ಅಮೆರಿಕದ ಸೈಬರ್ ವಾರ್
ಡ್ರೋನ್ ಉರುಳಿಸಿದ ಇರಾನ್ ಮೇಲೆ ಪ್ರತೀಕಾರ
Team Udayavani, Jun 24, 2019, 6:00 AM IST
ಸಾಂದರ್ಭಿಕ ಚಿತ್ರ.
ವಾಷಿಂಗ್ಟನ್: ಡ್ರೋನ್ ಹೊಡೆದುರುಳಿಸಿದ್ದಕ್ಕೆ ಪ್ರತೀಕಾರವಾಗಿ ಇರಾನ್ ವಿರುದ್ಧ ಅಮೆರಿಕ ಸೈಬರ್ ದಾಳಿ ನಡೆಸಿದೆ. ಕಳೆದ ವಾರ ಅಮೆರಿಕದ ಡ್ರೋನ್ ಒಂದನ್ನು ಇರಾನ್ ಗಡಿ ಭಾಗದಲ್ಲಿ ಇರಾನ್ ಸೇನೆ ಹೊಡೆದುರುಳಿಸಿದ್ದು, ಉಭಯ ದೇಶಗಳ ಮಧ್ಯೆ ಬಿಕ್ಕಟ್ಟು ತೀವ್ರಗೊಳ್ಳಲು ಕಾರಣವಾಗಿದೆ. ಇದಕ್ಕೆ ಪ್ರತೀಕಾರವಾಗಿ ಮೊದಲು ಕ್ಷಿಪಣಿ ದಾಳಿ ನಡೆಸಲು ಅಮೆರಿಕ ಸಜ್ಜಾಗಿತ್ತಾದರೂ, ಕೊನೆ ಕ್ಷಣದಲ್ಲಿ ಅದನ್ನು ಕೈಬಿಟ್ಟಿತ್ತು. ಆದರೆ ಈಗ ಇರಾನ್‌ನ ಕ್ಷಿಪಣಿ ನಿಯಂತ್ರಣಾ ವ್ಯವಸ್ಥೆಯ ಮೇಲೆ ಸೈಬರ್ ದಾಳಿ ನಡೆಸಿದೆ. ಕ್ಷಿಪಣಿಗಳು ಹಾಗೂ ರಾಕೆಟ್‌ಗಳನ್ನು ನಿಯಂತ್ರಿಸುವ ಕಂಪ್ಯೂಟರ್‌ಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಗುಪ್ತಚರ ದಳದ ಮೂಲಗಳು ತಿಳಿಸಿವೆ.
ಈ ರೀತಿಯ ದಾಳಿ ನಡೆಸಲು ಅಮೆರಿಕ ಕೆಲವು ವಾರಗಳಿಂದ ಪೂರ್ವತಯಾರಿ ನಡೆಸಿತ್ತು. ಕೆಲವು ದಿನಗಳ ಹಿಂದೆ ಹೊರ್ಮುಜ್ ಪ್ರದೇಶದಲ್ಲಿ ತೈಲ ಹಡಗುಗಳ ಮೇಲೆ ಇರಾನ್ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ದಾಳಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ವಿವರವನ್ನು ಅಮೆರಿಕ ಪ್ರಕಟಿಸಿಲ್ಲ.
ಇರಾನ್‌ಗೆ ಎಚ್ಚರಿಕೆ
ಕೊನೆಯ ಕ್ಷಣದಲ್ಲಿ ಇರಾನ್ ಮೇಲೆ ಕ್ಷಿಪಣಿ ದಾಳಿ ನಡೆಸುವ ನಿರ್ಧಾರ ಹಿಂತೆಗೆದುಕೊಂಡಿದ್ದನ್ನು ಟ್ರಂಪ್ ಬಲಹೀನತೆ ಎಂದು ಇರಾನ್ ಪರಿಗಣಿಸಬಾರದು. ನಮ್ಮ ಸೇನೆಯು ದಾಳಿಗೆ ಸಶಕ್ತ ಮತ್ತು ಸನ್ನದ್ಧವಾಗಿದೆ ಎಂದು ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Kollywood: ಸೂರ್ಯ – ಕಾರ್ತಿಕ್ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್ ಫಿಕ್ಸ್
Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.