ಬಂಟ್ಸ್ ಅಸೋಸಿಯೇಶನ್ ಪುಣೆ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ
Team Udayavani, Jun 25, 2019, 3:26 PM IST
ಪುಣೆ: ಬಂಟ್ಸ್ ಅಸೋಸಿಯೇಶನ್ ಪುಣೆ ವತಿಯಿಂದ ಜೂ. 21ರಂದು ಹಡಪ್ಸ ರ್‌ನ ಅಮರ್ ಕಾಟೇಜ್ ಕ್ಲಬ್ ಹೌಸ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಂಘದ ಅಧ್ಯಕ್ಷ ಆನಂದ್ ಶೆಟ್ಟಿ ಮಿಯ್ನಾರ್ ಅವರು ದೀಪ ಪ್ರಜ್ವಲಿಸಿ ಯೋಗ ದಿನಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆನಂದ್ ಶೆಟ್ಟಿ ಅವರು ಮಾತನಾಡಿ, ಪ್ರತೀ ವರ್ಷ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಮ್ಮ ಸಂಘದ ಮೂಲಕ ಆಚರಿಸುತ್ತಾ ಬಂದಿದ್ದೇವೆ. ಇದು ಕೇವಲ ಒಂದು ದಿವಸದ ಆಚರಣೆಗೆ ಸೀಮಿತವಾಗದೆ ದಿನನಿತ್ಯ ನಾವು ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕಾಗಿದೆ. ನಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡರೆ ನಾವು ರೋಗಮುಕ್ತರಾಗಿ ಜೀವಿಸಬಹುದಲ್ಲದೆ ನಮ್ಮ ಜೀವನ ಶೈಲಿಯೂ ಬದಲಾಗಿ ಮಾನಸಿಕ ಸಂತೋಷ, ನೆಮ್ಮದಿಯೂ ನಮ್ಮದಾಗುತ್ತದೆ. ಇಂದಿನ ನಮ್ಮ ಒತ್ತಡದ ಬದುಕಿನೆಡೆಯಲ್ಲಿ ಯೋಗವು ಅನಿವಾರ್ಯವಾಗಿದೆ. ಪ್ರತಿಯೊಬ್ಬರೂ ದಿನದ ಸ್ವಲ್ಪ ಸಮಯವನ್ನು ಯೋಗಕ್ಕಾಗಿ ಮೀಸಲಿಡಬೇಕಾಗಿದೆ ಎಂದರು.
ಕೆಮೂ¤ರು ಸುಧಾಕರ ಶೆಟ್ಟಿ ಯೋಗಾ ಭ್ಯಾಸಗಳನ್ನು ಮಾಡಿಸಿ, ಮಾಹಿತಿಗಳನ್ನು ನೀಡುತ್ತಾ ಅಷ್ಟಾಂಗ ಯೋಗದ ಅಂಗಗಳಾದ ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧಾರಣ, ಧ್ಯಾನ ಮತ್ತು ಸಮಾಧಿ ಇದರ ಅನುಸಂಧಾನವನ್ನು ದೈನಂದಿನ ನಮ್ಮ ಜೀವನದಲ್ಲಿ ಮಾಡಿಕೊಂಡರೆ ಶಾರೀರಿಕ ಶುದ್ಧಿಯಾಗುವುದಲ್ಲದೆ, ನಿಯಮಿತ ಯೋಗಾ ಭ್ಯಾಸದಿಂದ ನಮ್ಮ ಶರೀರದ ಆಂತರಿಕ ಹಾಗೂ ಬಾಹ್ಯ ಶುದ್ಧಿಗೊಂಡು ಆರೋಗ್ಯವಂತರಾಗಿ ಬಾಳಬಹುದಾಗಿದೆ ಎಂದರು.
ಲತಾ ಸುಧಾಕರ ಶೆಟ್ಟಿ ಹಾಗೂ ಸುಮನಾ ಸೀತಾರಾಮ ಹೆಗ್ಡೆ ಪ್ರಾರ್ಥಿಸಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೀಪ ಅರವಿಂದ ರೈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರಿಗೆ ವಂದಿಸಿದರು. ಭಾರತೀಯ ಯೋಗ ಸಂಸ್ಥಾನ (ರಿ )ದೆಹಲಿ ಇದರ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಉಪಸ್ಥಿತರಿದ್ದರು. ವಿವಿಧ ಯೋಗ ವ್ಯಾಯಾ ಮಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ ಇನ್ನಿತರ ಯೋಗಳನ್ನು ಮಾಡಿಸಲಾಯಿತು.
ಮಾಜಿ ಅಧ್ಯಕ್ಷರಾದ ನಾರಾಯಣ ಶೆಟ್ಟಿ, ಜಯ ಶೆಟ್ಟಿ ಮಿಯ್ನಾರ್, ಪ್ರಧಾನ ಕಾರ್ಯದರ್ಶಿ ಅರವಿಂದ ರೈ, ಕೋಶಾಧಿಕಾರಿ ದಿನೇಶ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೀಪಾ ಎ. ರೈ, ಪದಾಧಿಕಾರಿಗಳಾದ ಉಷಾ ಉÇÉಾಸ್ ಶೆಟ್ಟಿ, ಲತಾ ಸುಧಾಕರ ಶೆಟ್ಟಿ, ಸುಮನಾ ಸೀತಾರಾಮ ಹೆಗ್ಡೆ, ಪ್ರತೀûಾ ಎ. ಶೆಟ್ಟಿ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಸುಧಾ ಎನ್. ಶೆಟ್ಟಿ, ಸರೋಜಿನಿ ಜೆ. ಶೆಟ್ಟಿ, ಮಲ್ಲಿಕಾ ಆನಂದ್ ಶೆಟ್ಟಿ, ಯುವ ವಿಭಾಗದ ನಮ್ರತಾ ಜಯ ಶೆಟ್ಟಿ, ನಿಖೀಲ್ ಎನ್. ಶೆಟ್ಟಿ, ಅಕ್ಷಿತ್ ಅರವಿಂದ್ ರೈ ಉಪಸ್ಥಿತರಿದ್ದರು. ಲಘು ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ಭಾರತೀಯ ಯೋಗ ಸಂಸ್ಥಾನದ ಸದಸ್ಯರು ಉಪಸ್ಥಿತರಿದ್ದು ಸಹಕಾರ ನೀಡಿದರು. ಅವರನ್ನು ಪುಷ್ಪಗುತ್ಛ ನೀಡಿ ಗೌರವಿಸಲಾಯಿತು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ : ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.