ಸರ್ವರ್‌ ಸಮಸ್ಯೆ: ತಿಂಗಳ ರೇಶನ್‌ ಕಟ್‌


Team Udayavani, Jun 25, 2019, 5:26 AM IST

RATION-CARD

ಉಡುಪಿ: ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್‌ ಸಮಸ್ಯೆಯಿಂದ ಅನ್ನಭಾಗ್ಯ ಯೋಜನೆ ಯಡಿ ಸಾಮಗ್ರಿ ಪಡೆಯಲು ಜನರು ಪರದಾಡುತ್ತಿದ್ದಾರೆ.
ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್‌ ಪದ್ಧತಿ ಅಳವಡಿಸಿ ವರ್ಷವೇ ಕಳೆದಿದೆ. ಅಂದಿನಿಂದ ಇಂದಿನ ವರೆಗೆ ಪಡಿತರ ವಿತರಣೆಯಲ್ಲಿ ಒಂದಲ್ಲ ಒಂದು ಸಮಸ್ಯೆ. ಪ್ರಾರಂಭದಲ್ಲಿ ಫ‌ಲಾನುಭವಿಗಳ ಬೆರಳಚ್ಚು ಸಮಸ್ಯೆ ಯಿತ್ತು. ಈಗ 3 ತಿಂಗಳುಗಳಿಂದ ಸರ್ವರ್‌ ಸಮಸ್ಯೆ.

ಸಮಸ್ಯೆಗಳ ಆಗರ
ನ್ಯಾಯಬೆಲೆ ಅಂಗಡಿ ಸಮಸ್ಯೆಗಳ ಆಗರವಾಗಿದೆ. ಸರಿಯಾದ ಸಮಯಕ್ಕೆ ಪಡಿತರ ಸಿಗದೆ ಜನರು ಸಿಬಂದಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಒಮ್ಮೆ ಸರ್ವರ್‌ ಸಂಪರ್ಕವನ್ನು ಕಳೆದುಕೊಂಡರೆ ಮತ್ತೆ ಸಂಪರ್ಕ ಸಾಧಿಸಲು ಅರ್ಧ ಗಂಟೆಯಾದರೂ ಬೇಕು. ಕೆಲವೊಮ್ಮೆ ದಿನಪೂರ್ತಿ ಸಂಪರ್ಕ ಸಿಗದೆ ಇರುವುದೂ ಇದೆ.

ಪಡಿತರ ಸಾಮಗ್ರಿ ಸಿಗುತ್ತಿಲ್ಲ
ಸರ್ವರ್‌ ದೋಷದಿಂದ ಗ್ರಾಹಕರು ದಿನಪೂರ್ತಿ ಸರತಿಯಲ್ಲಿ ಕಾಯಬೇಕಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4ರ ವರೆಗೆ ಕಾದರೂ ಸಾಮಗ್ರಿಗಳು ಸಿಗುತ್ತಿಲ್ಲ. ಇದರಿಂದಾಗಿ ದಿನಗೂಲಿ ಕಾರ್ಮಿಕರ ದಿನವೇ ವ್ಯರ್ಥ ವಾಗುತ್ತಿದೆ. ಆಯಾ ತಿಂಗಳ ಪಡಿತರ ಆಯಾ ತಿಂಗಳಲ್ಲಿ ಪಡೆಯಬೇಕಾಗಿರುವುದರಿಂದ ಸಾರ್ವಜನಿಕರು ಪಡಿತರದಿಂದ ವಂಚಿತವಾಗುತ್ತಿದ್ದಾರೆ.

ಸಿಬಂದಿಗೆ ಸಂಕಷ್ಟ
ಸರ್ವರ್‌ ಸಮಸ್ಯೆಯಿಂದ ಪಡಿತರ ಸಾಮಗ್ರಿಯನ್ನು ನಿಗದಿ ಸಮಯದೊಳಗೆ ನೀಡಲು ಸಾಧ್ಯವಾಗುತ್ತಿಲ್ಲ. ಸರ್ವರ್‌ ಸಮಸ್ಯೆಯಿಂದ ನಿತ್ಯ 15 ಜನರಿಗೆ ಪಡಿತರ ವಿತರಿಸಲು ಸಾಧ್ಯವಾಗುತ್ತಿಲ್ಲ.

ಅಧಿಕಾರಿಗಳ ಪರದಾಟ!
ಸರ್ವರ್‌ ಸಮಸ್ಯೆಯಿಂದ ಹೆಸರು ಸೇರ್ಪಡೆಯಾಗಿ ಬಂದಿರುವ ಹೊಸ ಕಾರ್ಡ್‌ ಪ್ರತಿಯನ್ನು ಮುದ್ರಿಸಲು ಅಧಿಕಾರಿಗಳು ಪರದಾಡುತ್ತಿದ್ದಾರೆ. ತಾಲೂಕು ಕಚೇರಿಯಲ್ಲಿ ಸಾರ್ವಜನಿಕರು ನಿತ್ಯ ಗಂಟೆಗಟ್ಟಲೆ ಕಾಯಬೇಕಾಗಿದೆ. ಫ‌ಲಾನುಭವಿಗಳು ಹೊಸ ಕಾರ್ಡ್‌ ಪ್ರತಿ ಸಿಗದೆ ಇರುವುದರಿಂದ ರೇಶನ್‌ನಿಂದ ವಂಚಿತರಾಗುತ್ತಿದ್ದಾರೆ.

ಎರಡು ತಿಂಗಳ ರೇಶನ್‌ ಸಿಕ್ಕಿಲ್ಲ!
ಪಡಿತರ ಪಡೆಯಲು ತಿಂಗಳಿಗೆ ಮೂರು ಬಾರಿ ನ್ಯಾಯಬೆಲೆ ಅಂಗಡಿಗೆ ಹೋಗಬೇಕಾಗಿದೆ. ಕೆಲಸಕ್ಕೆ ರಜೆ ಮಾಡಿ ರೇಶನ್‌ ತರುವ ಸ್ಥಿತಿ. ಸರ್ವರ್‌ ಸಮಸ್ಯೆಯಿಂದ ಎರಡು ತಿಂಗಳುಗಳಿಂದ ರೇಶನ್‌ ಸಿಕ್ಕಿಲ್ಲ.
– ಸುಚಿತ್ರಾ, ಉಪ್ಪಿನಕೋಟೆ

ರಾಜ್ಯದ ಸಮಸ್ಯೆ
ನ್ಯಾಯಬೆಲೆ ಅಂಗಡಿ ಸರ್ವರ್‌ ಸಮಸ್ಯೆ ಜಿಲ್ಲೆ ಯಲ್ಲಿ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಇದೆ.
-ಡಾ| ನಾಗರಾಜ್‌ ಎಲ್‌., ಉಪ ನಿರ್ದೇಶಕರು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಉಡುಪಿ

ಟಾಪ್ ನ್ಯೂಸ್

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.