ವಿದ್ಯೆ ಜತೆ ದೇಶಾಭಿಮಾನ ಹೆಚ್ಚಲಿ

ಶಿಕ್ಷಣ ವ್ಯಾಪಾರೀಕರಣವಾಗದಿರಲಿ•ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ

Team Udayavani, Jun 24, 2019, 9:50 AM IST

24-June-2

ಕಲಬುರಗಿ: ತಾಲೂಕಿನ ಉಪಳಾಂವ ಗ್ರಾಮದಲ್ಲಿರುವ ಶ್ರೀರಾಮ ಕನ್ನಡ ಕಾನ್ವೆಂಟ್ ಶಾಲೆಯಲ್ಲಿ ಎಸ್‌.ಎಸ್‌.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಲಬುರಗಿ: ಮಕ್ಕಳಿಗೆ ಅಕ್ಷರ ಅಭ್ಯಾಸದ ಜೊತೆಗೆ ಮಾನವೀಯ ಮೌಲ್ಯಗಳು ಹಾಗೂ ದೇಶಾಭಿಮಾನದ ಪಾಠ ಹೇಳಿ ದೇಶಭಕ್ತರನ್ನು ಮಾಡುವುದು ಅವಶ್ಯಕ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಹೇಳಿದರು.

ತಾಲೂಕಿನ ಉಪಳಾಂವ ಗ್ರಾಮದಲ್ಲಿರುವ ಶ್ರೀರಾಮ ಕನ್ನಡ ಕಾನ್ವೆಂಟ್ ಶಾಲೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಸ್‌.ಎಸ್‌.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪಾಲಕರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಪಾಲಕರು ತಮ್ಮ ಮಕ್ಕಳು ಹೆಚ್ಚು ಅಂಕ ಪಡೆದು ಡಾಕ್ಟರ್‌, ಇಂಜಿನಿಯರ್‌ ಆಗಬೇಕು ಎನ್ನುವ ಆಸೆಯಿಂದ ಅವರ ಮೇಲೆ ಮಾನಸಿಕ ಒತ್ತಡ ಹೇರುತ್ತಿದ್ದಾರೆ. ತಮ್ಮ ಮಗು ಉತ್ತಮ ಗುಣಗಳನ್ನು ಹೊಂದಿದ ರಾಷ್ಟ್ರದ ಪ್ರಜೆಯಾಗಿ ಸಮೃದ್ಧ ರಾಷ್ಟ್ರ ಕಟ್ಟಬೇಕು ಎಂದು ಪಾಲಕರ ಮನಸ್ಸಿನಲ್ಲಿ ಬರದಿರುವುದು ವಿಷಾದನೀಯ ಸಂಗತಿ ಎಂದರು. ಇಂದಿನ ದಿನಗಳಲ್ಲಿ ಶಿಕ್ಷಣ ವ್ಯಾಪಾರಿಕರಣವಾಗದೇ ಸಂಸ್ಕಾರಯುತ ಸಮಾಜ ನಿರ್ಮಾಣ ಮಾಡುವುದು ಶಿಕ್ಷಣ ಸಂಸ್ಥೆಗಳ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಶ್ರೀನಿವಾಸ ಸರಡಗಿಯ ರೇವಣಸಿದ್ಧ ಶಿವಾಚಾರ್ಯರು, ರೋಟರಿ ಕ್ಲಬ್‌ ಮಿಡ್‌ಟೌನ್‌ನ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಉದ್ಯಮಿ ಗೋಪಾಲ ಆರ್‌. ಪಾಲಾದಿ, ತಾ.ಪಂ. ಮಾಜಿ ಅಧ್ಯಕ್ಷ ವಿಜಯಕುಮಾರ ಬಿರಾದಾರ ಮುಂತಾದವರಿದ್ದರು. ಸಂಸ್ಥೆ ಅಧ್ಯಕ್ಷ ಗೌಡೇಶ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಗೋವಾದಲ್ಲಿ ಕನ್ನಡ ಸಂಘದಿಂದ ಕರುನಾಡ ಪದ್ಮಶ್ರೀ ಪ್ರಶಸ್ತಿ ಪಡೆದ ಶ್ರೀನಿವಾಸ ಸರಡಗಿಯ ರೇವಣಸಿದ್ಧ ಶಿವಾಚಾರ್ಯರನ್ನು ಸಂಸ್ಥೆ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು.ಎಸ್‌.ಎಸ್‌.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಲಾವಣ್ಯ ನಾಗೂರ, ಭಾಗ್ಯಶ್ರೀ ಪೊಲೀಸ್‌ ಪಾಟೀಲ, ಕಾಂಚನಾ ಮಾಡ್ಯಾಳ, ರಂಜಿತಾ ಕುಂಬಾರ, ಗುರುಪಾದಪ್ಪ ಜಮಾದಾರ, ಹಣಮಂತರಾಯ ಮೂಲಗೆ, ಶಿವಕುಮಾರ ಹತಗುಂದಿ ಅವರಿಗೆ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು.

ಸಂಗೀತ ಕಲಾವಿದರಾದ ಸಂಗಮೇಶ ಶಾಸ್ತ್ರೀ ಮಾಶಾಳ, ಶ್ರವಣಕುಮಾರ ಮಠ, ಕಲ್ಯಾಣಕುಮಾರ ಬಂಟನಳ್ಳಿ, ನಿಜಲಿಂಗ ಶೆಳ್ಳಗಿ, ಸುರೇಶ ನಿಡಗುಂದಾ, ಶರಣಕುಮಾರ ಶಿರೊಳ್ಳಿ, ಕಾಶಿನಾಥ ಭಂಡಾರಿ, ರಾಜು ಹೆಬ್ಟಾಳ ಹಾಗೂ ಪಂಡಿತ ಪುಟ್ಟರಾಜ ಗವಾಯಿಗಳ ಆಶ್ರಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕುಮಾರ ಮಲ್ಲಿಕಾರ್ಜುನ ಕಲಬುರಗಿ ಸಂಗೀತ ಸೇವೆ ಸಲ್ಲಿಸಿದರು.

ಶಿಕ್ಷಕರಾದ ಜ್ಯೋತಿ ಪಾಟೀಲ, ಸಂಗೀತಾ ಪಾಟೀಲ, ಶಿವಲೀಲಾ ಇಟಗಿ, ಸುಧಾ ಔರಾದ, ರತ್ನಾ, ಓಂದೇವಿ ಬಿರಾದಾರ, ಭಾರತಿ ಗೌಡಗಾಂವ, ಸಂಗೀತಾ ಉಪಳಾಂವ, ಮಲಕಾರಿ ಪೂಜಾರಿ, ನಾಗೇಶ ಢಗೆ, ಶರಣು ಜೆ. ಪಾಟೀಲ, ರವಿ ಮೂಲಗೆ, ನಾಗರಾಜ, ದತ್ತು ಪೂಜಾರಿ, ಶಿವಕುಮಾರ ಗಣಜಲಖೇಡ, ನೀಲಾಂಬಿಕ ಚೌಕಿಮಠ, ರಮೇಶ ನಿಂಬಾಳ, ಸಿದ್ಧಪ್ಪಾ ನಿಂಬಾಳ ಸೇರಿದಂತೆ ವಿದ್ಯಾರ್ಥಿಗಳು, ಪಾಲಕರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಶಿಕ್ಷಕಿ ಶ್ವೇತಾ ರೆಡ್ಡಿ ಸ್ವಾಗತಿಸಿದರು, ಮಧುರಾಣಿ ಬೇನೂರ ನಿರೂಪಿಸಿದರು, ಶ್ರೀದೇವಿ ಪಟವಾದಿ ವಂದಿಸಿದರು.

ಟಾಪ್ ನ್ಯೂಸ್

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.