ಆಷಾಢದ ಗಾಳಿ ಬೀಸಲು…
ಹಗಲಲ್ಲಿ ಬೆಳಕಿಲ್ಲ, ರಾತ್ರಿ ನಿದ್ದೆಯಿಲ್ಲ!
Team Udayavani, Jun 26, 2019, 5:00 AM IST
ಆಷಾಢದ ನೆಪದಲ್ಲಿ ಕುಣಿದಾಡಿಕೊಂಡೇ ತೌರಿಗೆ ಬಂದ ನವವಧುವಿನ ಸಂಭ್ರಮ ಎರಡೇ ದಿನಗಳಿಗೆ ಮುಗಿದು ಹೋಗುತ್ತಿತ್ತು. ತವರು ಮನೆಯ ನೂರು ಸಂಭ್ರಮದ ಮಧ್ಯೆಯೂ ಗಂಡ ನೆನಪಾಗುತ್ತಿದ್ದ. ಅವನೊಂದಿಗೆ ಜಗಳವಾಡಿದ್ದು, ಠೂ ಬಿಟ್ಟಿದ್ದು, ತಲೆ ಮೇಲೆ ಮೊಟಕಿದ್ದು, ಸ್ನಾನದ ಮನೆಯಲ್ಲಿ ಸರಸವಾಡಿದ್ದು, ಒಂದೇ ತಟ್ಟೆಯಲ್ಲಿ ಹಂಚಿಕೊಂಡು ತಿಂದದ್ದು ನೆನಪಾಗಿ ಬಿಡುತ್ತಿತ್ತು. ಪರಿಣಾಮ, ಕೆನ್ನೆಯಲ್ಲಿನ್ನೂ ಅರಿಶಿನದ ಗುರುತು ಉಳಿಸಿಕೊಂಡಿರುತ್ತಿದ್ದ ನವವಧುವಿಗೆ- ಹಗಲಲ್ಲಿ ಬೆಳಕೇ ಇರುತ್ತಿರಲಿಲ್ಲ. ರಾತ್ರಿ ನಿದ್ರೆ ಬರುತ್ತಿರಲಿಲ್ಲ!
ಗೆಳೆಯ, ಯುದ್ಧ ಗೆದ್ದವನ ಸಂಭ್ರಮದಲ್ಲಿದ್ದ. ಏನಾಯೊ¤à, ಟ್ವೆಂಟಿ-20 ಕ್ರಿಕೆಟ್ ಮುಗಿದು ಆಗಲೇ ತಿಂಗಳಾಗ್ತಾ ಬಂತು. ಹಾಗಾಗಿ ಈಗ ನೀನು ಬೆಟ್ ಗೆದ್ದಿರೋಕೆ ಸಾಧ್ಯವಿಲ್ಲ. ಹಾಗಿದ್ರೂ ನಿಂತನಿಂತಲ್ಲೇ ಥೈಥೈ ಕುಣಿತಾ ಇದೀಯಲ್ಲ, ಏನ್ಸಮಾಚಾರ?’ ಅಂದರೆ- ಒಳಗೊಳಗೇ ನಗುತ್ತ ಹೀಗೆಂದ: ಗೊತ್ತಿದೆಯಲ್ವ ನಿಂಗೂ? ಆಷಾಢ ಶುರುವಾಗಿದೆ. ಅದೇ ಕಾರಣಕ್ಕೆ ಹೆಂಡತಿ ಹೋಗಿ ಅಣ್ಣನ ಮನೆ ಸೇರ್ಕೊಂಡಿದಾಳೆ. ಅವಳ ಜೊತೆ ದಿನಕ್ಕೆ ಒಂದೆರಡಲ್ಲ, ನಲವತ್ತೆಂಟು ಬಾರಿ ಫೋನ್ ಮಾಡಿ ಮಾತಾಡ್ತಿದ್ದೆ ನಿಜ. ಆದ್ರೂ ಸಮಾಧಾನ ಆಗ್ತಾ ಇರಲಿಲ್ಲ.
ನಿನ್ನೆ ಸಂಜೆ ಸೀದಾ ಅವಳ ಅಣ್ಣನ ಮನೆಗೇ ಹೋದೆ. ಸಂಪ್ರದಾಯದ ನೆಪದಲ್ಲಿ ಅವರು ಅರ್ಧಗಂಟೆ ವಾಕ್ ಹೋಗೋಕೂ ಬಿಡಲ್ಲ ಅನ್ನಿಸ್ತು. ಅದಕ್ಕೇ ಉಪಾಯ ಮಾಡೆª, ದೇವಸ್ಥಾನಕ್ಕೆ ಬರುವಂತೆ ಅವಳಿಗೆ ಐಡಿಯಾ ಕೊಟ್ಟೆ. ಅವಳೂ ಖುಷಿಯಿಂದ ಒಪ್ಪಿದ್ಲು. ದೇವಸ್ಥಾನದಲ್ಲಿ ಐದು ನಿಮಿಷ ಇದ್ದು ಸೀದಾ ಮಲ್ಟಿಪ್ಲೆಕ್ಸ್ ಸಿನಿಮಾಕ್ಕೆ ಹೋದ್ವಿ. ಅಲ್ಲಿ ಇಬ್ರೂ ಪರಸ್ಪರ ಭೇಟಿಯಾಗಿದ್ದು ಆಯ್ತು. ಬೇಟೆ ಆಡಿದ್ದೂ ಆಯ್ತು! ನಮ್ಮ ಮದುವೆಯಾಗಿ ಇನ್ನೂ ಹದಿನೈದು ದಿನ ಕಳೆದಿಲ್ಲ. ಹಾಗಿರುವಾಗ ಸಂಪ್ರದಾಯದ ನೆಪದಲ್ಲಿ ದೂರ ಮಾಡೋಕೆ ನೋಡಿದ್ರೆ ನಾವಾದ್ರೂ ಹೇಗೆ ಇರೋಕಾಗ್ತದೆ ಹೇಳು. ಈ ಆಷಾಢದ ಮನೆ ಹಾಳಾಗ!’ ಹೀಗಂದವನೇ, ಗೆಳೆಯ ಮಾತು ನಿಲ್ಲಿಸಿದ.
ಕೊನೆಯಿರದ ಪ್ರಶ್ನೆಗಳು
ಆಷಾಢದಲ್ಲಿ ಹೊಸ ಮನೆ ಖರೀದಿಸಬಾರದು, ಮನೆ ಬದಲಿಸಬಾರದು, ವಾಹನ ಕೊಳ್ಳಬಾರದು, ಆಸ್ತಿ ಮಾರಬಾರದು, ಮನೆ ನಿರ್ಮಾಣಕ್ಕೆ ಪಾಯ ಹಾಕಬಾರದು, ಮದುವೆಯೂ ಸೇರಿದಂತೆ ಯಾವೊಂದು ಶುಭ ಕಾರ್ಯವೂ ಆಷಾಢ ಮಾಸದಲ್ಲಿ ನಡೆಯಬಾರದು’ ಎಂಬಿತ್ಯಾದಿ ಮಾತುಗಳೆಲ್ಲ ಸಾಲು ದೀಪದ ಬೆಳಕಿನಂತೆ ಕಣ್ಮುಂದೆ ಬಂದು ಹೋದವು. ಆಗಲೇ ಹುಟ್ಟಿಕೊಂಡದ್ದು ಈ ಪ್ರಶ್ನೆಗಳ ಗುತ್ಛ: ಅಲ್ಲ, ಆಷಾಢದಲ್ಲಿ ಅದ್ಯಾಕೆ ಮದುವೆಯಾಗಬಾರದು? ಯಾಕೆ ಹೊಸ ಮನೆ ಕಟ್ಟಿಸಬಾರದು, ಖರೀದಿಸಬಾರದು? ಗಂಡ- ಹೆಂಡತಿ ಜೊತೆಯಾಗಿದ್ದರೆ ಈ ಆಷಾಢಕ್ಕೇನು ಕಷ್ಟ? ಈ ಮಾಸದಲ್ಲಿ ಕೂಡ ಅದದೇ ಭಾನುವಾರ, ಸೋಮವಾರ, ಮಂಗಳವಾರ ವಗೈರೆಗಳೇ ಇದ್ದರೂ ಹೊಸದಾಗಿ ವಾಹನ ಖರೀದಿಸಬಾರದು ಎಂದರೆ ಏನರ್ಥ?
ಇಂಥದೊಂದು ಯೋಚನೆ ಬಂದೊಡನೆ ನಗು ಬಂತು. ಹೌದಲ್ಲವಾ? ಉಳಿದೆಲ್ಲ ಸಂದರ್ಭಗಳಲ್ಲೂ ಆಕಾಶ ಶುಭ್ರವಾಗಿರುತ್ತದೆ. ಸ್ವತ್ಛವಾಗಿರುತ್ತದೆ. ಆದರೆ, ಆಷಾಢ ಮಾಸ ಬಂತೆಂದರೆ ಸಾಕು, ಆಕಾಶವೆಂಬೋ ಆಕಾಶ ಕೂಡ ಸ್ವಲ್ಪ ಮಂಕಾಗುತ್ತದೆ, ಮಸುಕಾದಂತೆ ಕಾಣಿಸುತ್ತದೆ. ರೈಲಿನ ಎಂಜಿನ್ನಿಂದ ಹೊರಟ ಹೊಗೆಯಂತೆ ಕಾಣುವ ಕಡುಗಪ್ಪು ಮೋಡಗಳು ಆಕಾಶದ ಚೆಲುವನ್ನೇ ಹಾಳು ಮಾಡಿರುತ್ತವೆ. ಈ ಮೋಡಗಳಲ್ಲಿರುವ ಅಷ್ಟೂ ಮಳೆ ನೀರನ್ನು ಸುರಿಸಿ, ದುಗುಡ, ದುಮ್ಮಾನವನ್ನು ಕಳೆದುಕೊಳ್ಳಬೇಕೆಂಬ ಬಯಕೆ ಆಗಸಕ್ಕಿರುತ್ತದೆ. ಅದಕ್ಕೇ ಹೇಳಿದ್ದು- ಆಷಾಢ ಎಂದರೆ ಖನ್ನತೆ. ಆಷಾಢ ಎಂದರೆ ಯಾತನೆ, ಆಷಾಢ ಎಂದರೆ ದುಗುಡ ಮತ್ತು ಆಷಾಢವೆಂದರೆ ವಿರಹ! ಹೀಗೆ ಅಂದುಕೊಂಡಾಕ್ಷಣ ಮನಸ್ಸು ಮತ್ತೆ ಅದೇ ಹಳೆಯ ಪ್ರಶ್ನೆಗೇ ಬಂದು ನಿಲ್ಲುತ್ತದೆ: ಆಷಾಢದಲ್ಲಿ ಗಂಡ-ಹೆಂಡತಿಯನ್ನು ದೂರ ಮಾಡ್ತಾರಲ್ಲ ಯಾಕೆ?’
ಹಿರಿಯರ ಜಾಣತನವನ್ನೇ ಅಂದಾಜು ಮಾಡಿಕೊಂಡು ಹೇಳುವುದಾದರೆ- ಮದುವೆಗಳ ಸೀಜನ್ ಆರಂಭವಾಗುವುದೇ ಜೇಷ್ಠ ಮಾಸದಲ್ಲಿ. ಆ ತಿಂಗಳು- ಮದುವೆ, ನಂತರದ ಒಂದಿಷ್ಟು ಶಾಸ್ತ್ರ, ದೇವಸ್ಥಾನ, ಗೆಳೆಯರ ಮನೆಗಳಿಗೆ ಯಾತ್ರೆ ಇತ್ಯಾದಿಗಳಲ್ಲೇ ಮುಗಿದು ಹೋಗುತ್ತದೆ. ಈ ಮಧ್ಯೆಯೇ ಹೊಸ ಬದುಕಿನ ರಸಮಯ ಕ್ಷಣಗಳ’ ರುಚಿ ಗಂಡ-ಹೆಂಡತಿ, ಇಬ್ಬರಿಗೂ ಆಗಿರುತ್ತದೆ. ಪರಿಣಾಮ, ಇಬ್ಬರೂ ನಿನ್ನ ಅರೆಗಳಿಗೆಯೂ ನಾನು ಬಿಟ್ಟಿರಲಾರೆ’ ಎಂಬ ಉನ್ಮಾದದ ಸ್ಥಿತಿಗೆ ಬಂದಿರುತ್ತಾರೆ. ಹೀಗಿದ್ದಾಗಲೇ ಕಳ್ಳನಂತೆ, ಒಂದೊಂದೇ ಹೆಜ್ಜೆ ಇಡುತ್ತ ಬಂದೇ ಬಿಡುತ್ತದೆ ಆಷಾಢ.
ಒಂದು ವೇಳೆ ಹಸಿಬಿಸಿ ಆಸೆಗಳಿಂದ ಹುಚ್ಚಾದ ನವದಂಪತಿಗಳನ್ನು ಈ ತಿಂಗಳು ಜೊತೆಯಾಗಿರಲು ಬಿಟ್ಟರೆ, ಬಿರು ಬೇಸಿಗೆಯ ಕಾಲಕ್ಕೆ ಹೆರಿಗೆಯಾಗಿ ಬಿಡುವ ಸಾಧ್ಯತೆಗಳಿರುತ್ತವೆ. ಬಿಸಿಲಿನ ತಾಪಕ್ಕೆ ಕೆಲವೊಮ್ಮೆ ದಿಢೀರನೆ ಜ್ವರ ಬಂದುಬಿಡುವ ಸಾಧ್ಯತೆ ಇರುವುದರಿಂದ ಈ ಮಧ್ಯೆ ಗರ್ಭದ ಭಾರ, ಹೆರಿಗೆಯ ನೋವು, ಬಾಣಂತನದ ಬಾಧೆಯನ್ನು ತಪ್ಪಿಸಬೇಕೆಂಬ ಆಶಯದಿಂದಲೇ ಒಂದು ತಿಂಗಳ ಮಟ್ಟಿಗೆ ಗಂಡ-ಹೆಂಡತಿಯನ್ನು ತಾತ್ಕಾಲಿಕವಾಗಿ ದೂರ ಇರಿಸಲಾಗುತ್ತದೆ.
ಒಲವಿನೋಲೆಗಳ ವಿನಿಮಯ
ಯಾರು ಏನೇ ಹೇಳಲಿ, ಹಳೆಯ ದಿನಗಳ ಆಚರಣೆಯೇ ಚೆಂದವಿತ್ತು. ಆಗೆಲ್ಲ- ಆಷಾಢ ಇನ್ನೂ ನಾಲ್ಕೆçದು ದಿನವಿದೆ ಎನ್ನುವಾಗಲೇ ಗಂಡನ ಮನೆಯಿಂದ ತಂಗಿಯನ್ನು ಕರೆ ತರಲು ಅಣ್ಣ ತಯಾರಿ ನಡೆಸುತ್ತಿದ್ದ. ಈ ಕಡೆ- ಆಷಾಢದಲ್ಲಿ ಅತ್ತೆ-ಸೊಸೆ ಒಂದೇ ಮನೇಲಿದ್ರೆ ಕೆಡುಕು ತಪ್ಪಿದ್ದಲ್ಲ ಎಂಬ ಹಳೆಯ ಮಾತನ್ನು ನಂಬಿ, ಸೊಸೆ ಅನ್ನಿಸಿಕೊಂಡಾಕೆ ಕೂಡ ಅಪ್ಪನ ಮನೆಗೆ ಹೊರಟು ನಿಲ್ಲುತ್ತಿದ್ದಳು.
ತಮಾಷೆಯೆಂದರೆ, ಹೀಗೆ- ಕುಣಿದಾಡಿಕೊಂಡೇ ತೌರಿಗೆ ಬಂದವಳ ಸಂಭ್ರಮ ಎರಡೇ ದಿನಗಳಿಗೆ ಮುಗಿದು ಹೋಗುತ್ತಿತ್ತು. ತವರು ಮನೆಯ ನೂರು ಸಂಭ್ರಮದ ಮಧ್ಯೆಯೂ ಗಂಡ ನೆನಪಾಗುತ್ತಿದ್ದ. ಅವನೊಂದಿಗೆ ಜಗಳವಾಡಿದ್ದು, ಠೂ ಬಿಟ್ಟಿದ್ದು, ತಲೆ ಮೇಲೆ ಮೊಟಕಿದ್ದು, ಸ್ನಾನದ ಮನೆಯಲ್ಲಿ ಸರಸವಾಡಿದ್ದು, ಒಂದೇ ತಟ್ಟೆಯಲ್ಲಿ ಹಂಚಿಕೊಂಡು ತಿಂದದ್ದು ನೆನಪಾಗಿ ಬಿಡುತ್ತಿತ್ತು. ಪರಿಣಾಮ, ಕೆನ್ನೆಯಲ್ಲಿನ್ನೂ ಅರಿಶಿನದ ಗುರುತು ಉಳಿಸಿಕೊಂಡಿರುತ್ತಿದ್ದ ನವವಧುವಿಗೆ- ಹಗಲಲ್ಲಿ ಬೆಳಕೇ ಇರುತ್ತಿರಲಿಲ್ಲ. ರಾತ್ರಿ ನಿದ್ರೆ ಬರುತ್ತಿರಲಿಲ್ಲ!
ಈ ಕಡೆ, ಗಂಡ ಅನ್ನಿಸಿಕೊಂಡವನ ಕಥೆಯೂ ಅದೇ. ಆಗೆಲ್ಲ, ತವರಿಗೆ ಹೋದವಳನ್ನು ಸಂಪರ್ಕಿಸಲು ಇದ್ದ ದಾರಿಯೆಂದರೆ ಕಾಗದ ಬರೆಯುವುದು! ಈ ಪುಣ್ಯಾತ್ಮನ ಕಾಗದವನ್ನು ಹೆಂಡತಿಯ ಮನೆಯಲ್ಲಿ ಎಲ್ಲರೂ ಓದುತ್ತಿದ್ದುದರಿಂದ ಅಲ್ಲಿ ಪೋಲ್ ಪೋಲಿಯಾಗಿ ಬರೆಯುವಂತಿರಲಿಲ್ಲ. ಕಾಗದ ಬಿಟ್ಟರೆ, ಹೆಂಡತಿಯನ್ನು ಸಂಪರ್ಕಿಸಲು ಇದ್ದ ಇನ್ನೊಂದು ದಾರಿಯೆಂದರೆ- ಎಸ್‌ಟಿಡಿ ಫೋನು! ಅವನಿಗೋ ಫೋನಿನಲ್ಲೇ ಲಲ್ಲೆಗೆರೆಯುವ, ಮುತ್ತಿಡುವ ಕಾತುರ! ಆಕೆಯ ಸುತ್ತಲೂ ಗೆಳತಿಯರ, ನೆರೆಹೊರೆಯವರ ಗುಂಪಿರುತ್ತಿತ್ತು. ಗಂಡನ ಸಂಭ್ರಮಕ್ಕೆ ದನಿಯಾಗುವ ಪರಿಸ್ಥಿತಿಯಲ್ಲಿ ಅವಳಿರುತ್ತಿರಲಿಲ್ಲ. ಇದರಿಂದ ಸಹಜವಾಗಿಯೇ ಸಿಟ್ಟಾಗುತ್ತಿದ್ದ ಗಂಡ ಮಹಾರಾಯ- ತವರಿನ ಸುಖ ಜಾಸ್ತಿ ಆಗಿರಬೇಕು, ಹಾಗಿರುವಾಗ ನನ್ನ ನೆನಪೆಲ್ಲಿ ಬರ್ತದೆ ಹೇಳು?’ ಎಂದು ಚುಚ್ಚಿ ಪತ್ರ ಬರೆಯುತ್ತಿದ್ದ!
ಮರು ಟಪಾಲಿಗೇ ಬರುತ್ತಿದ್ದ ಅವಳ ಉತ್ತರ ಹೀಗಿರುತ್ತಿತ್ತು? ತೌರ ಸುಖದೊಳಗೆನ್ನ ಮರೆತಿಹಳು ಎನ್ನದಿರಿ/ ನಿಮ್ಮ ಪ್ರೇಮವ ನೀವೇ ಒರೆಯನಿಟ್ಟು/ ನಿಮ್ಮ ನೆನಪೇ ನನ್ನ ಹಿಂಡುವುದು ಹಗಲಿನಲಿ/ ಇರುಳಿನಲಿ ಕಾಣುವುದು ನಿಮ್ಮ ಕನಸು…’
ಮೊದಲೇ ವಿರಹದ ಮಧ್ಯೆ ಬದುಕುತ್ತಿದ್ದವನಿಗೆ ಇಂಥದೊಂದು ಆದ್ರì ಭಾಷೆಯ ಪತ್ರ ಬಂದರೆ, ಮನಸು ತಡೆದೀತಾದರೂ ಹೇಗೆ? ಈತ ತಕ್ಷಣವೇ ಕೋಟಿ ಯೋಜನವಿರಲಿ ದಾಟಿ ಬರುವೆನು ಹೆಣ್ಣೆ..’ ಎಂದು ಹಾಡಿಕೊಂಡೇ ಹೆಂಡತಿಯ ಮನೆಗೆ ಬಂದುಬಿಡುತ್ತಿದ್ದ.
ಅಯ್ಯೋ, ನಿಮ್ಗೆ ಆಷಾಢ ಇಲ್ವಾ?
ಈಗ ಆಷಾಢಕ್ಕೆ ಹೆದರುವ ಗಂಡ-ಹೆಂಡಿರಿಲ್ಲ. ಅಯ್ಯೋ, ಆಷಾಢ ಇಲ್ವಾ ನಿಮ್ಗೆ? ಎಂದು ಕೇಳಿದರೆ ಆ ಬೆಡಗಿ ನಕ್ಕು- ಗೊತ್ತಲ್ಲ ನಿಮೂ. ಆಷಾಢದಲ್ಲಿ ಅತ್ತೆ- ಸೊಸೆ ಒಂದು ಮನೇಲಿ ಇರಬಾರ್ದಂತೆ. ಗಂಡ- ಹೆಂಡತಿ ಇರಬಹುದಂತೆ! ನಮ್ಮತ್ತೆ ಊರಲಿ¨ªಾರೆ. ಹಾಗಾಗಿ ನಮ್ಗೆ ಆಷಾಢವಿಲ್ಲ’ ಅನ್ನುತ್ತಾಳೆ. ಇನ್ನು ಕೆಲವರು- ಅಯ್ಯೋ ಹೋಗ್ರಿ, ಒಂದಿಡೀ ತಿಂಗಳು ಯಾರು ಒಂಟಿಯಾಗಿ ಬದುಕುತ್ತಾರೆ? ನಮಗೆ ಆಷಾಢವೂ ಬೇಡ, ಗೀಷಾಡವೂ ಬೇಡ’ ಎಂದು ಉತ್ತರ ಕೊಟ್ಟು ದಂಗು ಬಡಿಸುತ್ತಾರೆ. ಈಗಿನ ದಂಪತಿಯ ಪೈಕಿ ಹೆಚ್ಚಿನವರು ಎರಡು ವರ್ಷದವರೆಗೂ ಮಗು ಬೇಡ ಎಂದು ಮೊದಲೇ ನಿರ್ಧರಿಸುವುದರಿಂದ ಆಷಾಢದಲ್ಲಿ ಒಂದಾದರೆ ಮುಂದೆ ಕಷ್ಟ ಆಗುತ್ತೆ ಎಂಬ ಮಾತೇ ಅರ್ಥ ಕಳೆದುಕೊಂಡಿದೆ.
ಪರಿಣಾಮ ಏನಾಗಿದೆಯೆಂದರೆ, ಈಗ, ಆಷಾಢ ಎಂದರೆ ಅವನಿ(ಳಿ)ಲ್ಲದೆ ಇರಬೇಕಿಲ್ಲ ಎಂಬ ಸಂಕಟವಿಲ್ಲ. ಇಬ್ಬರ ಬಳಿಯೂ ಮೊಬೈಲ್ ಇರುವುದರಿಂದ ಎಸ್ಟೀಡಿ ಫೋನ್ ಮಾಡುವ ಅಗತ್ಯವಿಲ್ಲ. ಪತ್ರ ಬರೆಯುವುದೇ ಇಬ್ಬರಿಗೂ ಮರೆತಿದೆಯಾದ್ದರಿಂದ ಅಕ್ಷರ ಪ್ರೀತಿಯ ರೋಮಾಂಚನ ಕೂಡ ಇಬ್ಬರಿಗೂ ಇಲ್ಲ. ಹೀಗೆ, ಬದಲಾಗಿ ಹೋದ ಕಾಲಮಾನವನ್ನು ಮರೆತು ಹೋಗುತ್ತಿರುವ ಸಂಪ್ರದಾಯವನ್ನು ಕಂಡಾಗ ಅನಿಸುವುದಿಷ್ಟೆ:
ಕಾಲಾಯ ತಸ್ಮೈ ನಮಃ
ಓ ಕರೆಂಟೇ, ಒಮ್ಮೆ ಹೋಗು ಮಾರಾಯ…
ಫಜೀತಿಯೆಂದರೆ, ಅತ್ತೆಯ ಮನೆಯಲ್ಲಿ ಹೊಸದೊಂದು ಬಗೆಯ ಸಂಕಟ ಜೊತೆಯಾಗುತ್ತಿತ್ತು. ಈತ’ ಆಗೊಮ್ಮೆ ಈಗೊಮ್ಮೆ ಅವಕಾಶ ಸಿಕ್ಕರೆ ಅವಳೊಂದಿಗೆ ಸರಸವಾಡಬೇಕು ಎಂಬ ಅವಸರದಲ್ಲಿದ್ದರೆ ಅದಕ್ಕೆ ಅವಕಾಶವೇ ಸಿಗುತ್ತಿರಲಿಲ್ಲ. ಊಟ ಬಡಿಸಲು ಅವಳೊಂದಿಗೆ ಅತ್ತೆಯೂ ಬರುತ್ತಿದ್ದುದರಿಂದ ಆಗ ಕೈ ಚಿವುಟಿ ರೋಮಾಂಚನಗೊಳ್ಳುವುದಕ್ಕೆ; ಕಣ್ಣು ಹೊಡೆದು ಖುಷಿ ಪಡುವುದಕ್ಕೆ ಆಗುತ್ತಿರಲಿಲ್ಲ. ಊಟವಾದ ನಂತರ ಹೊರಬಂದು, ಈಗ ಎರಡೇ ನಿಮಿಷದ ಮಟ್ಟಿಗೆ ಕರೆಂಟು ಹೋಗಿಬಿಟ್ಟರೆ ಸಾಕು, ತಬ್ಬಿ ಮುದ್ದಾಡಬಹುದು ಎಂದು ಇಬ್ಬರೂ ಅಂದುಕೊಳ್ಳುತ್ತಿದ್ದರು ನಿಜ. ಆದರೆ, ಅವತ್ತು ದರಿದ್ರದ ಕರೆಂಟು ಹೋಗುತ್ತಲೇ ಇರಲಿಲ್ಲ! ಇಂಥ ಗಡಿಬಿಡಿ, ಸಿಡಿಮಿಡಿ, ಆಸೆ, ಕಾತುರ ಹಾಗೂ ವಿರಹದ ಮಧ್ಯೆಯೇ ಆಷಾಢ ಕಳೆದು ಹೋಗುತ್ತಿತ್ತು. ಸ್ವಾರಸ್ಯ ಏನೆಂದರೆ- ಈ ಒಂದು ತಿಂಗಳ ಅವಯಲ್ಲಿ ಅವಳಿಗೆ ಇವನ ಮೇಲೆ, ಇವಳಿಗೆ ಅವನ ಮೇಲೆ ಅತೀ’ ಅನ್ನುವಷ್ಟು ಪ್ರೀತಿ ಹುಟ್ಟುತ್ತಿತ್ತು. ಎರಡು ಕುಟುಂಬಗಳ ನಡುವೆ ಇದ್ದ ಸಂಬಂಧದ ಬಂಧ ಗಟ್ಟಿಯಾಗುತ್ತಿತ್ತು!
– ಚೈತ್ರಾ ವೈಶಾಖ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.