ಹೆರೂರಿಗೆ ಬರುವೆ, ಸಮಸ್ಯೆಆಲಿಸುವೆ: ಎ‍ಚ್ಡಿಕೆ

ಗ್ರಾಮ ವಾಸ್ತವ್ಯ ಮುಂದೂಡಿದ್ದಕ್ಕೆ ಸಿಎಂ ಕ್ಷಮೆಯಾಚನೆ | ಜುಲೈನ‌ಲ್ಲಿ ಗ್ರಾಮ ವಾಸ್ತವ್ಯ ನಿಗದಿ

Team Udayavani, Jun 23, 2019, 4:06 PM IST

Udayavani Kannada Newspaper

ಯಾದಗಿರಿ: ಮಳೆಯಿಂದಾಗಿ ಕಲಬುರಗಿ ಜಿಲ್ಲೆ ಹೆರೂರಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ. ಹೀಗಾಗಿ, ಜನತೆ ನಿರಾಸೆಗೊಳ್ಳುವುದು ಬೇಡ. ಮತ್ತೆ ಬಂದು ಸಮಸ್ಯೆ ಆಲಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಯ ನೀಡಿದರು.

ಚಂಡರಕಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಳೆಯಿಂದ ಕಾರ್ಯಕ್ರಮ ಮುಂದೂಡಲಾಗಿದೆ. ಜುಲೈನಲ್ಲಿ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಈ ಮಧ್ಯೆ ಸಮಯ ನೋಡಿಕೊಂಡು ಜುಲೈ ಮೊದಲನೇ ಅಥವಾ ಎರಡನೇ ವಾರದಲ್ಲಿ ಗ್ರಾಮ ವಾಸ್ತವ್ಯ ನಿಗದಿಪಡಿಸುವುದಾಗಿ ಭರವಸೆ ನೀಡಿದರು.

ಹೆರೂರು ಗ್ರಾಮ ಹಾಗೂ ಸುತ್ತಮುತ್ತಲಿನ ಜನರು ಸಾಕಷ್ಟು ನಿರೀಕ್ಷೆಗಳನ್ನಿಟ್ಟುಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರದ ಭರವಸೆ ಹೊಂದಿದ್ದರು. ದೊಡ್ಡಮಟ್ಟದ ನಿರೀಕ್ಷೆ ಹೊಂದಿದ್ದರು. ಆದರೆ, ಅನಿವಾರ್ಯವಾಗಿ ಕಾರ್ಯಕ್ರಮ ಮುಂದೂಡಿರುವುದಕ್ಕೆ ಜನರ ಬಳಿ ಕ್ಷಮೆಯಾಚಿಸುವೆ ಎಂದರು.

ಮಳೆಯ ಕಾರಣ ಕಾರ್ಯಕ್ರಮ ಮುಂದೂಡಿರುವುದಕ್ಕಿಂತ ಹೆಚ್ಚಾಗಿ ಈ ಭಾಗದಲ್ಲಿ ಮಳೆಯಾಗಿರುವುದು ತಮಗೆ ಸಂತಸ ತಂದಿದೆ. ಬಿತ್ತನೆ ವೇಳೆಯಲ್ಲಿ ಮಳೆ ಸುರಿದಿರುವುದು ರೈತರಿಗೆ ಆಶಾದಾಯಕವಾಗಿದೆ. ಪ್ರಕೃತಿಯ ಸಹಕಾರ ದೊರೆತಿದೆ ಎಂದರು.

ತಕ್ಷಣವೇ ಕ್ರಮ: ಚಂಡರಕಿಯಲ್ಲಿ ಜನಸ್ಪಂದನ ವೇಳೆ ಸಿವಿಲ್ ವ್ಯಾಜ್ಯಗಳನ್ನು ಹೊರತುಪಡಿಸಿ ಶಾಲಾ ಕಟ್ಟಡ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಫಲಾನುಭವಿಗಳ ಕೆಲ ಅರ್ಜಿಗಳು ಬಂದಿದ್ದು, ಪ್ರಮುಖವಾಗಿ ಯುವಕರು ಉದ್ಯೋಗ ಕಲ್ಪಿ ಸಲು ಮನವಿ ಸಲ್ಲಿಸಿದ್ದಾರೆ. ಅಂಗವಿಕಲರು, ಮಹಿಳೆಯರ ಕೆಲವು ಅರ್ಜಿ, ಆಕಸ್ಮಿಕವಾಗಿ ಚಿಕ್ಕ ವಯಸ್ಸಿನಲ್ಲಿ ಗಂಡ ಇಲ್ಲದೇ ಅನಾನುಕೂಲವಾಗಿ ಉದ್ಯೋಗ ಕೊಡಿಸುವಂತೆ ಮನವಿಗಳು ಬಂದಿವೆ. ಸಾಧ್ಯವಾದಷ್ಟು ಮಟ್ಟಿಗೆ ಖಾಸಗಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ಹಲವು ಹಳ್ಳಿಗಳ ರಸ್ತೆ ನಿರ್ಮಾಣಕ್ಕೆ ಮನವಿ ಬಂದಿದ್ದು, ತಕ್ಷಣದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದರು. ಈಗಾಗಲೇ ಚಂಡರಕಿಯಲ್ಲಿ ಹಿರಿಯ ಅಧಿಕಾರಿಗಳು, ಸಚಿವರು, ಶಾಸಕರು ಎಲ್ಲರ ಜತೆಗೂಡಿ ಜನಸಾಮಾನ್ಯರ ಮನವಿ ಸ್ವೀಕರಿಸಿ, ಎಲ್ಲವನ್ನೂ ವಿಂಗಡಿಸಿ ಸಮಸ್ಯೆಗಳನ್ನು ಬೇರ್ಪಡಿ ಸಲಾಗಿದೆ. ಇಲಾಖಾವಾರು ಪರಿಮಿತಿಯಲ್ಲಿ ಪರಿಹಾರಕ್ಕೆ ಜಿಲ್ಲಾಧಿಕಾರಿಗಳು ತೀರ್ಮಾನ ಮಾಡಲಿದ್ದಾರೆ ಎಂದರು.

ಅದ್ಧೂರಿ ಸಿದ್ಧತೆ ಬಯಸಿಲ್ಲ: ಗ್ರಾಮ ವಾಸ್ತವ್ಯಕ್ಕೆ ದೊಡ್ಡ ಅದ್ಧೂರಿಯ ಸಿದ್ಧತೆಗಳನ್ನೇನೂ ಬಯ ಸಿಲ್ಲ. ಎರಡು ಫ್ಯಾನ್‌, ನೆಲದ ಮೇಲೆ ಚಾಪೆ ಹಾಸಿ ಮಲಗಿದ್ದೇನೆ. ನಾನು ಜನಸಾಮಾನ್ಯರ ಜತೆ ಇರುವವನಾಗಿದ್ದು, ಶಾಲೆಗಳ ಅಭಿವೃದ್ಧಿ ಉದ್ದೇ ಶದಿಂದ ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದೇನೆ. ವಿದ್ಯಾರ್ಥಿಗಳೊಂದಿಗೆ ಊಟ ಮಾಡಿದ್ದೇನೆ. ಮಕ್ಕಳು ಖುಷಿಪಟ್ಟಿದ್ದಾರೆ. ಶಾಲಾ ವಾಸ್ತವ್ಯದಿಂದ ಮಕ್ಕಳಿಗೆ ಉತ್ತೇಜನ ದೊರೆತು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ತಿಳಿಸಿದರು.

ನೀರು ಹಂಚಿಕೆ ವಿಷಯ ಕುರಿತು ಪ್ರಸ್ತಾಪಿಸಿದ ಅವರು, ಈ ವಿಷಯದಲ್ಲಿ ರಾಜಕೀಯ ಮಾಡ ಬಾರದು. ಅಕ್ಕಪಕ್ಕದ ರಾಜ್ಯಗಳು ಸೌಹಾರ್ದ ಯುತವಾಗಿರಬೇಕು. ಕೊಟ್ಟು ತೆಗೆದುಕೊಳ್ಳುವ ನೀತಿ ಅನುಸರಿಸಬೇಕು. ಒಟ್ಟಿನಲ್ಲಿ ಅಭಿವೃದ್ಧಿ ಮುಖ್ಯ ಎಂದು ಹೇಳಿದರು.

ಟಾಪ್ ನ್ಯೂಸ್

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.