಿಂದಾದ ಪರಿಣಾಮಗಳನ್ನು ಮೂರೂರು ಹಾಗೂ ಹೆಬೈಲ್ ಕಡೆ ಒಣಗಿದ ತೋಟಗಳನ್ನು ಗಮನಿಸಿದರೆ ತಿಳಿಯುತ್ತದೆ. ಇಂತಹ ಸ್ಥಿತಿಯಲ್ಲಿ ಸರಕಾರದ ಆದೇಶಕ್ಕೆ ಕಾಯದೇ ಸ್ಥಳಕ್ಕೆ ಹೋಗಿ ಪರಿಶೀಲಿಸಿ ವರದಿ ಸಲ್ಲಿಸುವ ಕೆಲಸ ಇಲಾಖೆಯಿಂದಾಗಬೇಕು. ಇದರ ಬಗ್ಗೆ ಕೃಷಿ ಹಾಗೂ ತೋಟಗಾರಿಕಾ ಇಲಾಖೆಯವರು ತಕ್ಷಣವೇ ಕ್ರಮ ಕೈಗೊಳ್ಳಬೇಕು. ಕುಮಟಾದಿಂದ ಹೆಚ್ಚಿನ ಯಾವುದೇ ಬೇಡಿಕೆಗಳು ಬರುವುದಿಲ್ಲ ಎಂಬುದು ಜಿಲ್ಲಾ ಮಟ್ಟದ ಸಭೆಗಳಲ್ಲಿ ಕೇಳಲ್ಪಡುತ್ತದೆ ಎಂದರು.
ಅರ್ಹ ಫಲಾನುಭವಿಗಳಿಗೆ ಕೃಷಿ ಉಪಕರಣ ವಿತರಿಸಲಾಯಿತು. ನಂತರ ಕೃಷಿ ಮಾಹಿತಿ ಕರಪತ್ರ ಬಿಡುಗಡೆ ಮಾಡಲಾಯಿತು.
ತಾ.ಪಂ ಅಧ್ಯಕ್ಷೆ ವಿಜಯಾ ಪಟಗಾರ, ಉಪಾಧ್ಯಕ್ಷೆ ಗೀತಾ ಮುಕ್ರಿ, ಜಿ.ಪಂ ಸದಸ್ಯ ಗಜಾನನ ಪೈ, ತಾ.ಪಂ. ಸದಸ್ಯ ಜಗನ್ನಾಥ ನಾಯ್ಕ, ಸದಸ್ಯೆ ಅನುಸೂಯ ಅಂಬಿಗ ಸೇರಿದಂತೆ ಅಧಿಕಾರಿಗಳು ಹಾಗೂ ರೈತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.