ನಾಲೆಗೆ ನೀರು ಹರಿಸುವ ವಿಚಾರದಲ್ಲಿ ಸಡಿಲಿಸದ ಪಟ್ಟು

2ನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಧರಣಿ • ಕಬ್ಬಿನ ಬಾಕಿ ಪಾವತಿಗೆ ಸಕ್ಕರೆ ಕಾರ್ಖಾನೆಗಳ ನಿರ್ಲಕ್ಷ್ಯ

Team Udayavani, Jun 23, 2019, 1:31 PM IST

mandya-tdy-2..

ಕೆಆರ್‌ಎಸ್‌ ಮತ್ತು ಹೇಮಾವತಿ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘದ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸಿರುವುದು.

ಮಂಡ್ಯ: ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗೆ ಕೆಆರ್‌ಎಸ್‌ ಹಾಗೂ ಹೇಮಾವತಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತಸಂಘದ ಕಾರ್ಯಕರ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾವೇರಿ ನೀರಾವರಿ ನಿಗಮದ ಕಚೇರಿ ಪ್ರವೇಶ ದ್ವಾರದ ಬಳಿ ಪ್ರತಿಭಟಿಸುತ್ತಿರುವ ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಾಲೆಗೆ ನೀರು ಹರಿಸುವ ವಿಚಾರದಲ್ಲಿ ಹಿಡಿದಿರುವ ಪಟ್ಟನ್ನು ಸಡಿಲಿಸದೆ ಅಧಿಕಾರಿಗಳ ಮನವೊಲಿಕೆಗೂ ಮಣಿಯದೆ ಧರಣಿ ಮುಂದುವರಿಸಿದ್ದಾರೆ.

ಜಮೀನುಗಳಲ್ಲಿ ಒಣಗುತ್ತಿರುವ ಬೆಳೆಯನ್ನು ಉಳಿಸಿಕೊಳ್ಳಲು ಕೆಆರ್‌ಎಸ್‌ ಮತ್ತು ಹೇಮಾವತಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ತಕ್ಷಣವೇ ನೀರು ಹರಿಸಬೇಕು. ನಿರಂತರ ಬರಗಾಲದಿಂದ ತತ್ತರಿಸಿರುವ ಜಿಲ್ಲೆಯ ರೈತರು ಸಾಲ ಮಾಡಿ ಬೆಳೆ ಬೆಳೆದಿದ್ದಾರೆ. ಇದೀಗ ಸುಮಾರು 34 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದು ನಿಂತಿರುವ ಕಬ್ಬಿಗೆ ನೀರಿನ ಅವಶ್ಯಕತೆ ಇದೆ. ಇದು ಸರ್ಕಾರ ಮತ್ತು ಅಧಿಕಾರಿಗಳಿಗೆ ಅರ್ಥವಾಗದೆ ರೈತರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ದೂರಿದರು.

ಕಾರ್ಖಾನೆಗಳಿಂದ ರೈತ ವಿರೋಧಿ ನೀತಿ: ಸಕ್ಕರೆ ಕಾರ್ಖಾನೆಗಳಿಗೆ ರೈತರು ಕಬ್ಬು ಪೂರೈಸಿ ಆರು ತಿಂಗಳಾದರೂ ಹಣ ಪಾವತಿಸಿಲ್ಲ. ಕಬ್ಬಿನ ಬಾಕಿ ಪಾವತಿ ಮಾಡದೆ ಕಾರ್ಖಾನೆ ಆಡಳಿತ ಮಂಡಳಿ ಬೇಜವಾಬ್ದಾರಿತನ ಪ್ರದರ್ಶಿಸಿವೆ. ಈ ಬಗ್ಗೆ ಹಲವು ಬಾರಿ ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಿ ಶೀಘ್ರ ಬಾಕಿ ಹಣ ಪಾವತಿಸುವಂತೆ ಎಚ್ಚರಿಕೆ ನೀಡಿದ್ದರೂ ಹಣ ಕೊಡದೇ ರೈತ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಟೀಕಿಸಿದರು.

ಕಬ್ಬು ನುರಿಸುವಿಕೆ ಆರಂಭಿಸಿ: ಮೈಷುಗರ್‌ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯ ಮತ್ತು ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದು. ಎರಡೂ ಕಾರ್ಖಾನೆಗಳಲ್ಲಿ ಶೀಘ್ರ ಕಬ್ಬು ನುರಿಸುವಿಕೆ ಆರಂಭಿಸಬೇಕು. ಅದಕ್ಕೆ ಅಗತ್ಯವಿರುವ ಹಣವನ್ನು ಸರ್ಕಾರ ಈ ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ಪ್ರಸಕ್ತ ಸಾಲಿನಲ್ಲಿ ಈಗಾಗಲೇ ಭತ್ತದ ಕೊಯ್ಲು ನಡೆಯುತ್ತಿದ್ದು, ಶೀಘ್ರ ಕೇಂದ್ರ ಸ್ಥಾಪಿಸಿ ಖರೀದಿ ಮಾಡಬೇಕು. ಮುಂದಿನ ಹಂಗಾಮಿನ ಬೆಳೆ ಬೆಳೆಯಲು ಸಹಕಾರ ಸಂಘ ಹಾಗೂ ರಾಷ್ಟ್ರೀಕೃತ ಬ್ಯಾಂಕು ಮೂಲಕ ರೈತರಿಗೆ ಸಾಲ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡ ದರ್ಶನ್‌ ಪುಟ್ಟಣ್ಣಯ್ಯ, ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್‌, ಜಿ.ಎಸ್‌.ಲಿಂಗಪ್ಪಾಜಿ, ಬಿ.ಬೊಮ್ಮೇಗೌಡ, ಶೆಟ್ಟಹಳ್ಳಿ ರವಿಕುಮಾರ್‌, ಪಿ.ಕೆ.ನಾಗಣ್ಣ, ಸಿದ್ದೇಗೌಡ ಇತರರಿದ್ದರು.

ಟಾಪ್ ನ್ಯೂಸ್

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

Middle Class Family Tulu movie

Middle Class Family: ಮತ್ತೆ ರಂಜಿಸಲು ಬರುತ್ತಿದ್ದಾರೆ ಸೌಂಡ್‌ ಲೈಟ್ಸ್‌ ಹುಡುಗರು

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

Mandya; Kidnapper bites his hand and escapes; A cinematic kind of case

Mandya; ಕಿಡ್ನ್ಯಾಪರ್‌ ಕೈಗೆ ಕಚ್ಚಿ ತಪ್ಪಿಸಿಕೊಂಡ ಬಾಲಕ; ಸಿನಿಮೀಯ ರೀತಿಯ ಪ್ರಕರಣ

ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಔದಾರ್ಯತೆ ತೋರಲಿ: ಎಚ್‌ಡಿಕೆ

H. D. Kumaraswamy: ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಔದಾರ್ಯತೆ ತೋರಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

Zee Kannada Kutumba Awards-2024

Kutumba Awards-2024: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.