ವರ್ಗಾವಣೆಗೆ 95,000 ಶಿಕ್ಷಕರ ಅರ್ಜಿ!
Team Udayavani, Jun 25, 2019, 5:08 AM IST
ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಶನಿವಾರ ಪೂರ್ಣಗೊಂಡಿದ್ದು, ಬರೋಬ್ಬರಿ 95 ಸಾವಿರಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನು ಕೆಲವೇ ದಿನಗಳಲ್ಲಿ ದಾಖಲಾತಿ ಪರಿಶೀಲನೆ ಹಾಗೂ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ.
ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಚಾಲನೆ ನೀಡಲಾಗಿತ್ತು. ಕಳೆದ ಬಾರಿ 72 ಸಾವಿರ ಶಿಕ್ಷಕರು ವರ್ಗಾವಣೆಗೆ ಅರ್ಜಿಗಳನ್ನು ಸಲ್ಲಿಸಿದ್ದರೂ ಕರ್ನಾಟಕ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ ತಿದ್ದುಪಡಿ ಹಾಗೂ ವಿಧಾನಸಭೆ ಚುನಾವಣೆ ಸಹಿತ ಹಲವು ಕಾರಣಗಳಿಂದಾಗಿ ಮೂರ್‍ನಾಲ್ಕು ಬಾರಿ ವೇಳಾಪಟ್ಟಿ ಪರಿಷ್ಕರಣೆಗೊಂಡಿದ್ದರೂ ವರ್ಗಾವಣೆ ಮಾತ್ರ ನಡೆದಿರಲಿಲ್ಲ.
ವರ್ಗಾವಣೆಗೆ ಅರ್ಜಿ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಟ್ಟ ಮೊದಲ ದಿನವೇ 1,300ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಜೂನ್ 24ಕ್ಕೆ 95,454 ಅರ್ಜಿಗಳು ಸಲ್ಲಿಕೆಯಾಗಿವೆ. ಘಟಕದ ಒಳಗೆ ವರ್ಗಾವಣೆ ಕೋರಿ 79,566, ವಿಭಾಗ ಹಾಗೂ ಘಟಕದಿಂದ ಹೊರಗೆ ವರ್ಗಾವಣೆ ಕೋರಿ 8,487 ಹಾಗೂ ವಿಭಾಗದ ಒಳಗೆ-ಘಟಕದ ಹೊರಗೆ ವರ್ಗಾವಣೆ ಕೋರಿ 7,401 ಅರ್ಜಿಗಳು ಸಲ್ಲಿಕೆಯಾಗಿವೆ.
ಪ್ರಾಥಮಿಕ ಶಾಲಾ ವಿಭಾಗದ ಘಟಕದ ಒಳಗೆ ವರ್ಗಾವಣೆ ಕೋರಿ 60,347, ವಿಭಾಗ ಹಾಗೂ ಘಟಕದಿಂದ ಹೊರಗೆ ವರ್ಗಾವಣೆ ಕೋರಿ 6,260, ವಿಭಾಗದ ಒಳಗೆ ಘಟಕದ ಹೊರಗೆ ವರ್ಗಾವಣೆ ಕೋರಿ 624 ಅರ್ಜಿಗಳು ಸಲ್ಲಿಕೆಯಾಗಿವೆ. ಪ್ರೌಢಶಾಲಾ ವಿಭಾಗದಿಂದ ಘಟಕದ ಒಳಗೆ 19,219, ವಿಭಾಗ ಹಾಗೂ ಘಟಕದಿಂದ ಹೊರಗೆ 3,380 ಮತ್ತು ಕೋರಿಕೆ ವರ್ಗಾವಣೆ ಅಡಿ 3,358 ಅರ್ಜಿಗಳು ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.