ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಲು ಮನವಿ
Team Udayavani, Jun 24, 2019, 9:52 AM IST
ಗದಗ: ಜಿಲ್ಲೆಗೆ ಹೊಂದಿಕೊಂಡಿರುವ ತುಂಗಭದ್ರಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ತಡೆಯುವಂತೆ ಒತ್ತಾಯಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ ಪ್ರಸನ್ನಕುಮಾರಗೆ ಮನವಿ ಸಲ್ಲಿಸಲಾಯಿತು.
ಗದಗ: ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ತುಂಗಭದ್ರಾ ನದಿಯ ಉದ್ದಕ್ಕೂ ಅಕ್ರಮ ಮರಳು ಗಣಿಗಾರಿಕೆ ನಡೆಸಿರುವ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿದೆ.
ಈ ಕುರಿತು ಸಂಘದ ರಾಜ್ಯಾಧ್ಯಕ್ಷ ವಿಠಲ ಗಣಾಚಾರಿ ನೇತೃತ್ವದಲ್ಲಿ ರೈತರು ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕ ಪ್ರಸನ್ನಕುಮಾರ ಅವರಿಗೆ ಮನವಿ ಸಲ್ಲಿಸಿ, ಗದಗ ಜಿಲ್ಲೆಯ ಮುಂಡರಗಿ, ಶಿರಹಟ್ಟಿ ಮತ್ತು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲೂಕು ಗಡಿಯಲ್ಲಿ ಹರಿಯುವ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ಸಾಗಿದೆ. ಕಾನೂನು ಬಾಹಿರ ಮತ್ತು ಅವೈಜ್ಞಾನಿಕವಾಗಿ ಚೈನ್ ಮಶಿನ್‌ಗಳನ್ನು ಬಳಸಿ ಮರಳು ತೆಗೆಯಲಾಗುತ್ತಿದೆ. ಜಿಪಿಎಸ್ ಅಳವಡಿಕೆಯಲ್ಲೂ ಭಾರೀ ಗೋಲ್ಮಾಲ್ ನಡೆಯುತ್ತಿದೆ ಎಂದು ಆರೋಪಿಸಿದರು.
ಗಣಿ ಮತ್ತು ವಿಜ್ಞಾನ ಇಲಾಖೆಯವರು ನದಿ ಪಾತ್ರದಲ್ಲಿ ಕಾಟಾಚಾರಕ್ಕೆ ವೀಕ್ಷಣೆ ಮಾಡಿದ್ದು, ವಾಸ್ತವ್ಯಕ್ಕೆ ವಿರುದ್ಧವಾಗಿ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಕೋರ್ಲಹಳ್ಳಿ ಪಾಯಿಂಟ್‌ನಲ್ಲಿ ಯಂತ್ರೋಪಕರಣ ಉಪಯೋಗಿಸಿ ಅಕ್ರಮ ಮರಳು ಗಣಿಕಾರಿಕೆ ನಡೆಸುತ್ತಿದ್ದಾರೆ. ಅದರಂತೆ ಎಲ್ಲ ಪಾಯಿಂಟ್‌ಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ದೊಡ್ಡ ಪ್ರಮಾಣದಲ್ಲಿ ಪರಿಸರಕ್ಕೆ ಮತ್ತು ಸರಕಾರಕ್ಕೆ ಅನ್ಯಾಯವೆಸಗುತ್ತಿದ್ದಾರೆ ಎಂದು ದೂರಿದ ಅವರು, ಈ ಕುರಿತು ಸಮಗ್ರವಾಗಿ ಪರಿಶೀಲಿಸಿ, ಆರೋಪಿತ ಮರಳು ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು.
ಗಂಗಣ್ಣ ಹಾಲಚೌಡಾಳ, ಮಂಜುನಾಥ ಬಿ. ಬೆಳಗಟ್ಟಿ, ರಾಘು ಗೊಡಪಟ್ಟಿ, ಬಸುರಾಜ ಆನೇಪ್ಪನವರು, ಮಂಜು ಪಾಟೀಲ, ವಾಸು ಬಿಜ್ಜೂರು, ವಿರೂಪಾಕ್ಷಯ್ಯ ಹಿರೇಮಠ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.