ಬೀಜೋಪಚಾರದಿಂದ ರೋಗ ನಿಯಂತ್ರಣ ಸಾಧ್ಯ

Team Udayavani, Jun 25, 2019, 3:00 AM IST

bijopacha

ಚಿಕ್ಕಬಳ್ಳಾಪುರ: ಬಿತ್ತನೆಗೂ ಮೊದಲು ಜೈವಿಕ ಗೊಬ್ಬರಗಳೊಂದಿಗೆ ಸೂಕ್ತ ರೀತಿಯಲ್ಲಿ ಬೀಜೋಪಚಾರ ಮಾಡುವುದರಿಂದ ಸಾರಜನಕದ ಬಳಕೆ ಶೇ.10-15 ರಷ್ಟು ಕಡಿಮೆ ಮಾಡಬಹುದು. ಜೊತೆಗೆ ಬಿತ್ತನೆ ಬೀಜದ ಮೂಲಕ ಹರಡುವ ರೋಗಗಳನ್ನು ನಿಯಂತ್ರಿಸಿ ರೈತರು ಹೆಚ್ಚು ಇಳುವರಿ ಪಡೆಯಬಹುದು ಎಂದು ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ.ಬಿ.ಗಾಯತ್ರಿ ತಿಳಿಸಿದರು.

ಕೃಷಿ ವಿಶ್ವದ್ಯಾನಿಲಯ ಬೆಂಗಳೂರು ವ್ಯಾಪಿಆರ್‌ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದತ್ತು ಗ್ರಾಮ ಯೋಜನೆ ಅಡಿಯಲ್ಲಿ ಜಿಲ್ಲೆಯ ಬ್ರಾಹ್ಮಣದಿನ್ನೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ತೊಗರಿ ಬೆಳೆಯಲ್ಲಿ ಸಮಗ್ರ ಬೆಳೆ ಪದ್ಧತಿಯ ಮುಂಚೂಣಿ ಪ್ರಾತ್ಯಕ್ಷಿಕೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಣ್ಣಿನ ಫ‌ಲವತ್ತತೆ ಕ್ಷೀಣ: ಬೀಜೋಪಚಾರದ ಬಗ್ಗೆ ರೈತರಲ್ಲಿ ಅರಿವು ಇಲ್ಲದ ಪರಿಣಾಮ ಭೂಮಿಗೆ ಹೆಚ್ಚಿನ ರಸಗೊಬ್ಬರಗಳನ್ನು ಸುರಿಯುತ್ತಿರುವುದರಿಂದ ಮಣ್ಣಿನ ಫ‌ಲವತ್ತತೆ ಕ್ಷೀಣಿಸುತ್ತಿದೆ. ಬೀಜೋಪಚಾರದ ಪದ್ಧತಿ ಪ್ರಾತ್ಯಕ್ಷಿಕೆ ಮೂಲಕ ಬಿತ್ತನೆಗೆ ಮುಂಚೆ ಪ್ರತಿ ಎಕರೆಗೆ 200 ಗ್ರಾಂ ರೈಜೋಬೀಯಂ ಹಾಗೂ 200 ಗ್ರಾಂ ರಂಜಕ ಕರಗಿಸುವ ಬ್ಯಾಕ್ಟೀರಿಯಾಗಳನ್ನು ಒಳಗೊಂಡ ಜೈವಿಕ ಗೊಬ್ಬರಗಳೊಂದಿಗೆ ಸೂಕ್ತ ರೀತಿಯಲ್ಲಿ ಬೀಜೋಪಚಾರ ಮಾಡುವುದರಿಂದ ರೈತರಿಗೆ ಉತ್ತಮ ಇಳುವರಿ ಜೊತೆಗೆ ಬೆಳೆಗೆ ಬರುವ ರೋಗಗಳನ್ನು ನಿಯಂತ್ರಿಸಬಹುದು ಎಂದರು.

ಈ ಸಂದರ್ಭದಲ್ಲಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ವಿಜ್ಞಾನಿಯಾದ ಸಿಂಧು ಕೆ.ವಿ.ದತ್ತು, ಕಾರ್ಯಕ್ರಮದ ಸಹಾಯಕಿ ಜಿ.ಆರ್‌.ಅರುಣಾ, ಕ್ಷೇತ್ರ ಸಹಾಯಕರಾದ ಹರೀಶ್‌ ಮತ್ತು ಗ್ರಾಮದ ಬ್ರಾಹ್ಮಣದಿನ್ನೆ ರೈತರು ಉಪಸ್ಥಿತರಿದ್ದರು.

ಬೀಜೋಪಚಾರದಿಂದ ರೋಗ ನಿರೋಧಕ: ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿಯಾದ ಡಾ.ದೇವರಾಜ ಮಾತನಾಡಿ, ದತ್ತುಗ್ರಾಮ ಯೋಜನೆಯಲ್ಲಿ ವಿತರಿಸುತ್ತಿರುವ ತೊಗರಿ ತಳಿ (ಬಿ.ಆರ್‌.ಜಿ-5) ಮಧ್ಯಮಾವಧಿ ತಳಿಯಾಗಿದ್ದು 170 ರಿಂದ 180 ದಿನಗಳ ಕಾಲಾವಧಿಯನ್ನು ಹೊಂದಿದೆ ಮತ್ತು ಇದು ಸೊರಗು ನಿರೋಧಕತೆಯನ್ನು ಹೊಂದಿರುತ್ತ ಎಂದರು.

ರೈತರು ಹೆಚ್ಚಾಗಿ ಜೈವಿಕ ಗೊಬ್ಬರಗಳ ಬಳಕೆಗೆ ಆದ್ಯತೆ ನೀಡಬೇಕು. ಬೀಜೋಪಚಾರದಿಂದ ರೈತರಿಗೆ ಸಾಕಷ್ಟು ಅನುಕೂಲವಾಗಲಿದ್ದು, ಬಿತ್ತನೆ ಸಂದರ್ಭದಲ್ಲಿ ಕೃಷಿ ತಜ್ಞರ ಮಾರ್ಗದರ್ಶನ ಪಡೆದು ಬಿತ್ತನೆ ಕಾರ್ಯ ಕೈಗೆತ್ತಿಕೊಳ್ಳಬೇಕೆಂದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.