ಉನ್ನತ ಮಟ್ಟಕ್ಕೇರಲು ಗುಣಾತ್ಮಕ ಶಿಕ್ಷಣ ಅಗತ್ಯ

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮದ್ದೂರು ತಹಶೀಲ್ದಾರ್‌ ಗೀತಮ್ಮ ಸಲಹೆ

Team Udayavani, Jun 24, 2019, 1:11 PM IST

kolar-tdy-4..

ಮುಳಬಾಗಿಲು ನಗರದಲ್ಲಿ ತಾಲೂಕು ಕನಕ ನೌಕರರ ಸಂಘದಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮದ್ದೂರು ತಹಶೀಲ್ದಾರ್‌ ಗೀತಮ್ಮ ಉದ್ಘಾಟಿಸಿದರು.

ಮುಳಬಾಗಿಲು: ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ಧಿಯಾದಾಗಲೇ ಸಮುದಾಯದ ಪ್ರಗತಿ ಸಾಧ್ಯ ಎಂದು ಮದ್ದೂರು ತಹಶೀಲ್ದಾರ್‌ ಗೀತಮ್ಮ ಅಭಿಪ್ರಾಯಪಟ್ಟರು.

ನಗರದ ಡಿವಿಜಿ ಗಡಿ ಕನ್ನಡ ಭವನದಲ್ಲಿ ಭಾನುವಾರ ತಾಲೂಕು ಕನಕ ನೌಕರರ ಸಂಘದಿಂದ ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸಮಾಜದ ಮಕ್ಕಳಿಗೆ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಕಷ್ಟು ಅಭಿವೃದ್ಧಿ ಹೊಂದುವುದು ಒಳ್ಳೆಯ ಬೆಳವಣಿಗೆ. ಆದರೂ ಪ್ರತಿಯೊಂದು ಕ್ಷೇತ್ರದಲ್ಲಿ ಪೈಪೋಟಿ ಇರುವುದರಿಂದ ಜೀವನದಲ್ಲಿ ಉನ್ನತ ಮಟ್ಟಕ್ಕೆ ಏರಲು ಗುಣಾತ್ಮಕ ಶಿಕ್ಷಣ ಪ್ರತಿಯೊಬ್ಬರೂ ಪಡೆದುಕೊಳ್ಳಲೇಬೇಕಿದೆ. ಆಗ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು, ಸಮುದಾಯವನ್ನು ಸಮರ್ಥ ವಾಗಿ ಮುನ್ನಡೆಸಲು ಸಹಕಾರಿಯಾಗಲಿದೆ ಎಂದು ವಿವರಿಸಿದರು.

ಹೊರ ಪ್ರಪಂಚಕ್ಕೆ ಪರಿಚಯಿಸಿ: ಸಾಕಷ್ಟು ಮಂದಿ ವಿದ್ಯಾರ್ಥಿಗಳು ಎಲೆ ಮರಿಕಾಯಿಗಳಂತೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಸಾಧ್ಯವಾಗದೆ, ಸೂಕ್ತ ಅವಕಾಶಗಳು ದೊರೆಯದೆ ವಂಚಿತರಾಗಿರುವ ಉದಾಹರಣೆಗಳಿವೆ. ಅದರಲ್ಲೂ ಗ್ರಾಮೀಣ ಭಾಗದ ಯುವಕ-ಯುವತಿಯರು ಹೆಚ್ಚನ ಸಂಖ್ಯೆಯಲ್ಲಿ ಕಂಡು ಬರುತ್ತಾರೆ. ಆದ್ದರಿಂದ ಪ್ರತಿಯೊಬ್ಬ ಪ್ರತಿಭಾವಂತ ಮಗುವೂ ಹೊರ ಪ್ರಪಂಚಕ್ಕೆ ಪರಿಚಯಿಸುವ ಕೆಲಸವನ್ನು ಕನಕ ನೌಕರರ ಸಂಘ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಉನ್ನತ ವ್ಯಾಸಂಗ ಮಾಡಿ: ಕನಕ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್‌.ಆರ್‌.ವೆಂಕಟೇಶಪ್ಪ ಮಾತನಾಡಿ, ತಾಲೂಕಿನಲ್ಲಿ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿಯಲ್ಲಿ ಸಮಾಜದ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆದರೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, ಸದ್ಬಳಕೆ ಮಾಡಿಕೊಂಡು, ಉನ್ನತ ವಿದ್ಯಾಭ್ಯಾಸ ಪಡೆದುಕೊಳ್ಳಬೇಕೆಂದು ಹೇಳಿದರು.

ಅಭ್ಯಾಸ ಮಾಡಲು ಅವಕಾಶ ಕೊಡಿ: ಬಿಬಿಎಂಪಿ ಹಿರಿಯ ಅಧಿಕಾರಿ ಲಲಿತ ಕನ್ಯಾಗಪ್ಪ ಮಾತನಾಡಿ, ಮಕ್ಕಳ ವಿದ್ಯಾಭ್ಯಾಸಕ್ಕೆ ಪೋಷಕರು ಪೂರಕ ವಾತಾವರಣ ಕಲ್ಪಿಸಿಕೊಡಬೇಕು. ಪಠ್ಯ ವಿಷಯಗಳಿಗೆ ಸಂಬಂಧಿಸಿದಂತೆ ಅಗತ್ಯವಾದ ಸಾಮಗ್ರಿಗಳನ್ನು ಪೂರೈಸಬೇಕು. ಮಕ್ಕಳ ಆಯ್ದ ವಿಷಯಗಳನ್ನು ಅಭ್ಯಾಸ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು, ಸಮುದಾಯದ ಹಿರಿಯರನ್ನು ಸನ್ಮಾನಿಸಲಾಯಿತು. ನೌಕರರ ಸಂಘದ ಜಿಲ್ಲಾಧ್ಯಕ್ಷ ವೆಂಕಟಶಿವಪ್ಪ, ಗೌರವಾಧ್ಯಕ್ಷ ಕೆ.ಮರಿಯಪ್ಪ, ಕುರುಬರ ಸಂಘದ ತಾಲೂಕು ಅಧ್ಯಕ್ಷ ಸುಬ್ರಮಣಿ, ನೌಕರರ ಸಂಘದ ಮಾಜಿ ಅಧ್ಯಕ್ಷ ಎನ್‌.ಜಗದೀಶ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎನ್‌.ತಾಯಲೂರಪ್ಪ, ಯುವ ವೇದಿಕೆ ಅಧ್ಯಕ್ಷ ಕೋಳಿ ಶ್ರೀನಿವಾಸ್‌, ಎನ್‌.ಶಂಕರ್‌, ಆದಿನಾರಾಯಣ, ಕಾರ್ಯದರ್ಶಿ ಬಿ.ಎಂ.ಶಂಕರಪ್ಪ, ರಮೇಶ್‌, ಎನ್‌.ಲೋಕೇಶ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3

Kannada: ವೀರ ಕನ್ನಡಿಗ: ತನು ಕನ್ನಡ, ಮನ(ನೆ) ಕನ್ನಡ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.