ರೋಜಿಪುರದ ಕಲ್ಯಾಣಿಗೆ ಮರುಜೀವದ ವಿಶ್ವಾಸ


Team Udayavani, Jun 24, 2019, 3:00 AM IST

rojipura

ದೊಡ್ಡಬಳ್ಳಾಪುರ: ನಗರದ ಕೋರ್ಟ್‌ ಸಮೀಪದ ರೋಜಿಪುರದಲ್ಲಿರುವ ನೂರಾರು ವರ್ಷಗಳ ಇತಿಹಾಸವಿರುವ ಕಲ್ಯಾಣಿಯನ್ನು ಜಿಲ್ಲಾಧಿಕಾರಿ ಸಿ.ಎಸ್‌. ಕರಿಗೌಡ ಮತ್ತು ಉಪವಿಭಾಗಾಧಿಕಾರಿ ಸಿ.ಮಂಜುನಾಥ್‌ ನೇತೃತ್ವದಲ್ಲಿ 150ಕ್ಕೆ ಹೆಚ್ಚು ಜನರು, ಅಧಿಕಾರಿಗಳು ಸೇರಿ ಸ್ವಚ್ಛಗೊಳಿಸಿದರು.

ಸೊಳ್ಳೆಗಳಿಂದ ಸಾಂಕ್ರಾಮಿಕ ರೋಗದ ಭಯ: ಕಲ್ಯಾಣಿ ದಶಕಗಳಿಂದ ಬಳಕೆಯಾಗದೆ ಹೂಳು ತುಂಬಿ, ಗಿಡಗಂಟಿ, ಪೊದೆಗಳು ಬೆಳೆದಿದ್ದವು. ಅಲ್ಲದೆ ಕಲ್ಯಾಣಿಯಲ್ಲಿದ್ದ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವುದರಿಂದ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭಯ ಮೂಡಿತ್ತು. ಅಲ್ಲದೆ ವಿಷಕಾರಿ ಹಾವುಗಳ ಆವಾಸ ಸ್ಥಾನವಾಗಿದ್ದರಿಂದ ಜನರಲ್ಲಿ ಸಂಚರಿಸಲು ನಿವಾಸಿಗಳಿಗೆ ಭಯವಾಗುತ್ತಿತ್ತು. ಹೀಗಾಗಿ ಅಲ್ಲಿನ ನಿವಾಸಿಗಳು ಮತ್ತು ಪರಿಸರಾಸಕ್ತರು ಸೇರಿ ಕಲ್ಯಾಣಿಯನ್ನು ಶ್ರಮದಾನದಿಂದ ಸ್ವಚ್ಛಗೊಳಿಸಿದರು.

ಸೂಕ್ತ ನಿರ್ವಹಣೆಯಿಲ್ಲದೆ ಪಾಳು: ಹಿಂದಿನ ಕಾಲದಲ್ಲಿ ಈ ಕಲ್ಯಾಣಿ ರೋಜಿಪುರದ ಎಲ್ಲಾ ನಿವಾಸಿಗಳ ದಿನ ಬಳಕೆ ಹಾಗೂ ದನಕರುಗಳಿಗೆ ಕುಡಿಯಲು ನೀರು ಒದಗಿಸುತ್ತಿತ್ತು. ಆದರೆ ನಗರ ಬೆಳೆದಂತೆ ಕಟ್ಟಡ ತ್ಯಾಜ್ಯ ಮತ್ತು ಕೊಳಕು ನೀರಿನಿಂದ ತುಂಬಿ ದುರ್ನಾತ ಬೀರುತ್ತಿತ್ತು. ಅಲ್ಲದೆ ಸುಂದರವಾದ ಕಲ್ಲು ಕಟ್ಟಡ ಹೊಂದಿದ್ದ ಕಲ್ಯಾಣಿ, ಸೂಕ್ತ ನಿರ್ವಹಣೆಯಿಲ್ಲದೆ ಪಾಳು ಬಿದ್ದಿತ್ತು. ಜನರು ತಮ್ಮ ಕಟ್ಟಡಗಳ ತ್ಯಾಜ್ಯವನ್ನು ಸುರಿಯುತ್ತಿದ್ದರು. ಹೀಗಾಗಿ ಪುರಸಭೆ ಕಲ್ಯಾಣಿ ಸುತ್ತಲೂ ತಂತಿ ಬೇಲಿ ಹಾಕಿದ್ದರೂ ವ್ಯರ್ಥವಾಗಿತ್ತು.

ಪರಿಸರ ಸಮ್ಮೇಳನದಲ್ಲಿ ಮನವಿ: ನಗರದಲ್ಲಿ ಇತ್ತೀಚೆಗಷ್ಟೇ ನಡೆದ ಪರಿಸರ ಸಮ್ಮೇಳನದಲ್ಲಿ ಕೋರ್ಟ್‌ ಸಮೀಪದ ಕಲ್ಯಾಣಿ ಸೇರಿದಂತೆ ನಗರದಲ್ಲಿನ ಐತಿಹಾಸಿಕ ಕಲ್ಯಾಣಿಗಳನ್ನು ಸ್ವಚ್ಛಗೊಳಿಸಲು ಸಮಾನ ಮನಸ್ಕರು ಒಂದೆಡೆ ಸೇರಬೇಕು ಎಂದು ಸ್ಥಳೀಯ ನಿವಾಸಿ ಕೆ. ಸುಲೋಚನಮ್ಮ, ವಕೀಲ ಲೋಕೇಶ್‌ಮನವಿ ಮಾಡಿದ್ದರು.

ಅಧಿಕಾರಿಗಳು, ಪರಿಸರಾಸಕ್ತರ ಸ್ಪಂದನೆ: ಸ್ಥಳೀಯರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಸಿ.ಎಸ್‌. ಕರೀಗೌಡ, ಉಪವಿಭಾಗಾಧಿಕಾರಿ ಸಿ. ಮಂಜುನಾಥ್‌ 4ನೇ ಶನಿವಾರ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಕಲ್ಯಾಣಿ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿದ್ದರು. ಶ್ರಮದಾನದ ನಂತರ ಕಲ್ಯಾಣಿ ಸಮೀಪದಲ್ಲೇ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕರೀಗೌಡ,

ಒಂದು ಸಾವಿರ ಅಡಿಗಳಷ್ಟು ಆಳದವರೆಗೆ ಕೊಳವೆ ಬಾವಿ ಕೊರೆದರೂ ಸಹ ನೀರು ದೊರೆಯುವುದೇ ಕಷ್ಟ. ಆದರೆ ಇಲ್ಲಿನ ಕಲ್ಯಾಣಿಯಲ್ಲಿ ಸುಮಾರು 20 ಅಡಿಗಳ ಆಳದಲ್ಲಿಯೇ ನೀರು ಕಾಣಿಸುತ್ತಿವೆ. ಇಂತಹ ಮಹತ್ವದ ಐತಿಹಾಸಿಕ ಕಲ್ಯಾಣಿಯನ್ನು ಸ್ವಚ್ಛವಾಗಿಟ್ಟುಕೊಳ್ಳುವ ಹೊಣೆಗಾರಿಕೆ ನಗರಸಭೆ ಪೌರಕಾರ್ಮಿಕರದಷ್ಟೇ ಅಲ್ಲ. ಸ್ಥಳೀಯ ನಿವಾಸಿಗಳ ಪಾತ್ರ ದೊಡ್ಡದು ಎಂದರು.

ಸ್ಥಳೀಯ ಸಹಕಾರ ಮುಖ್ಯ: ಕಲ್ಯಾಣಿಯಲ್ಲಿನ ಪುರಾತನ ಕಲ್ಲುಕಟ್ಟಡ ಶಿಥಿಲಗೊಂಡು ಹಾಳಾಗಿದೆ. ಆದರೆ ಕಲ್ಲುಗಳು ಇದ್ದು, ಹಿಂದಿನ ಸ್ಥಿತಿಯಲ್ಲೇ ಕಟ್ಟಡ ನಿರ್ಮಾಣಕ್ಕೆ ಸ್ಥಳೀಯರ ಸಹಕಾರ ಅಗತ್ಯವಿದೆ. ಜಿಲ್ಲೆಯಲ್ಲಿ ಜನರ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಕೆರೆಗಳ ಅಭಿವೃದ್ಧಿ ಕಾಮಗಾರಿಯಂತೆ ಕಲ್ಯಾಣಿ ಅಭಿವೃದ್ಧಿಗೆ ಸ್ಥಳೀಯ ನಿವಾಸಿಗಳು ದೇಣಿಗೆ ನೀಡಿದರೆ ಮಾತ್ರ ಶೀಘ್ರವಾಗಿ ಅಭಿವೃದ್ಧಿ ಕೆಲಸ ನಡೆಯಲಿದೆ. ಸರ್ಕಾರದ ವತಿಯಿಂದಲೇ ಕೆಲಸ ಆಗಲಿ ಎಂದು ಕಾಯುತ್ತ ಕುಳಿತರೆ ಮತ್ತೆ ಕಲ್ಯಾಣಿ ಹೂಳಿನಿಂದ ತುಂಬಿಕೊಳ್ಳಲಿದೆ. 15 ದಿನಗಳಿಗೆ ಒಮ್ಮೆ ಒಂದು ಕಲ್ಯಾಣಿಯನ್ನು ಸ್ವಚ್ಛಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

2.10 ಲಕ್ಷ ರೂ. ದೇಣಿಗೆ ಸಂಗ್ರಹ: ಕಲ್ಯಾಣಿ ಅಭಿವೃದ್ಧಿಗೆ ಜಿಲ್ಲಾಧಿಕಾರಿ ಕರೀಗೌಡ ಅವರು ವೈಯಕ್ತಿಕವಾಗಿ 10,000 ರೂ.ದೇಣಿಗೆ ನೀಡಿದರು. ಜಿಲ್ಲಾಧಿಕಾರಿ ಸೇವಮನೋಭಾವ ಮೆಚ್ಚಿದ ಸಭೆಯಲ್ಲಿ ಪಾಲ್ಗೊಂಡಿದ್ದವರು ತಮ್ಮ ಶಕ್ತಿಯನುಸಾರ ದೇಣಿಗೆ ನೀಡಿದರು. ಕೊನೆಯಲ್ಲಿ ಒಟ್ಟು 2.10 ಲಕ್ಷ ರೂ. ದೇಣಿಗೆ ಸಂಗ್ರಹವಾಯಿತು.

ಸ್ಥಳೀಯರಿಂದ ಸಂಗ್ರಹವಾದ ದೇಣಿಗೆ ಹಣವನ್ನು ನಗರಸಭೆ ಪೌರಾಯುಕ್ತರಿಗೆ ಹಸ್ತಾತಂತರಿಸಿ ಕಾಮಗಾರಿಯನ್ನು ತ್ವರಿತವಾಗಿ ಮುಕ್ತಾಯಗೊಳಿಸುವಂತೆ ತಿಳಿಸಲಾಯಿತು. ಅಲ್ಲದೆ ನಗರಸಭೆ ಪೌರಾಯುಕ್ತ ಆರ್‌. ಮಂಜುನಾಥ್‌, ಕಲ್ಯಾಣಿ ಅಭಿವೃದ್ಧಿಗೆ ನಗರಸಭೆಯಿಂದ 5 ಲಕ್ಷ ರೂ.ಗಳ ಟೆಂಡರ್‌ ಪ್ರಕ್ರಿಯೆ ಮುಕ್ತಾಯವಾಗಿದೆ. ಸದ್ಯದಲ್ಲೇ ನಗರಸಭೆಯಿಂದ ಅಭಿವೃದ್ಧಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.

ರೋಜಿಪುರ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ, ಪರಿಸರ ಸಿರಿ ಕ್ಷೇಮಾಭಿವೃದ್ಧಿ ಸಂಘ, ಕರುನಾಡ ಸೇನೆ, ರಾಜ್ಯ ರೈತ ಸಂಘದ ಕಾರ್ಯಕರ್ತರು, ವಕೀಲರು ಹಾಗೂ ನಗರಸಭೆ ಪೌರ ಕಾರ್ಮಿಕರು ಶ್ರಮದಾನದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.