ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ ಯೋಜನೆ
Team Udayavani, Jun 24, 2019, 5:07 AM IST
ಉಡುಪಿ: ಭಾರತ ಸರಕಾರದ ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ- ಯುನಿಕ್ ಡಿಸೆಬಿಲಿಟಿ ಐಡಿ) ಯೋಜನೆಯಂತೆ ವಿಕಲಚೇತರಿಗೆ ಸಮಗ್ರ ಮಾಹಿತಿ ಹೊಂದಿದ ಚೀಟಿ ಒದಗಿಸಲಾಗುತ್ತಿದೆ ಎಂದು ಜಿಲ್ಲಾ ವಿಕಲಚೇತನ ಸಬಲೀಕರಣ ಅಧಿಕಾರಿ ನಿರಂಜನ ಭಟ್ ತಿಳಿಸಿದ್ದಾರೆ.
ಇದರಲ್ಲಿ ವಿಕಲಚೇತನ ವ್ಯಕ್ತಿಯ ವಿವರಗಳು ಹಾಗೂ ಅವರಲ್ಲಿರುವ ವಿಕಲತೆಯ ವಿವರ ಮತ್ತು ಪ್ರಮಾಣವನ್ನು ನಮೂದಿಸಲಾಗುತ್ತದೆ.
ಯೋಜನೆಯು ದೇಶದ ವಿಕಲಚೇತನರ ಅಂಕಿ ಸಂಖ್ಯೆಗಳ ಮಾಹಿತಿಯನ್ನು ನೀಡುತ್ತದೆ. ಸರಕಾರದ ಸೌಲಭ್ಯಗಳು ಪರಿಣಾಮಕಾರಿಯಾಗಿ ವಿಕಲಚೇತನರಿಗೆ ತಲುಪುವಂತೆ ಮಾಡುವುದು ಇದರ ಉದ್ದೇಶವಾಗಿದೆ. ರಾಜ್ಯ, ಜಿಲ್ಲೆ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಅಂಗವಿಕಲರು ಸೌಲಭ್ಯಗಳನ್ನು ಪಡೆಯುವಲ್ಲಿ ಪಾರದರ್ಶಕತೆ ಕಾಪಾಡುವುದು ಹಾಗೂ ಅವರ ಸಾಮಾಜಿಕ ಹಾಗೂ ಆರ್ಥಿಕ ಚಿತ್ರಣವನ್ನು ನೀಡಲು ಸಹಕಾರಿಯಾಗಲಿದೆ. ಚೀಟಿಯು ಆಧಾರ್ ಕಾರ್ಡ್ ನಷ್ಟೇ ಪ್ರಮುಖ ದಾಖಲೆಯಾಗಿದೆ.
ಈ ಯೋಜನೆಯನ್ನು ಸರಕಾರ 2019ರಿಂದ ಕಡ್ಡಾಯಗೊಳಿಸಿದೆ. ಪ್ರತಿಯೊಬ್ಬ ವಿಕಲಚೇತನ ವ್ಯಕ್ತಿಯು ಯೋಜನೆಯ ಅಡಿ ನೊಂದಣಿ ಮಾಡಿಕೊಂಡು ಚೀಟಿಯನ್ನು ಪಡೆದುಕೊಳ್ಳುವಂತೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.